Homeಮುಖಪುಟಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಮೋದಿ ಚಾದರ್ ಅರ್ಪಣೆ : ತಡೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಮೋದಿ ಚಾದರ್ ಅರ್ಪಣೆ : ತಡೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ

- Advertisement -
- Advertisement -

ಸೂಫಿ ಸಂತ ಖ್ವಾಜಾ ಮುಈನುದ್ದೀನ್ ಚಿಸ್ತಿ ಅವರ ಅಜ್ಮೀರ್ ದರ್ಗಾದ ಉರೂಸ್ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಚಾದರ್ ದರ್ಗಾಕ್ಕೆ ಅರ್ಪಿಸದಂತೆ ತಾತ್ಕಾಲಿಕ ತಡೆ ನೀಡಲು ಕೋರಿ ಇಂದು (ಜ.4) ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಅಜ್ಮೀರ್ ದರ್ಗಾ ಶಿವ ದೇವಸ್ಥಾನವೆಂದು ಪ್ರತಿಪಾದಿಸಿ ಹಿಂದುತ್ವವಾದಿ ಸಂಘಟನೆ ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತ ಅಜ್ಮೀರ್ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿ ವಿಚಾರಣೆಯ ಹಂತದಲ್ಲಿದೆ. ಅದೇ ವಿಷ್ಣು ಗುಪ್ತಾ ಈಗ ಚಾದರ್ ಅರ್ಪಣೆಗೆ ತಡೆ ಕೋರಿದ್ದಾರೆ.

ಅಜ್ಮೀರ್ ದರ್ಗಾ ದೇವಸ್ಥಾವೆಂದು ಪ್ರತಿಪಾದಿಸಿದ ಅರ್ಜಿ ನ್ಯಾಯಾಲಯದಲ್ಲಿದೆ. ಅದು ದರ್ಗವೋ ದೇವಸ್ಥಾನವೋ ಎಂಬುವುದನ್ನು ನ್ಯಾಯಾಲಯ ಇನ್ನೂ ತೀರ್ಮಾನಿಸಿಲ್ಲ. ಈ ಹಂತದಲ್ಲಿ ಕೇಂದ್ರ ಸರ್ಕಾರ ಚಾದರ್ ಅರ್ಪಿಸುವುದು ‘ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ನ್ಯಾಯಯುತ ವಿಚಾರಣೆಯ ಹಕ್ಕನ್ನು ದುರ್ಬಲಗೊಳಿಸುತ್ತದೆ’. ಅದು ದರ್ಗಾವೇ ಎಂದು ಖಚಿತಪಡಿಸದಂತಾಗುತ್ತದೆ ಎಂದು ಅರ್ಜಿದಾರ ವಿಷ್ಣುಗುಪ್ತಾ ಹೇಳಿದ್ದಾರೆ.

ಪ್ರತಿವರ್ಷ ಅಜ್ಮೀರ್ ಉರೂಸ್‌ಗೆ ಕೇಂದ್ರ ಸರ್ಕಾರದಿಂದ ಚಾದರ್ ಅರ್ಪಿಸುವುದು ಸಂಪ್ರದಾಯ. ಈ ವರ್ಷ 813ನೇ ಉರೂಸ್ ಸಮಾರಂಭಕ್ಕೆ ಚಾದರ್ ಅರ್ಪಿಸುವ ಮೂಲಕ ಪ್ರಧಾನಿ ಮೋದಿ ಅದನ್ನು ಮುಂದುವರಿಸಿದ್ದಾರೆ.

ಈ ಹಿಂದೆ ದೇಶದ ಎಲ್ಲಾ ಪ್ರಧಾನ ಮಂತ್ರಿಗಳು ಅಜ್ಮೀರ್ ದರ್ಗಾದ ಉರೂಸ್‌ಗೆ ಚಾದರ್ ಅರ್ಪಿಸಿದ್ದಾರೆ. 2014ರಲ್ಲಿ ಮೋದಿಯವರು ಪ್ರಧಾನಿಯಾದ ಬಳಿಕವೂ ಆ ಸಂಪ್ರದಾಯ ಮುಂದುವರೆದಿದೆ.

ಅಜ್ಮೀರ್‌ನ ಖ್ವಾಜಾ ಮುಈನುದ್ದೀನ್ ಚಿಸ್ತಿ ದರ್ಗಾವನ್ನು ಭಗವಾನ್ ಶ್ರೀ ಸಂಕಟ್‌ಮೋಚನ್‌ ಮಹಾದೇವ ದೇವಸ್ಥಾನ ಎಂದು ಪ್ರತಿಪಾದಿಸಿ ವಿಷ್ಣುಗುಪ್ತ ಅಜ್ಮೀರ್ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ 2024ರ ನವೆಂಬರ್‌ನಲ್ಲಿ ನ್ಯಾಯಾಲಯ ಒಪ್ಪಿಕೊಂಡಿತ್ತು. ಅರ್ಜಿ ಸಂಬಂಧ ದರ್ಗಾ ಸಮಿತಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಗೆ ಸಮನ್ಸ್ ನೀಡುವಂತೆ ಸೂಚಿಸಿತ್ತು. ಮುಂದಿನ ವಿಚಾರಣೆಯನ್ನು ಡಿಸೆಂಬರ್ 20ಕ್ಕೆ ನಿಗದಿಪಡಿಸಿತ್ತು.

ಆದರೆ, ಡಿಸೆಂಬರ್ 12ರಂದು ಮಧ್ಯಂತರ ಆದೇಶ ನೀಡಿರುವ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮಸೀದಿಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ನೀಡದಂತೆ ದೇಶದ ಎಲ್ಲಾ ನ್ಯಾಯಾಲಯಗಳಿಗೆ ಸೂಚಿಸಿದೆ.

ಇದನ್ನೂ ಓದಿ : ಅಜ್ಮೀರ್ ಉರೂಸ್‌ಗೆ ಚಾದರ್ ಅರ್ಪಿಸಿದ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...