Homeಮುಖಪುಟಪೆಗಾಸಸ್ ಹಗರಣ: ಎಸ್‌ಐಟಿ ತನಿಖೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಪೆಗಾಸಸ್ ಹಗರಣ: ಎಸ್‌ಐಟಿ ತನಿಖೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

- Advertisement -
- Advertisement -

ಪತ್ರಕರ್ತರು, ಸಾಮಾಜಿಕ ಹೋರಾಟಗಾರರು, ರಾಜಕಾರಣಿಗಳು ಸೇರಿ ದೇಶದ 300 ಕ್ಕೂ ಹೆಚ್ಚು ಜನರನ್ನು  ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನು ಬಳಸಿ ಸರ್ಕಾರಿ ಸಂಸ್ಥೆಗಳು ಬೇಹುಗಾರಿಕೆ ನಡೆಸಿದ್ದಾರೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ವಕೀಲ ಎಂ.ಎಲ್.ಶರ್ಮಾ, ’ಪೆಗಾಸಸ್ ಹಗರಣವು ಭಾರೀ ಗಂಭೀರ ವಿಷಯವಾಗಿದೆ. ಭಾರತದ ಪ್ರಜಾಪ್ರಭುತ್ವ, ನ್ಯಾಯಾಂಗ ಮತ್ತು ದೇಶದ ಭದ್ರತೆಯ ಮೇಲೆ ನಡೆದಿರುವ ಗಂಭೀರ ದಾಳಿ’ ಎಂದು ಹೇಳಿದ್ದಾರೆ.

“ಖಾಸಗಿತನ ಎಂದರೆ ಮರೆಮಾಚುವ ಬಯಕೆಯಲ್ಲ, ಇದು ನಮ್ಮ ಆಲೋಚನೆಗಳು ಮತ್ತು ಅಸ್ತಿತ್ವವನ್ನು ಇಟ್ಟುಕೊಳ್ಳುವ ಒಂದು ಸ್ಥಳಾವಕಾಶ. ಇದು ಬೇರೊಬ್ಬರ ಉದ್ದೇಶಗಳ ಸಾಧನವಾಗಬಾರದು. ಇದು ಘನತೆಯ ಅತ್ಯಗತ್ಯ ಅಂಶವಾಗಿದೆ” ಎಂದು ವಕೀಲರ ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ಪೆಗಾಸಸ್ ಸ್ಪೈವೇರ್‌ ಕೇವಲ ಸಂಭಾಷಣೆಗಳನ್ನು ಕೇಳುವುದಕ್ಕೆ ಬಳಸಲಾಗುವುದಿಲ್ಲ. ಒಬ್ಬ ವ್ಯಕ್ತಿಯ ಜೀವನದ ಸಂಪೂರ್ಣ ಮಾಹಿತಿ ಪಡೆಯಲು ಇದನ್ನು ಬಳಸಬಹುದು. ಏಕೆಂದರೆ ಇದು ಫೋನ್ ಹ್ಯಾಕ್ ಮಾಡಿದ ವ್ಯಕ್ತಿಯಲ್ಲದೇ, ಆತನ ಸಂಪರ್ಕದಲ್ಲಿರುವ ಪ್ರತಿಯೊಬ್ಬರನ್ನು ಅಸಹಾಯಕರನ್ನಾಗಿ ಮಾಡುತ್ತದೆ ಎಂದು ಹೇಳಲಾಗಿದೆ.

ಪೆಗಾಸಸ್ ಸ್ಪೈವೇರ್‌ ಕಣ್ಗಾವಲು ತಂತ್ರಜ್ಞಾನವಷ್ಟೇ ಅಲ್ಲದೆ, ಜಾಗತಿಕ ಭದ್ರತೆ, ಮಾನವ ಹಕ್ಕುಗಳು ಮತ್ತು ರಾಷ್ಟ್ರೀಯ ಭದ್ರತಾ ಪರಿಣಾಮಗಳ ಮೇಲೆ ಸೈಬರ್ ಆಯುಧವಾಗಿ ಕೆಲಸ ಮಾಡುತ್ತದೆ ಎನ್ನಲಾಗಿದೆ.

ಫಾರ್ಬಿಡನ್‌ ಸ್ಟೋರಿಸ್‌ ಬಿಡುಗಡೆ ಮಾಡಿರುವ ತನಿಖಾ ವರದಿ ‘ಪೆಗಾಸಸ್‌ ಪ್ರಾಜೆಕ್ಟ್‌‌’ ಜಗತ್ತಿನಾದ್ಯಂತ ಸುದ್ದಿಯಾಗುತ್ತಿದೆ. 2016 ರಿಂದ ವಿಶ್ವದಾದ್ಯಂತ 50,000 ಫೋನ್‌ಗಳನ್ನು ಪೆಗಾಸಸ್‌‌ ತಂತ್ರಾಂಶವು ಟ್ಯಾಪ್‌ ಮಾಡಿದೆ ಎನ್ನಲಾಗಿದ್ದು, ಇದರಲ್ಲಿ ನಮ್ಮ ದೇಶದ 300 ಕ್ಕೂ ಹೆಚ್ಚು ಜನರನ್ನು ಗುರಿಮಾಡಲಾಗಿದೆ ಎಂದು ವರದಿಯಾಗಿದೆ.

ಪೆಗಾಸಸ್ ಹಗರಣದ ಬಗ್ಗೆ ಸುಮೋಟೊ ಕೇಸ್ ದಾಖಲಿಸಿಕೊಂಡು ಸ್ವತಂತ್ರ ತನಿಖಾ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಶಿವಸೇನೆ ಬುಧವಾರ ಮನವಿ ಮಾಡಿತ್ತು. ದೇಶಾದ್ಯಂತ ಕಾಂಗ್ರೆಸ್ ಪೆಗಾಸಸ್ ಹಗರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.


ಇದನ್ನೂ ಓದಿ: ಪೆಗಾಸಸ್ ಹಗರಣ: ಒಕ್ಕೂಟ ಸರ್ಕಾರದ ವಿರುದ್ಧ ಟಿಎಂಸಿ, ಶಿವಸೇನೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...