ಕಾಂಗ್ರೆಸ್, ಸಮಾಜವಾದಿ ಪಕ್ಷ (ಎಸ್‌ಪಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಎಡ ಪಕ್ಷಗಳನ್ನು ಒಳಗೊಂಡಿರುವ ಇಂಡಿಯಾ ಒಕ್ಕೂಟದ ಪಕ್ಷಗಳು, ಆಗಸ್ಟ್ 15, 1947ರಂದು ಅಸ್ತಿತ್ವದಲ್ಲಿದ್ದ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಕಾಪಾಡಿಕೊಳ್ಳಲು ಬಯಸುವ 1991 ರ ಪೂಜಾ ಸ್ಥಳಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಲಿದೆ ಎಂದು ವರದಿಯಾಗಿದೆ.
1991 ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಕೋರಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಲ್ಲಿಸಿದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿಸಿದೆ ಮತ್ತು ಫೆಬ್ರವರಿ 17 ರಂದು ಇದೇ ರೀತಿಯ ಅರ್ಜಿಗಳ ಜೊತೆಗೆ ಅವರ ಅರ್ಜಿಯನ್ನು ಆಲಿಸಲು ಕೋರ್ಟ್ ಆದೇಶಿಸಿದೆ. ಪೂಜಾ ಸ್ಥಳಗಳ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಇಂಡಿಯಾ ಒಕ್ಕೂಟದ ಪಕ್ಷಗಳು ಸುಪ್ರೀಂಕೋರ್ಟ್‌ನಲ್ಲಿ ಜಂಟಿ ಅರ್ಜಿಯನ್ನು ಸಲ್ಲಿಸಲು ಚರ್ಚೆಗಳನ್ನು ನಡೆಸುತ್ತಿದ್ದರೂ, ಅವರು ಇನ್ನೂ ಒಮ್ಮತವನ್ನು ಕಂಡುಕೊಂಡಿಲ್ಲ ಎಂದು ಬೆಳವಣಿಗೆಯ ಬಗ್ಗೆ ತಿಳಿದಿರುವ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಹೇಳಿದೆ. “ಇಂಡಿಯಾ ಒಕ್ಕೂಟದ ಪಕ್ಷಗಳ ಉನ್ನತ ನಾಯಕತ್ವವು ಇನ್ನೂ ಮಾತುಕತೆ ನಡೆಸುತ್ತಿದೆ. ಆದರೆ, ಅವರು ಪ್ರತ್ಯೇಕವಾಗಿ ಅರ್ಜಿಸಲ್ಲಿಸುವ ರೀತಿ ತೋರುತ್ತದೆ” ಎಂದು ನಾಯಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಸುಪ್ರಿಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಕಾಂಗ್ರೆಸ್ ದೃಢವಾಗಿದ್ದು, ಪಕ್ಷವು ಸಾಧ್ಯವಾದಷ್ಟು ಬೇಗ ಅರ್ಜಿಯನ್ನು ರಚಿಸುವ ಪ್ರಕ್ರಿಯೆಯಲ್ಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕೇರಳದಲ್ಲಿ ಕಾಂಗ್ರೆಸ್ ಮಿತ್ರಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಕೂಡ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.
ಪ್ರಧಾನಮಂತ್ರಿ ಪಿ.ವಿ. ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯನ್ನು ತಂದಿತು. ರಾಮಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ಸಂಸತ್ತು ಇದನ್ನು ಅಂಗೀಕರಿಸಿತ್ತು. ಮುಂದಿನ ವಾರ ಪಕ್ಷವು ಸುಪ್ರೀಂಕೋರ್ಟ್‌ಗೆ ತೆರಳಲಿದೆ ಎಂದು ಎಂದು ಸಮಾಜವಾಗಿ ಪಕ್ಷದ ಮೂಲಗಳು ತಿಳಿಸಿವೆ.
ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಆರಾಧನಾ ಸ್ಥಳಗಳ ಕಾಯಿದೆಯ ಬಗ್ಗೆ ಪಕ್ಷದ ಬದ್ಧತೆಯನ್ನು ಒತ್ತಿಹೇಳಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಇಂಡಿಯಾ ಒಕ್ಕೂಟದ ಮತ್ತೊಂದು ಪಕ್ಷವಾದ ಆರ್‌ಜೆಡಿ ರಾಜ್ಯಸಭಾ ಸಂಸದ ಮನೋಜ್ ಝಾ ಅವರು 1991 ರ ಕಾಯಿದೆಯನ್ನು ಜಾರಿಗೊಳಿಸುವಂತೆ ಕೋರಿ ಡಿಸೆಂಬರ್‌ನಲ್ಲಿ ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಪಕ್ಷವು ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯಲ್ಲಿದೆ ಎಂದು ಮೂಲಗಳು ತಿಳಿಸಿದ್ದು, ಈ ಬಗ್ಗೆ ಸಿಪಿಐ(ಎಂ) ಕೂಡ ಪ್ರತ್ಯೇಕ ಅರ್ಜಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ
ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ


