Homeಕರ್ನಾಟಕಸಿಎಎ ತಂದು ಬಿಜೆಪಿ ಮಹಾನ್‌ ತಪ್ಪು ಮಾಡಿದ್ದು, ಈಗ ಸರಿಪಡಿಸಲು ಹೆಣಗಾಡುತ್ತಿದೆ : ಸಿದ್ದರಾಮಯ್ಯ

ಸಿಎಎ ತಂದು ಬಿಜೆಪಿ ಮಹಾನ್‌ ತಪ್ಪು ಮಾಡಿದ್ದು, ಈಗ ಸರಿಪಡಿಸಲು ಹೆಣಗಾಡುತ್ತಿದೆ : ಸಿದ್ದರಾಮಯ್ಯ

- Advertisement -
- Advertisement -

ಸಿಎಎ ಹಾಗೂ ಎನ್‌ಆರ್‌ಸಿ ಇವು ಅಸಂವಿಧಾನಿಕವಾದುವು, ಹಾಗಾಗಿ ಬಿಜೆಪಿ ಪಕ್ಷ ತಾವು ಮಾಡುತ್ತಿರುವ ತಪ್ಪಿಗೆ ಜನಬೆಂಬಲ ಪಡೆದು, ಅದನ್ನೇ ಸರಿ ಎಂದು ಸಾಬೀತುಪಡಿಸಲು ಸಾರ್ವಜನಿಕ ಸಭೆ, ಸಮಾರಂಭ ಮಾಡುತ್ತಿದೆ. ಈ ಕಾಯ್ದೆಯಿಂದಾಗಿ ಸಂವಿಧಾನದ ಮೂಲ ಆಶಯಗಳಾದ ಸಮಾನತೆ ಮತ್ತು ಜಾತ್ಯಾತೀತತೆಗೆ ಧಕ್ಕೆಯಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹತ್ತಿಕ್ಕಿ ಸರ್ವಾಧಿಕಾರಿ ಆಡಳಿತ ಜಾರಿಯಲ್ಲಿದೆ. ದೇಶಾದ್ಯಂತ ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕರ ಮೇಲೆ ಸರ್ಕಾರಿ ಪ್ರಯೋಜಿತ ದಾಳಿಗಳು ಕಾಡ್ಗಿಚ್ಚಿನಂತೆ ಹಬ್ಬುತ್ತಿದೆ. ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ. ಜನತೆ ಭಯದಲ್ಲಿ ದಿನ ದೂಡುವಂತಹ ಪರಿಸ್ಥಿತಿ ಇದೆ ಎಂದಿದ್ದಾರೆ.

ಹಿಂಗಾರು ಮಳೆ ನಷ್ಟದಿಂದಾಗಿ ಸುಮಾರು 45 ತಾಲೂಕುಗಳು ಭೀಕರ ಬರ ಎದುರಿಸುತ್ತಿವೆ. ಈವರೆಗೆ ಬರಪರಿಹಾರಕ್ಕಾಗಿ ನಯಾಪೈಸೆ ಹಣ ಬಿಡುಗಡೆಯಾಗಿಲ್ಲ. ರಾಜ್ಯದ ಪಾಲಿನ ಹಲವು ಅನುದಾನಗಳು ಬಂದಿಲ್ಲ. ಕೇಂದ್ರ ತಾನು ದಿವಾಳಿಯಾಗುವ ಜೊತೆಗೆ ರಾಜ್ಯಗಳನ್ನು ದಿವಾಳಿ ಎಬ್ಬಿಸುತ್ತಿದೆ. ಮುಂದಿನ ವರ್ಷದಲ್ಲಿ ನಮ್ಮ ರಾಜ್ಯದಿಂದ ಸಂಗ್ರಹವಾದ ವಿವಿಧ ತೆರಿಗೆಗಳಲ್ಲಿ ರಾಜ್ಯದ ಪಾಲಿನ ಅನುದಾನ ಕನಿಷ್ಠ ರೂ.5000 ಕೋಟಿ ಕಡಿತವಾಗಲಿದೆ. ಹೀಗಾದರೆ ಅಭಿವೃದ್ಧಿ ಕಾರ್ಯಗಳು ನಡೆಯುವುದಾದರೂ ಹೇಗೆ? ನನ್ನದೇ ಕ್ಷೇತ್ರದಲ್ಲಿ ಸಂಪುಟ ಅನುಮೋದನೆ ಪಡೆದ ರೂ.500 ಕೋಟಿ ವೆಚ್ಚದ ಕೆರೂರು ಏತ ನೀರಾವರಿ ಯೋಜನೆ ಹಣವಿಲ್ಲದೆ ಮೂಲೆಸೇರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಈಗಲೂ ಮನಸ್ಸು ಮಾಡಿದರೆ ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆದು ಮಹದಾಯಿ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಬಗೆಹರಿಸಬಹುದು. ಆದರೆ ಈ ಇಚ್ಛಾಶಕ್ತಿಯೇ ನಮ್ಮ‌ ಪ್ರಧಾನಿಗಳಲ್ಲಿ ಇಲ್ಲ. ಮಹದಾಯಿ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ ಒಂದೇ ಒಂದು ಮಾತಾದರೂ ಈಡೇರಿದೆಯೇ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...