Homeಮುಖಪುಟರಾಮ ಮಂದಿರ ಉದ್ಘಾಟನಾ ಸಮಾರಂಭದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ: ವರದಿ

ರಾಮ ಮಂದಿರ ಉದ್ಘಾಟನಾ ಸಮಾರಂಭದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ: ವರದಿ

- Advertisement -
- Advertisement -

ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ (ರಾಮ ಮಂದಿರ ಉದ್ಘಾಟನೆ) ಕ್ಕೆ ನಿರ್ಬಂರ್ಧ ವಿಧಿಸಲು ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಉತ್ತರ ಪ್ರದೇಶದ ಗಾಝಿಯಾಬಾದ್ ನಿವಾಸಿ ಭೋಲಾ ದಾಸ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಹಿಂದೂ ಪಂಚಾಂಗದ ಪ್ರಕಾರ, ಪುಷ್ಯ ಮಾಸದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ಆಯೋಜಿಸಬಾರದು. ಅಲ್ಲದೆ ದೇವಾಲಯ ಇನ್ನೂ ನಿರ್ಮಾಣ ಹಂತದಲ್ಲಿದ್ದು, ಉದ್ಘಾಟನೆ ಸನಾತನ ಸಂಪ್ರದಾಯಕ್ಕೆ ವ್ಯತಿರಿಕ್ತವಾಗಿರುವುದರಿಂದ ದೇವರ ಪ್ರತಿಷ್ಠಾಪನೆ ಕೂಡದು ಎಂದು ಅರ್ಜಿದಾರರು ವಾದಿಸಿದ್ದಾಗಿ ವರದಿ ಹೇಳಿದೆ.

ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಶಂಕರಾಚಾರ್ಯರ ಆಕ್ಷೇಪವಿದೆ. ದೇವಾಲಯ ಅಪೂರ್ಣವಾಗಿದ್ದು, ದೇವರ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಸನಾತನ ಧರ್ಮದ ಆಚರಣೆಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಇದಲ್ಲದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ಬಿಜೆಪಿ ಈ ಸಮಾರಂಭ ಹಮ್ಮಿಕೊಂಡಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಇಂದು ಮೆರವಣಿಗೆ ಮೂಲಕ ಮೂರ್ತಿಯನ್ನು ಕೊಂಡೊಯ್ಯಲಾಗಿದೆ.

ಇದನ್ನೂ ಓದಿ : Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read