Homeಮುಖಪುಟಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಪರಿಶೀಲನೆಗೆ ಸುಪ್ರೀಂಕೋರ್ಟ್‌ ಸಮ್ಮತಿ

ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಪರಿಶೀಲನೆಗೆ ಸುಪ್ರೀಂಕೋರ್ಟ್‌ ಸಮ್ಮತಿ

- Advertisement -
- Advertisement -

2023ರಲ್ಲಿ ಜಾರಿಗೆ ತಂದ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಯಡಿಯಲ್ಲಿ ಕೇಂದ್ರ ಸರ್ಕಾರವು ಹೊಸ ಚುನಾವಣಾ ಆಯುಕ್ತರ ನೇಮಕ ಮಾಡುವುದನ್ನು ತಡೆಯುವಂತೆ ಕೋರಿ ಸಲ್ಲಿಸಿದ ಅರ್ಜಿಯ ಪರಿಶೀಲನೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.

ಅರುಣ್ ಗೋಯೆಲ್ ಅವರು ಚುನಾವಣಾ ಆಯುಕ್ತ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ  ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ಈ ಕುರಿತು ಅರ್ಜಿಯನ್ನು ಸಲ್ಲಿಸಿದ್ದಾರೆ.  ಲೋಕಸಭೆ ಚುನಾವಣೆಗೆ ಮುನ್ನ ಮೂರು ಸದಸ್ಯರ ಕೇಂದ್ರ ಚುನಾವಣಾ ಸಮಿತಿಯಲ್ಲಿ ಈಗ ಓರ್ವ ಸದಸ್ಯರು ಮಾತ್ರ ಇದ್ದಾರೆ. ಅರುಣ್ ಗೋಯೆಲ್  ರಾಜೀನಾಮೆ ಮತ್ತು ಅನೂಪ್ ಚಂದ್ರ ಪಾಂಡೆ ನಿವೃತ್ತರಾದ ಹಿನ್ನೆಲೆಯಲ್ಲಿ ಚುನಾವಣಾ ಸಮಿತಿಯ ಸದಸ್ಯರ ಸಂಖ್ಯೆ 1ಕ್ಕೆ ಇಳಿದಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಹಾಗೂ ನ್ಯಾಯಮೂರ್ತಿಗಳಾದ ಜೆ.ಪಿ. ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ, ಅರ್ಜಿದಾರರಿಗೆ ಈ ಮೇಲ್ ಕಳುಹಿಸಿ. ನಾವು ಪರಿಶೀಲಿಸುತ್ತೇವೆ ಎಂದು ಹೇಳಿದೆ. ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಪರವಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಹಿರಿಯ ನ್ಯಾಯವಾದಿ ವಿಕಾಸ್ ಸಿಂಗ್ ಹಾಗೂ ನ್ಯಾಯವಾದಿ ವರುಣ್ ಠಾಕೂರ್ ಅವರು ಅರ್ಜಿಯನ್ನು ತುರ್ತು ಪಟ್ಟಿ ಮಾಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಹಿಂದೆ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದ್ದ ಮಾರ್ಗಸೂಚಿಗಳನ್ನು ಅನುಸರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಠಾಕೂರ್ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ. ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಚುನಾವಣಾ ಆಯುಕ್ತರನ್ನು ನೇಮಿಸಬೇಕು ಎಂದು ತೀರ್ಪು ಹೇಳಿತ್ತು.

ಡಿಸೆಂಬರ್ 2023 ರಲ್ಲಿಸಂಸತ್ತು ಅಂಗೀಕರಿಸಿದ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವಾ ಷರತ್ತುಗಳು) ಕಾಯಿದೆಯಲ್ಲಿ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನು ಆಯ್ಕೆ ಸಮಿತಿಯಿಂದ ಹೊರಗಿಟ್ಟು ಕ್ಯಾಬಿನೆಟ್ ಸಚಿವರನ್ನು ಸೇರಿಸಲಾಗಿದೆ.

ಸರ್ಕಾರ ಹೊಸ ಕಾಯ್ದೆಯ ವಿರುದ್ದ ಜಯ ಠಾಕೂರ್ ಈ ಹಿಂದೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಆದರೆ, ಸುಪ್ರೀಂ ಕೋರ್ಟ್ ಕಾಯ್ದೆಗೆ ತಡೆ ನೀಡಲು ನಿರಾಕರಿಸಿತ್ತು. ಕಾಯ್ದೆಯ ವಿರುದ್ದ ಸಲ್ಲಿಕೆಯಾಗಿರುವ ಹಲವು ಅರ್ಜಿಗಳು ಮುಂದಿನ ಏಪ್ರಿಲ್‌ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಹೊಸ ಕಾಯ್ದೆ ಪ್ರಕಾರ, ಪ್ರಧಾನಿ ನೇತೃತ್ವದ ಸಮಿತಿಯಲ್ಲಿ ಒಬ್ಬರು ಕೇಂದ್ರ ಸಚಿವರು ಮತ್ತು ಪ್ರತಿಪಕ್ಷದ ನಾಯಕರು ಇರಲಿದ್ದಾರೆ. ಪ್ರಸ್ತುತ, ಪ್ರಧಾನಿ ಮೋದಿ ನೇತೃತ್ವದ ಸಮಿತಿಯಲ್ಲಿ ಲೋಕಸಭೆಯ ಕಾಂಗ್ರೆಸ್ ಅಧೀರ್ ರಂಜನ್ ಚೌಧರಿ ಮತ್ತು ಒಬ್ಬರು ಕೇಂದ್ರ ಸಚಿವರು ಇದ್ದಾರೆ.

ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ಮತ್ತು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿಯಿಂದ ತೆರವಾಗಿರುವ ಎರಡು ಚುನಾವಣಾ ಆಯುಕ್ತರ ಹುದ್ದೆಗಳನ್ನು ಈ ವಾರಾಂತ್ಯದಲ್ಲಿ ಭರ್ತಿ ಮಾಡಲು ಮೋದಿ ಸರ್ಕಾರ ಮುಂದಾಗಿದ್ದು, ಈ ಮಧ್ಯೆ  ನಿರ್ಬಂಧವನ್ನು ಕೋರಿ ಕಾಂಗ್ರೆಸ್‌ ನಾಯಕಿ ಸುಪ್ರೀಂಕೋರ್ಟ್ ಮೊರೆ ಹೋಗಿರುವುದು ಮಹತ್ವವನ್ನು ಪಡೆದುಕೊಂಡಿದೆ.

ಇದನ್ನು ಓದಿ: ಮಮತಾ ಬ್ಯಾನರ್ಜಿ ನನ್ನ ವಿರುದ್ಧ ಒಮ್ಮೆ ಸ್ಪರ್ಧಿಸಲಿ: ಅಧೀರ್ ರಂಜನ್ ಚೌಧರಿ ಸವಾಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...