Homeಮುಖಪುಟ'ವಿಕ್ಟಿಮ್ ಕಾರ್ಡ್‌ ಬಳಸುತ್ತಿದ್ದಾರೆ' : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ದೆಹಲಿ...

‘ವಿಕ್ಟಿಮ್ ಕಾರ್ಡ್‌ ಬಳಸುತ್ತಿದ್ದಾರೆ’ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ದೆಹಲಿ ಪೊಲೀಸ್

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರಾನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ ಉರ್ ರೆಹಮಾನ್ ಅವರಿಗೆ ಜಾಮೀನು ನೀಡುವುದನ್ನು ವಿರೋಧಿಸಿ ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

ಅರ್ಜಿದಾರರು ದೀರ್ಘ ಜೈಲುವಾಸದ ಆಧಾರದ ಮೇಲೆ ‘ವಿಕ್ಟಿಮ್ ಕಾರ್ಡ್‌’ ಬಳಸಲು ಪ್ರಯತ್ನಿಸುತ್ತಿದ್ದಾರೆ. ವಿಚಾರಣೆ ವಿಳಂಬವಾಗಲು ಅವರೇ ಕಾರಣ ಎಂದು ಪೊಲೀಸರು ಹೇಳಿದ್ದಾರೆ.

ವಿಚಾರಣೆ ವಿಳಂಬದ ಆಧಾರದಲ್ಲಿ ಜಾಮೀನು ನೀಡಲು ಯಾವುದೇ ಕಾರಣಗಳಿಲ್ಲ. ವಿಚಾರಣೆ ಆರಂಭವಾಗುವುದನ್ನು ಅರ್ಜಿದಾರರು ಉದ್ದೇಶಪೂರ್ವಕವಾಗಿ ತಡೆಯುತ್ತಿದ್ದಾರೆ ಎಂದಿದ್ದಾರೆ.

ಅರ್ಜಿದಾರರ ಪ್ರಯತ್ನವು ಭಾರತಾದ್ಯಂತ ಸಶಸ್ತ್ರ ದಂಗೆಯನ್ನು ಪ್ರಚೋದಿಸುವುದಾಗಿತ್ತು

ಆರೋಪಿಗಳ ನಡವಳಿಕೆ, ಅವರ ವಿರುದ್ಧ ಲಭ್ಯವಿರುವ ನಿರಾಕರಿಸಲಾಗದ ಮತ್ತು ಸ್ಪಷ್ಟವಾದ ಸಾಕ್ಷ್ಯಗಳು ಅವರು ನ್ಯಾಯಾಲಯದಿಂದ ಯಾವುದೇ ಜಾಮೀನು ಪರಿಹಾರವನ್ನು ಪಡೆಯಲು ಅನರ್ಹರು ಎಂಬುವುದನ್ನು ಸೂಚಿಸುತ್ತದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

“ಅರ್ಜಿದಾರರು ರೂಪಿಸಿದ, ಪೋಷಿಸಿದ ಮತ್ತು ಕಾರ್ಯಗತಗೊಳಿಸಿದ ಪಿತೂರಿಯು ಕೋಮು ಸಾಮರಸ್ಯವನ್ನು ನಾಶಮಾಡುವ ಮೂಲಕ ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಯ ಹೃದಯಭಾಗಕ್ಕೆ ಹೊಡೆತ ನೀಡುವುದಾಗಿತ್ತು. ಸಾರ್ವಜನಿಕ ಸುವ್ಯವಸ್ಥೆಯನ್ನು ಹಾಳು ಮಾಡುವುದು ಮಾತ್ರವಲ್ಲದೆ ಸಶಸ್ತ್ರ ದಂಗೆಯ ಮಟ್ಟಿಗೆ ಜನಸಮೂಹವನ್ನು ಪ್ರಚೋದಿಸುವುದಾಗಿತ್ತು” ಎಂದು ಪೊಲೀಸರ ಅಫಿಡವಿಟ್‌ನಲ್ಲಿಆರೋಪಿಸಲಾಗಿದೆ.

ನಾವು ಸಂಗ್ರಹಿಸಿದ ಸಾಕ್ಷ್ಯಗಳು ಅರ್ಜಿದಾರರು ಭಾರತಾದ್ಯಂತ ಇಂತಹ ಪಿತೂರಿಯನ್ನು ಕಾರ್ಯಗತಗೊಳಿಸಲು ಬಯಸಿದ್ದರು ಎಂದು ಸೂಚಿಸುತ್ತದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರಾನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ ಉರ್ ರೆಹಮಾನ್ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಯಾಗಿ ಅಫಿಡವಿಟ್‌ಗಳನ್ನು ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಬೇಕೆಂಬ ದೆಹಲಿ ಪೊಲೀಸರ ಮನವಿಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 27ರಂದು ತಿರಸ್ಕರಿಸಿತ್ತು.

ಸಾಕಷ್ಟು ಸಮಯ ನೀಡಲಾಗಿದೆ ಎಂದು ಹೇಳಿದ್ದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ, ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ (ಅ.31) ಮುಂದೂಡಿ, ಈ ಮಧ್ಯೆ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿತ್ತು. ಅದರಂತೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿ ಪೊಲೀಸರು ಅಫಿಡವಿಟ್ ಸಲ್ಲಿಸಿದ್ದಾರೆ.

ರವೀಂದ್ರನಾಥ ಟ್ಯಾಗೋರ್‌ರ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...