ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಮತ್ತು ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಈ ಕುರಿತು ಸಿಎಂ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ, ಸಚಿವಾಲಯವೂ ಸೇರಿದಂತೆ ರಾಜ್ಯದಾದ್ಯಂತ ನಡೆಯುವ ಎಲ್ಲಾ ಸರ್ಕಾರಿ ಸಭೆ–ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದೂ ಸಿಎಂ ತಿಳಿಸಿದ್ದಾರೆ.
ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಮತ್ತು ಮುಖ್ಯಮಂತ್ರಿಗಳ, ಸಚಿವರುಗಳ ಸಭೆಗಳಲ್ಲಿ, ಸರ್ಕಾರದ ಎಲ್ಲಾ ಸಭೆ – ಕಾರ್ಯಕ್ರಮಗಳಲ್ಲಿ ಸರ್ಕಾರಿ… pic.twitter.com/PT92bJXfXW
— Siddaramaiah (@siddaramaiah) October 31, 2025
ಕನ್ನಡ ರಾಜ್ಯೋತ್ಸವ ಆಚರಿಸಲಿರುವ ಬಿಎಚ್‌ಇಎಲ್ ಆಡಳಿತ ಮಂಡಳಿ : ಉದ್ಯೋಗಿಗಳ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್


