Homeಮುಖಪುಟಪ್ರಧಾನಿ ಮೋದಿ ಪ್ರಧಾನ ಸಲಹೆಗಾರ, ಮಾಜಿ ಐಎಎಸ್ ಅಧಿಕಾರಿ ಪಿ.ಕೆ. ಸಿನ್ಹಾ ರಾಜೀನಾಮೆ

ಪ್ರಧಾನಿ ಮೋದಿ ಪ್ರಧಾನ ಸಲಹೆಗಾರ, ಮಾಜಿ ಐಎಎಸ್ ಅಧಿಕಾರಿ ಪಿ.ಕೆ. ಸಿನ್ಹಾ ರಾಜೀನಾಮೆ

ದೆಹಲಿಯ ಅಥವಾ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ನಂತಹ ಸಾಂವಿಧಾನಿಕ ಹುದ್ದೆಗೆ ಸಿನ್ಹಾ ಅವರನ್ನು ನರೇಂದ್ರ ಮೋದಿ ಸರ್ಕಾರವು ಪರಿಗಣಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. 

- Advertisement -
- Advertisement -

ಕಳೆದ ಒಂದೂವರೆ ವರ್ಷದ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಧಾನ ಸಲಹೆಗಾರರಾಗಿ ನೇಮಕಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಪಿ.ಕೆ. ಸಿನ್ಹಾ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಿನ್ಹಾ ಅವರ ಕಚೇರಿ ದೃಢಪಡಿಸಿದೆ.

ರಾಜೀನಾಮೆ ನೀಡಲು ಯಾವುದೇ ಕಾರಣಗಳನ್ನು ಕೆ.ಪಿ.ಸಿನ್ಹಾ ಅವರ ಕಚೇರಿ ತಿಳಿಸಿಲ್ಲ. “ಪಿ.ಕೆ. ಸಿನ್ಹಾ ಅವರು ಮಾರ್ಚ್ 15 ರಂದು ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ” ಎಂದು ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನೊಬ್ಬ ಅಧಿಕಾರಿ ಸಿನ್ಹಾ ರಾಜೀನಾಮೆ ನೀಡಲು ಅವರ ಆರೋಗ್ಯ ಸ್ಥಿತಿಯೇ ಕಾರಣ ಎಂದಿದ್ದಾರೆ. “ಅವರು ಕೆಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈಗ ಇರುವಂತಹ ಹೆಚ್ಚಿನ ಒತ್ತಡದ ಕೆಲಸದಿಂದ ದೂರವಿರುವುದು ಉತ್ತಮ ಎಂದು ಪರಿಗಣಿಸಿ ರಾಜೀನಾಮೆ ನೀಡಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ದೆಹಲಿಯ ಅಥವಾ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ನಂತಹ ಸಾಂವಿಧಾನಿಕ ಹುದ್ದೆಗೆ ಸಿನ್ಹಾ ಅವರನ್ನು ನರೇಂದ್ರ ಮೋದಿ ಸರ್ಕಾರವು ಪರಿಗಣಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

1977 ರ ಬ್ಯಾಚ್‌ನ ಉತ್ತರ ಪ್ರದೇಶದ ಕೇಡರ್ ಅಧಿಕಾರಿಯಾಗಿದ್ದ ಸಿನ್ಹಾ, ಐಎಎಸ್ ಇತಿಹಾಸದಲ್ಲಿ ಮೂರು ಬಾರಿ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ ಏಕೈಕ ವ್ಯಕ್ತಿಯಾಗಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಮೊದಲ ಅಧಿಕಾರಾವಧಿಯಲ್ಲಿ ಅವರು ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅದಕ್ಕೂ ಮೊದಲು ಅವರು ವಿದ್ಯುತ್ ಮತ್ತು ಸರಬರಾಜು ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿದ್ದರು. 2019 ರಲ್ಲಿ ಸಿನ್ಹಾ ನಿವೃತ್ತರಾದಾಗ, ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ ಅವರಿಗೆ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ವಿಶೇಷ ಹುದ್ದೆಯನ್ನು ರಚಿಸಲಾಗಿತ್ತು.

ಸೆಪ್ಟೆಂಬರ್ 2019 ರ ಆದೇಶದ ಪ್ರಕಾರ, ಎಲ್ಲಾ ಸಚಿವಾಲಯಗಳು, ಇಲಾಖೆಗಳು, ಏಜೆನ್ಸಿಗಳು ಮತ್ತು ಸಂಸ್ಥೆಗಳಿಗೆ ಸಂಬಂಧಿಸಿದ ನೀತಿ ವಿಚಾರಗಳು ಮತ್ತು ವಿಷಯಗಳನ್ನು ಸಿನ್ಹಾ ನೋಡಿಕೊಂಡಿದ್ದರು. ಸಿನ್ಹಾ ಅವರಿಗೆ ಕ್ಯಾಬಿನೆಟ್ ಸ್ಥಾನ ನೀಡಿಲ್ಲ. ಸಿನ್ಹಾ ಅವರು ಅಧಿಕೃತ ಶ್ರೇಣಿಯಿಲ್ಲದೆ ಕೆಲಸ ಮುಂದುವರಿಸಿದ್ದರು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...