Homeಕರ್ನಾಟಕಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಬಳಕೆ; ರಾಜ್ಯದ 52 ಹೋಟೆಲ್‌ಗಳ ವಿರುದ್ಧ ಕ್ರಮ - ದಿನೇಶ್ ಗುಂಡೂರಾವ್

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಬಳಕೆ; ರಾಜ್ಯದ 52 ಹೋಟೆಲ್‌ಗಳ ವಿರುದ್ಧ ಕ್ರಮ – ದಿನೇಶ್ ಗುಂಡೂರಾವ್

- Advertisement -
- Advertisement -

ರಾಜ್ಯದ 52 ಹೋಟೆಲ್‌ಗಳು ಇಡ್ಲಿ ತಯಾರಿಸಲು ಪಾಲಿಥಿನ್ ಹಾಳೆಗಳನ್ನು ಬಳಸುತ್ತಿವೆ ಎಂದು ರಾಜ್ಯ ಆಹಾರ ಸುರಕ್ಷತಾ ಇಲಾಖೆಯು ಗುರುವಾರ ಕಂಡುಹಿಡಿದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಪಾಲಿಥಿನ್, ಅದರಲ್ಲೂ ವಿಶೇಷವಾಗಿ ತೆಳುವಾದ ಹಾಳೆಗಳು ಕ್ಯಾನ್ಸರ್ ಕಾರಕವಾಗಿದ್ದು, ಹೋಟೆಲ್ ಉದ್ಯಮದಲ್ಲಿ ಅದನ್ನು ಬಳಸಲು ಸರ್ಕಾರ ಅನುಮತಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಇಡ್ಲಿ ತಯಾರಿಕೆಯಲ್ಲಿ

“ಆಹಾರ ಸುರಕ್ಷತಾ ಇಲಾಖೆಯು ಕರ್ನಾಟಕದಾದ್ಯಂತ 251 ಸ್ಥಳಗಳಲ್ಲಿ ಇಡ್ಲಿ ಮಾದರಿಗಳನ್ನು ಸಂಗ್ರಹಿಸಿತ್ತು. ಈ ಹಿಂದೆ ಬಟ್ಟೆಗಳನ್ನು ಬಳಸಿ ಇಡ್ಲಿಗಳನ್ನು ಬೇಯಿಸಲಾಗುತ್ತಿತ್ತು. ಆದರೆ ಇತ್ತೀಚೆಗೆ ಹೋಟೆಲ್‌ಗಳು ಪ್ಲಾಸ್ಟಿಕ್ ಬಳಸಲು ಪ್ರಾರಂಭಿಸಿವೆ ಎಂಬ ಮಾಹಿತಿ ನಮಗೆ ಸಿಕ್ಕಿತು. ಆದ್ದರಿಂದ ನಮ್ಮ ಅಧಿಕಾರಿಗಳು ವಿವಿಧ ಸ್ಥಳಗಳಿಗೆ ಹೋಗಿ ವಿಚಾರಣೆ ನಡೆಸಿದ್ದಾರೆ” ಎಂದು ದಿನೇಶ್ ಗುಂಡುರಾವ್ ವರದಿಗಾರರಿಗೆ ತಿಳಿಸಿದ್ದಾರೆ.

“251 ಹೋಟೆಲ್‌ಗಳಲ್ಲಿ 52 ಹೋಟೆಲ್‌ಗಳು ಪ್ಲಾಸ್ಟಿಕ್ ಬಳಸುತ್ತಿದ್ದವು. ಈ ಪ್ಲಾಸ್ಟಿಕ್ ಕ್ಯಾನ್ಸರ್ ಕಾರಕವಗಿದ್ದು, ಹೋಟೆಲ್ ಮಾಲೀಕರು ಇದನ್ನು ಎಂದಿಗೂ ಮಾಡಬಾರದಿತ್ತು. ಪ್ಲಾಸ್ಟಿಕ್‌ನಲ್ಲಿನ ಕ್ಯಾನ್ಸರ್ ಕಾರಕ ಅಂಶಗಳು ಇಡ್ಲಿಗೆ ಪ್ರವೇಶಿಸಬಹುದು” ಎಂದು ಸಚಿವರು ಹೇಳಿದ್ದಾರೆ. ಇಡ್ಲಿ ತಯಾರಿಕೆಯಲ್ಲಿ

ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಹೊಟೇಲ್‌ಗಳಿಗೆ ಸ್ಪಷ್ಟ ಸಂದೇಶವನ್ನು ರವಾನಿಸಲಾಗುವುದು ಮತ್ತು ಆಹಾರ ತಯಾರಿಕೆ ಪ್ರಕ್ರಿಯೆಯಲ್ಲಿ ಪ್ಲಾಸ್ಟಿಕ್ ಅನ್ನು ನಿಷೇಧಿಸಲಾಗುವುದು ಎಂದು ಸಚಿವ ಗುಂಡುರಾವ್‌ ಹೇಳಿದ್ದಾರೆ. “ಯಾರಾದರೂ ಪ್ಲಾಸ್ಟಿಕ್‌ನಲ್ಲಿ ಇಡ್ಲಿ ಮಾಡುತ್ತಿದ್ದರೆ ಅದನ್ನು ನಮ್ಮ ಗಮನಕ್ಕೆ ತರಬೇಕು” ಎಂದು ಅವರು ಕೇಳಿಕೊಂಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗ್ಯಾರಂಟಿಗೆ ಬಳಸಿರುವ ದಲಿತರ ಹಣ ಕೂಡಲೇ ಹಿಂದಿರುಗಿಸಬೇಕೆಂದು ದಸಂಸ ಒಕ್ಕೂಟ ಆಗ್ರಹ

ಗ್ಯಾರಂಟಿಗೆ ಬಳಸಿರುವ ದಲಿತರ ಹಣ ಕೂಡಲೇ ಹಿಂದಿರುಗಿಸಬೇಕೆಂದು ದಸಂಸ ಒಕ್ಕೂಟ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...