Homeಮುಖಪುಟಪೂಜಾ ಸ್ಥಳಗಳ ಕಾಯ್ದೆ ಸಂಬಂಧ ಹೊಸ ಅರ್ಜಿ ಸಲ್ಲಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ!

ಪೂಜಾ ಸ್ಥಳಗಳ ಕಾಯ್ದೆ ಸಂಬಂಧ ಹೊಸ ಅರ್ಜಿ ಸಲ್ಲಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ!

- Advertisement -
- Advertisement -

ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಸ್ಥಳದ ಧಾರ್ಮಿಕ ಸ್ವರೂಪವನ್ನು ಅದೇ ಸ್ಥಿತಿಯಲ್ಲಿ ಕಾಪಾಡಿಕೊಳ್ಳಬೇಕೆಂದು ಆದೇಶಿಸುವ 1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆಯ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹಲವಾರು ಹೊಸ ಅರ್ಜಿಗಳನ್ನು ಸಲ್ಲಿಸಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. ಪೂಜಾ ಸ್ಥಳಗಳ ಕಾಯ್ದೆ

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಇಬ್ಬರು ನ್ಯಾಯಾಧೀಶರ ಸಂಯೋಜನೆಯಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ, ಈ ಹಿಂದೆ ಮೂವರು ನ್ಯಾಯಾಧೀಶರ ಪೀಠವು ವಿಚಾರಣೆ ನಡೆಸಿದ ಬಾಕಿ ಉಳಿದಿರುವ ನಿಗದಿತ ಅರ್ಜಿಗಳನ್ನು ವಿಚಾರಣೆಯಲ್ಲಿ ಕೈಗೆತ್ತಿಕೊಳ್ಳಲಾಗುವುದಿಲ್ಲ ಎಂದು ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ಅದನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗದಿರಬಹುದು” ಎಂದು ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರ ಅರ್ಜಿ ವಿಚಾರಣೆಗೆ ಹೊಸ ಅರ್ಜಿಯನ್ನು ಪ್ರಸ್ತಾಪಿಸಿದಾಗ ಸಿಜೆಐ ಹೇಳಿದ್ದಾರೆ. ವಿಚಾರಣೆಯ ಆರಂಭದಲ್ಲಿ ಜೈಸಿಂಗ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದರು.

“ಅರ್ಜಿಗಳನ್ನು ಸಲ್ಲಿಸಲು ಕೂಡಾ ಮಿತಿ ಇದೆ. ಹಲವು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಲಾಗಿದೆ… ನಾವು ಅದನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗದಿರಬಹುದು” ಎಂದು ಸಿಜೆಐ ಹೇಳಿದ್ದಾರೆ. ಈ ಅರ್ಜಿಗಳಿಗೆ ಮಾರ್ಚ್‌ನಲ್ಲಿ ದಿನಾಂಕವನ್ನು ನೀಡಬಹುದು ಎಂದು ಅವರು ಹೇಳಿದ್ದಾರೆ. ಪೂಜಾ ಸ್ಥಳಗಳ ಕಾಯ್ದೆ

ಡಿಸೆಂಬರ್ 12, 2024 ರಂದು ಸುಪ್ರಿಂಕೋರ್ಟ್‌ ನೀಡಿದ್ದ ಆದೇಶದ ಮೂಲಕ, ವಾರಣಾಸಿಯ ಜ್ಞಾನವಾಪಿ, ಮಥುರಾದ ಶಾಹಿ ಈದ್ಗಾ ಮಸೀದಿ ಮತ್ತು ಸಂಭಾಲ್‌ನ ಶಾಹಿ ಜಾಮಾ ಮಸೀದಿ ಸೇರಿದಂತೆ 10 ಮಸೀದಿಗಳ ‘ಮೂಲ ಧಾರ್ಮಿಕ ಸ್ವರೂಪ’ವನ್ನು ಖಚಿತಪಡಿಸಿಕೊಳ್ಳಲು ಸಮೀಕ್ಷೆ ನಡೆಸಲು ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ಬೆಂಬಲಿಗರು ಸಲ್ಲಿಸಿದ್ದ ಸುಮಾರು 18 ಮೊಕದ್ದಮೆಗಳಲ್ಲಿ ವಿಚಾರಣೆಯನ್ನು ಪರಿಣಾಮಕಾರಿಯಾಗಿ ಸ್ಥಗಿತಗೊಳಿಸಿತು.

ಅದಕ್ಕೂ ಮೊದಲು ಸಂಭಾಲ್‌ನಲ್ಲಿ ಕೆಳ ಹಂತದ ನ್ಯಾಯಾಲಯದ ಆದೇಶದ ಮೇರೆಗೆ ನಡೆಸಲಾಗುತ್ತಿದ್ದ ಸಮೀಕ್ಷೆಯ ಸಮಯದಲ್ಲಿ ಪೊಲೀಸ್ ಗುಂಡಿನ ದಾಳಿಯಲ್ಲಿ ಅಪ್ರಾಪ್ತ ವಯಸ್ಕ ಸೇರಿದಂತೆ ಐದು ಮುಸ್ಲಿಂ ಯುವಕರು ಸಾವನ್ನಪ್ಪಿದ್ದರು. ಇದರ ನಂತರ ನಂತರ ಸುಪ್ರಿಂಕೋರ್ಟ್ ಫೆಬ್ರವರಿ 17 ರಂದು ಪರಿಣಾಮಕಾರಿ ವಿಚಾರಣೆಗೆ ಎಲ್ಲಾ ಅರ್ಜಿಗಳನ್ನು ಪಟ್ಟಿ ಮಾಡಿತ್ತು.

ಡಿಸೆಂಬರ್ 12 ರ ನಂತರ ಪೂಜಾ ಸ್ಥಳಗಳ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ, AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಸಮಾಜವಾದಿ ಪಕ್ಷದ ನಾಯಕಿ, ಕೈರಾನಾ ಸಂಸದೆ ಇಕ್ರಾ ಚೌಧರಿ ಮತ್ತು ಕಾಂಗ್ರೆಸ್ ಪಕ್ಷ ಸೇರಿದಂತೆ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ.

ಫೆಬ್ರವರಿ 14 ರಂದು ಉತ್ತರ ಪ್ರದೇಶದ ಕೈರಾನಾದ ಲೋಕಸಭಾ ಸಂಸದೆ ಚೌಧರಿ ಅವರು, ಮಸೀದಿಗಳು ಮತ್ತು ದರ್ಗಾಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಕಾನೂನು ಕ್ರಮಗಳು ಕೋಮು ಸಾಮರಸ್ಯ ಮತ್ತು ದೇಶದ ಜಾತ್ಯತೀತ ಸಂರಚನೆಗೆ ಧಕ್ಕೆ ತರುತ್ತಿವೆ ಎಂದು ಅರ್ಜಿ ಸಲ್ಲಿಸಿದ್ದು, ಈ ರೀತಿಯ ಪ್ರವೃತ್ತಿ ಹೆಚ್ಚುತ್ತಿದ್ದು, ಅದನ್ನು ತಡೆಯುವಂತೆ ಕೋರಿದ್ದಾರೆ. ಇದೇ ರೀತಿಯ ಅರ್ಜಿಯನ್ನು ಓವೈಸಿ ಅವರ ಪ್ರತ್ಯೇಕ ಅರ್ಜಿಯಲ್ಲಿ ಪರಿಶೀಲಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಒಪ್ಪಿಕೊಂಡಿತ್ತು.

1991 ರ ಕಾನೂನಿನ ನಿಬಂಧನೆಗಳ ಸಿಂಧುತ್ವದ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಬಿಜೆಪಿ ಪರ ಸಂಘಟನೆಗಳು ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೂ ಮೊದಲು, 1991 ರ ಕಾನೂನಿನ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿ ವಕೀಲ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಪ್ರಮುಖ ಅರ್ಜಿ ಸೇರಿದಂತೆ ಆರು ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿತ್ತು.

1991ರ ಈ ಕಾನೂನು ಯಾವುದೇ ಪೂಜಾ ಸ್ಥಳವನ್ನು ಪರಿವರ್ತಿಸುವುದನ್ನು ನಿಷೇಧಿಸುತ್ತದೆ ಮತ್ತು ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಹಾಗೆಯೆ ಕಾಪಾಡಿಕೊಳ್ಳಲು ಅವಕಾಶ ನೀಡುತ್ತದೆ. ಆದಾಗ್ಯೂ, ಅಯೋಧ್ಯೆಯಲ್ಲಿ ಬಾಬರಿ ಮಸೀದಿಗೆ ಸಂಬಂಧಿಸಿದ ವಿವಾದವನ್ನು ಈ ಕಾನೂನಿನ ವ್ಯಾಪ್ತಿಯಿಂದ ಹೊರಗಿಡಲಾಗಿತ್ತು.

ಇದನ್ನೂಓದಿ:  ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...