Homeಚಳವಳಿಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

- Advertisement -
- Advertisement -

ಭೋಪಾಲ್‌ನ ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಸ್ಥಾವರದ 40 ವರ್ಷಗಳಷ್ಟು ಹಳೆಯದಾದ 358 ಮೆಟ್ರಿಕ್ ಟನ್ ವಿಷಕಾರಿ ತ್ಯಾಜ್ಯವನ್ನು ದಹಿಸುವುದನ್ನು ವಿರೋಧಿಸಿ ಧಾರ್ ಜಿಲ್ಲೆಯ ಪಿತಾಂಪುರ್ ಕೈಗಾರಿಕಾ ಪಟ್ಟಣದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೆ, ಮಧ್ಯಪ್ರದೇಶ ಸರ್ಕಾರವು ಕೈಗಾರಿಕಾ ಪಟ್ಟಣದ ಆತಂಕಗಳು, ಕಳವಳಗಳು ಮತ್ತು ಭಾವನೆಗಳನ್ನು ನ್ಯಾಯಾಲಯಕ್ಕೆ ತಿಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಪಿತಾಂಪುರ್ ಪ್ರತಿಭಟನೆ

“ನಮ್ಮ ಸರ್ಕಾರವು ಸಾರ್ವಜನಿಕ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ. ಕಳೆದ ತಿಂಗಳ ಹೈಕೋರ್ಟ್ ಆದೇಶದ ಅನ್ವಯ ಯೂನಿಯನ್ ಕಾರ್ಬೈಡ್ ಘಟಕದ ವಿಷಕಾರಿ ತ್ಯಾಜ್ಯವನ್ನು ಪಿತಾಂಪುರದ ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಸಾಗಿಸಲಾಗಿದೆ. ಜನವರಿ 6 ರಂದು ಮುಂದಿನ ವಿಚಾರಣೆಯ ದಿನಾಂಕದ ಮೊದಲು ನಾಲ್ಕು ವಾರಗಳಲ್ಲಿ ತ್ಯಾಜ್ಯವನ್ನು ಪಿತಾಂಪುರದಲ್ಲಿರುವ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಸೌಲಭ್ಯಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲು ನಮಗೆ ನಿರ್ದೇಶಿಸಲಾಗಿದೆ” ಎಂದು ಮಧ್ಯಪ್ರದೇಶದ ಸಿಎಂ ಡಾ. ಮೋಹನ್ ಯಾದವ್ ಹೇಳಿದ್ದಾರೆ.

ಸಾರ್ವಜನಿಕರ ಕಾಳಜಿ ಮತ್ತು ಆತಂಕಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ನ್ಯಾಯಾಲಯದ ಆದೇಶದವರೆಗೆ ಈ ವಿಷಯದಲ್ಲಿ (ತ್ಯಾಜ್ಯವನ್ನು ಸುಡುವ ಬಗ್ಗೆ) ಯಾವುದೇ ಚಟುವಟಿಕೆ ಮಾಡದಿರಲು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಪಿತಾಂಪುರ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರವು ಯೋಜಿತ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಸ್ಥಳೀಯ ನಿವಾಸಿಗಳ ಸಂಪೂರ್ಣ ಕಾಳಜಿ, ಭಾವನೆಗಳು ಮತ್ತು ಆತಂಕಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸುತ್ತದೆ. ಮುಂದಿನ ಕ್ರಮಕ್ಕಾಗಿ ಮುಂದಿನ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತದೆ ಎಂದು ಸಿಎಂ ಹೇಳಿದ್ದಾರೆ. ಶುಕ್ರವಾರ ತಡರಾತ್ರಿ ಭೋಪಾಲ್‌ನಲ್ಲಿ ಈ ವಿಷಯದ ಕುರಿತು ಸರ್ಕಾರದ ಉನ್ನತ ಅಧಿಕಾರಿಗಳ ಸುದೀರ್ಘ ತುರ್ತು ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಅವರು ಈ ಬಗ್ಗೆ ಹೇಳಿದ್ದಾರೆ.

2004 ರ ಡಿಸೆಂಬರ್ 3 ರಂದು ಭೋಪಾಲ್‌ನಿಂದ (ಯೋಜಿತ ವಿಲೇವಾರಿಗಾಗಿ) ವಿಷಕಾರಿ ತ್ಯಾಜ್ಯವನ್ನು ನಾಲ್ಕು ವಾರಗಳಲ್ಲಿ ಸ್ಥಳಾಂತರಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ 2004 ರ ಅರ್ಜಿಯ ವಿಚಾರಣೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಜನವರಿ 6 ರಂದು ನಡೆಸಲಿದೆ.

ಭೋಪಾಲ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದ ತುರ್ತು ಸಭೆಯ 11 ಗಂಟೆಗಳ ನಂತರ, 358 ಟನ್ ವಿಷಕಾರಿ ತ್ಯಾಜ್ಯವನ್ನು ಸುಡಲು ಯೋಜಿಸಲಾಗಿರುವ ಸಂಸ್ಕರಣೆ-ಶೇಖರಣೆ-ವಿಲೇವಾರಿ ಸ್ಥಾವರದ (ಟಿಎಸ್‌ಡಿಎಫ್) ಹೊರಗೆ ಸ್ಥಳೀಯ ನಿವಾಸಿಗಳಿಂದ ಕಲ್ಲು ತೂರಾಟ ನಡೆದಿದೆ ಎಂದು ಶನಿವಾರ ಬೆಳಿಗ್ಗೆ ವರದಿಯಾಗಿತ್ತು.

“ಬಹುಶಃ ಜನವರಿ 2 ರಂದು ಬೆಳಿಗ್ಗೆ ಭೋಪಾಲ್‌ನಿಂದ ಪಿತಾಮ್‌ಪುರದ ಟಿಎಸ್‌ಡಿಎಫ್‌ಗೆ ತ್ಯಾಜ್ಯವನ್ನು ಸಾಗಿಸಿದ ಬಗ್ಗೆ ಕೆಲವು ವದಂತಿಗಳ ಹಿನ್ನಲೆ, ತಾರ್ಪುರ ಗ್ರಾಮದ 100 ಕ್ಕೂ ಹೆಚ್ಚು ನಿವಾಸಿಗಳು ಸ್ಥಾವರದ ಹೊರಗೆ ಕಲ್ಲು ತೂರಿದ್ದಾರೆ. ಜೊತೆಗೆ ಶನಿವಾರ ಬೆಳಿಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರ ಕಣ್ಣಿಗೆ ಮೆಣಸಿನ ಪುಡಿ ಎರಚಲು ಪ್ರಯತ್ನಿಸಿದ್ದಾರೆ” ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆದಾಗ್ಯೂ, ಪೊಲೀಸರು ಮಹಿಳೆಯರು ಸೇರಿದಂತೆ ಗುಂಪನ್ನು ಬೆನ್ನಟ್ಟಿದ್ದು, ಆಕ್ರೋಶಗೊಂಡ ಗ್ರಾಮಸ್ಥರನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಇಂದು ಸಂಜೆಯ ನಂತರ ಈ ವಿಷಯದ ಬಗ್ಗೆ ಪ್ರಕರಣ ದಾಖಲಿಸಲಾಗುವುದು” ಎಂದು ಪಿತಾಂಪುರ ಪಟ್ಟಣದಲ್ಲಿ ಮೊಕ್ಕಾಂ ಹೂಡಿರುವ ಅವರುತಿಳಿಸಿದ್ದಾರೆ. ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಧಾರ್ ಜಿಲ್ಲಾಡಳಿತದಿಂದ ಪಿತಾಂಪುರ ಪಟ್ಟಣದ ಟಿಎಸ್‌ಡಿಎಫ್ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಲ್ಲದೆ, ಶುಕ್ರವಾರ ಪಿತಾಂಪುರ ಬಂದ್ ಕರೆ ವೇಳೆ ಪಿತಾಂಪುರ ಪಟ್ಟಣದಲ್ಲಿ ಪ್ರತಿಭಟನಾಕಾರರು ಸಾರ್ವಜನಿಕ ಗೊಂದಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಐದು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ಗಳಲ್ಲಿ ಒಂದು ಪ್ರಕರಣ, ಸಾರ್ವಜನಿಕ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಾಹುತಿಗೆ ಯತ್ನಿಸಿ ಸುಟ್ಟ ಗಾಯಗಳಿಗೆ ಒಳಗಾದ ಘಟನೆಗೆ ಸಂಬಂಧಿಸಿದೆ. “ಆ ಘಟನೆಯಲ್ಲಿ ನಡೆಸಲಾಗಿರುವ ತನಿಖೆಯಲ್ಲಿ ವ್ಯಕ್ತಿಗಳಿಗೆ ಬೆಂಕಿ ಹೊತ್ತಿಸಿದ್ದು ಮೂರನೇ ವ್ಯಕ್ತಿ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಏತನ್ಮಧ್ಯೆ, ಇಂದೋರ್ ಪ್ರದೇಶದ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಶನಿವಾರ ಪಿತಾಂಪುರದ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಪ್ರಮುಖ ನಾಗರಿಕರ ಜೊತೆಗೆ ಸುಮಾರು 45 ನಿಮಿಷಗಳ ಕಾಲ ಸಭೆ ನಡೆಸಿದ್ದು, ರಾಜ್ಯದ ಮುಖ್ಯಮಂತ್ರಿಯ ಸಂದೇಶವನ್ನು ರವಾನಿಸಿದ್ದಾರೆ. ಯೋಜಿತ ತ್ಯಾಜ್ಯ ದಹನದ ಬಗ್ಗೆ ಜನರ ಕುಂದುಕೊರತೆಗಳು ಮತ್ತು ಕಳವಳಗಳನ್ನು ಜನವರಿ 6 ರಂದು ಹೈಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದು, ಮುಂದಿನ ನ್ಯಾಯಾಲಯದ ನಿರ್ದೇಶನದವರೆಗೆ, TSDF ನಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಏನೂ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಧಾರ್ ಪ್ರದೇಶವು ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ಮತ್ತು ಇಂದೋರ್ ನಗರದಿಂದ 30 ಕಿಮೀ ದೂರದಲ್ಲಿರುವ ಪಿತಾಂಪುರ್ ಮಧ್ಯಪ್ರದೇಶದ ಪ್ರಮುಖ ಕೈಗಾರಿಕಾ ಪಟ್ಟಣವಾಗಿದೆ. ಈ ಪಟ್ಟಣದಲ್ಲಿ 700 ಕಾರ್ಖಾನೆಗಳು (ಅವುಗಳಲ್ಲಿ ಹೆಚ್ಚಿನವು ಆಟೋಮೊಬೈಲ್ ಕ್ಷೇತ್ರಕ್ಕೆ ಸಂಬಂಧಿಸಿವೆ) ಇದ್ದು ಮತ್ತು ಸುಮಾರು 1.75 ಲಕ್ಷ ಜನಸಂಖ್ಯೆಯನ್ನು ಹೊಂದಿದೆ.

ಇದನ್ನೂಓದಿ:  ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...