Homeಮುಖಪುಟಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 2024ರ ಮಾರ್ಚ್‌ನಲ್ಲಿ ದಾಖಲಾದ ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಬಾಲಕಿಯ ಸಹೋದರನ ಮನವಿ ಮೇರೆಗೆ ವಕೀಲ ಎಸ್‌ ಬಾಲನ್ ಅವರು ಜೂನ್ 10 ರಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಫೆಬ್ರವರಿ 2ರಂದು ಬೆಂಗಳೂರಿನ ಸಂಜಯನಗರದ ತಮ್ಮ ಮನೆಯಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಯಡಿಯೂರಪ್ಪ ಮೇಲಿದೆ. ಈ ಸಂಬಂಧ ಬಾಲಕಿಯ ತಾಯಿ ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

“ಎರಡು ಪ್ರಮುಖ ಬೇಡಿಕೆಗಳೊಂದಿಗೆ ರಿಟ್ ಅರ್ಜಿ ಸಲ್ಲಿಸಿರುವುದಾಗಿ ವಕೀಲ ಬಾಲನ್ ತಿಳಿಸಿದ್ದಾರೆ. ತನಿಖೆಯು ಬಹಳ ನಿಧಾನ ಗತಿಯಲ್ಲಿ ಸಾಗುತ್ತಿದೆ. ಆದ್ದರಿಂದ ನಾವು ಸ್ಥಿತಿ ವರದಿಯನ್ನು ಕೇಳಿದ್ದೇವೆ. ಅಲ್ಲದೆ ಯಡಿಯೂರಪ್ಪ ಅವರನ್ನು ಬಂಧಿಸುವಂತೆಯೂ ಕೇಳಿರುವುದಾಗಿ ಹೇಳಿದ್ದಾರೆ” ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಬಾಲಕಿಯ ಹೇಳಿಕೆಯನ್ನು ಈಗಾಗಲೇ ದಾಖಲಿಸಲಾಗಿದೆ ಎಂದು ರಿಟ್ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಬಾಲಕಿಯ ತಾಯಿ ಏಪ್ರಿಲ್ 29 ರಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ಪತ್ರ ಬರೆದು ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಮನವಿ ಮಾಡಿದ್ದರು.

ಆದರೆ, ಎರಡು ತಿಂಗಳ ನಂತರವೂ, ಯಡಿಯೂರಪ್ಪ ವಿರುದ್ಧದ ತನಿಖೆಯು ಸಿಆರ್‌ಪಿಸಿಯ ಸೆಕ್ಷನ್ 2 (ಹೆಚ್) ಅಡಿಯಲ್ಲಿ ವ್ಯಾಖ್ಯಾನಿಸಲ್ಪಟ್ಟಂತೆ ಪ್ರಗತಿಯಾಗಿಲ್ಲ. ಸೆಕ್ಷನ್ 41 (ಎ) ಅಡಿಯಲ್ಲಿ ಅವರಿಗೆ ನೋಟಿಸ್ ಕೂಡ ನೀಡಿಲ್ಲ. ಆದ್ದರಿಂದ ನ್ಯಾಯಾಲದ ಮೊರೆ ಹೋಗುವುದರ ಹೊರತು ಬೇರೆ ಪರಿಹಾರವಿರಲಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಯಡಿಯೂರಪ್ಪ ವಿರುದ್ಧದ ದೂರಿನ ಸಂಬಂಧ ಅಪ್ರಾಪ್ತ ಬಾಲಕಿಯ ತಾಯಿ ಮೇ 27 ರಂದು ವಕೀಲ ಬಾಲನ್ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಉಸಿರಾಟದ ತೊಂದರೆಯಿಂದ ಅವರು ಮೇ 26ರಂದು ಬೆಂಗಳೂರಿನ ನ್ಯಾನೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಸಾವಿನ ಸುತ್ತವೂ ಹಲವು ಅನುಮಾನಗಳು ವ್ಯಕ್ತವಾಗಿದ್ದು, ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮೇ 27ರಂದು ದೂರು ದಾಖಲಿಸಿದೆ.

ಇದನ್ನೂ ಓದಿ : ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ದಿಢೀರ್ ಸಾವು: ತನಿಖೆಗೆ ಆಗ್ರಹಿಸಿದ ಜನವಾದಿ ಮಹಿಳಾ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...