Homeಕರೋನಾ ತಲ್ಲಣಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡವುದಿಲ್ಲ!: ದ್ವಂದ್ವ ಮೂಡಿಸಿದ ICMR ಅಧ್ಯಯನ!

ಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡವುದಿಲ್ಲ!: ದ್ವಂದ್ವ ಮೂಡಿಸಿದ ICMR ಅಧ್ಯಯನ!

ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ 34 ರೋಗಿಗಳು, ಅಂದರೆ 13.6% ಜನರು ಸಾವನ್ನಪ್ಪಿದ್ದರೆ, ಪ್ಲಾಸ್ಮಾ ಚಿಕಿತ್ಸೆ ಪಡೆಯದ 31 ರೋಗಿಗಳು, ಅಂದರೆ 14.6% ಜನರು ಸೋಂಕಿಗೆ ಬಲಿಯಾಗಿದ್ದಾರೆ.

- Advertisement -
- Advertisement -

ಪ್ಲಾಸ್ಮಾ ಚಿಕಿತ್ಸೆಯ ಬಗ್ಗೆ ICMR ನಡೆಸಿದ ವಿಶ್ವದ ಅತಿದೊಡ್ಡ ಟ್ರಯಲ್‌ನ ಫಲಿತಾಂಶದ ಪ್ರಕಾರ, ’ಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡುವುದಿಲ್ಲ” ಎಂದು ತಿಳಿದುಬಂದಿದೆ. ಇದು ಜಗತ್ತಿನಾದ್ಯಂತ ನೀತಿನಿರೂಪಕರು, ವೈದ್ಯರು, ರೋಗಿಗಳು ಮತ್ತು ಅವರ ಕುಟುಂಬದವರ ಭರವಸೆಯನ್ನು ಹುಸಿಗೊಳಿಸಿದೆ.

PLACID ಎಂದು ಕರೆಯಲ್ಪಡುವ ಈ ಪ್ರಯೋಗವನ್ನು 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 39 ಆಸ್ಪತ್ರೆಗಳಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR) ಆಶ್ರಯದಲ್ಲಿ ನಡೆಸಲಾಯಿತು.

ಅಧ್ಯಯನವು, ಉಸಿರಾಟದ ತೊಂದರೆ ಇರುವ ಮತ್ತು ಆಮ್ಲಜನಕದ ಶುದ್ಧಿಯ ಮಟ್ಟವು 93% ಕ್ಕಿಂತ ಕಡಿಮೆ ಇರುವ 464 ಮಧ್ಯಮ ಮಟ್ಟದ ಅನಾರೋಗ್ಯದ ರೋಗಿಗಳನ್ನು ಒಳಗೊಂಡಿತ್ತು. ಅವುಗಳಲ್ಲಿ, 235 ಜನರಿಗೆ ರೋಗದ ವಿರುದ್ಧ ಪ್ರತಿಕಾಯಗಳನ್ನು ಹೊಂದಿರುವವರಿಗೆ, ಚೇತರಿಸಿಕೊಂಡವರಿಂದ ಸಂಗ್ರಹಿಸಿದ ’CP’ (convalescent plasma) ನೀಡಲಾಯಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಉಳಿದ 229 ಮಂದಿ ಕೇವಲ ಗುಣಮಟ್ಟದ ಆರೈಕೆಯನ್ನು ಪಡೆದರು. ಸ್ವತಂತ್ರ ಗುಂಪಿನಲ್ಲಿದ್ದವರಿಗೆ 24 ಗಂಟೆಗಳ ಅಂತರದಲ್ಲಿ 200 ಮಿಲಿ ಪ್ಲಾಸ್ಮಾವನ್ನು ಎರಡು ಪ್ರಮಾಣದಲ್ಲಿ ವರ್ಗಾಯಿಸಲಾಯಿತು. ಸ್ವತಂತ್ರ ಮತ್ತು ನಿಯಂತ್ರಣ ಗುಂಪುಗಳನ್ನು 28 ದಿನಗಳ ನಂತರ ಅಧ್ಯಯನ ಮಾಡಲಾಯಿತು.

ಪ್ರಿಪ್ರಿಂಟ್ ಸರ್ವರ್‌ನಲ್ಲಿ ಬಿಡುಗಡೆಯಾದ ಫಲಿತಾಂಶಗಳು, ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ 34 ರೋಗಿಗಳು, ಅಂದರೆ 13.6% ಜನರು ಸಾವನ್ನಪ್ಪಿದ್ದರೆ, ಪ್ಲಾಸ್ಮಾ ಚಿಕಿತ್ಸೆ ಪಡೆಯದ 31 ರೋಗಿಗಳು, ಅಂದರೆ 14.6% ಜನರು ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ, ಪ್ರತಿ ಗುಂಪಿನಲ್ಲಿಯೂ 17 ರೋಗಿಗಳು ತೀವ್ರ ರೋಗದ ಮಟ್ಟವನ್ನು ಹೊಂದಿದ್ದಾರೆ.

“CP ಬಳಕೆಯು ಉಸಿರಾಟದ ತೊಂದರೆ ಮತ್ತು ಆಯಾಸದ ಪರಿಹಾರವನ್ನು ಸುಧಾರಿಸುತ್ತದೆ ಎಂದು ತೋರುತ್ತದೆಯಾದರೂ, ಇದು 28 ದಿನಗಳ ಮರಣವನ್ನು ಕಡಿಮೆ ಮಾಡಲು ಅಥವಾ ಮಧ್ಯಮ ಮಟ್ಟದ ಕೊರೊನಾ ರೋಗಿಗಳಲ್ಲಿ ತೀವ್ರ ಕಾಯಿಲೆಗೆ ಒಳಗಾಗುವುದನ್ನು ತಡೆಯಲಿಲ್ಲ” ಎಂಬುದನ್ನು ಅಧ್ಯಯನವು ತಿಳಿಸಿದೆ ಎಂದು ICMR ನ ವಿಜ್ಞಾನಿ ಡಾ.ಅಪರ್ಣ ಮುಖರ್ಜಿ ಹೇಳಿದರು.

ಇದನ್ನೂ ಓದಿ:  ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ಹಲವಾರು ರಾಜ್ಯ ಸರ್ಕಾರಗಳು ಪ್ಲಾಸ್ಮಾ ಚಿಕಿತ್ಸೆಯನ್ನು ಸಕ್ರಿಯವಾಗಿ ಉತ್ತೇಜಿಸುತ್ತಿರುವುದರಿಂದ ಈ ಸಂಶೋಧನಾ ಫಲಿತಾಂಶಗಳು ಪ್ರಸ್ತುತ ಸಾಂಕ್ರಾಮಿಕದಲ್ಲಿ ಮಹತ್ವವನ್ನು ಪಡೆದುಕೊಳ್ಳುತ್ತವೆ.

ಏನಿದು ಪ್ಲಾಸ್ಮಾ ಚಿಕಿತ್ಸೆ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಆರಂಭಗೊಂಡು, ಹಲವು ಕಡೆ ಯಶಸ್ವಿಯೂ ಆಗಿದೆ.

ಅದಾಗ್ಯೂ,‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಸ್ವತಃ ICMR ಕರೆ ನೀಡಿತ್ತು. ದೇಶ-ವಿದೇಶಗಳಲ್ಲಿ ಪ್ಲಾಸ್ಮಾ ಚಿಕಿತ್ಸೆಯಿಂದ ನೂರಾರು ಜನ ರೋಗಿಗಳು ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಭಾರತದಲ್ಲಿಯೂ ಸಹ ಸರ್ಕಾರವೇ ಪ್ಲಾಸ್ಮಾ ಚಿಕಿತ್ಸೆಗೆ ಪ್ರೋತ್ಸಾಹವನ್ನು ನೀಡಿತ್ತು. ಕರ್ನಾಟಕದಲ್ಲಿಯೂ ಪ್ಲಾಸ್ಮಾ ಚಿಕಿತ್ಸೆಯನ್ನು ತೃಪ್ತಿದಾಯಕವಾಗಿದೆ, ಹಾಗಾಗಿ ಅದನ್ನು ಮುಂದುವರೆಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀ ರಾಮುಲು ಹೇಳಿದ್ದರು.

ರಾಷ್ಟ್ರೀಯ ಕೋವಿಡ್ -19 ಕ್ಲಿನಿಕಲ್ ಮ್ಯಾನೇಜ್‌ಮೆಂಟ್ ಪ್ರೋಟೋಕಾಲ್ ಇದನ್ನು ತನಿಖಾ ಚಿಕಿತ್ಸೆಯಾಗಿ ಅನುಮತಿಸಿದ ನಂತರ ಕೆಲವರು ಪ್ಲಾಸ್ಮಾ ಬ್ಯಾಂಕುಗಳನ್ನು ಸ್ಥಾಪಿಸಿದ್ದರು.


ಇದನ್ನೂ ಓದಿ: ಕೊರೊನಾ ಸೋಂಕಿತರ ಮೇಲಿನ ಪ್ಲಾಸ್ಮಾ ಥೆರಪಿ : ಫಲಿತಾಂಶ ತೃಪ್ತಿದಾಯಕವೆಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...