Homeಕರ್ನಾಟಕಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಸೋಮವಾರ (ಡಿಸೆಂಬರ್ 8) ನೋಟಿಸ್‌ ನೀಡಿದೆ.

ವರುಣಾ ಕ್ಷೇತ್ರದ ಮತದಾರ ಕೂಡನಹಳ್ಳಿಯ ಕೆ. ಶಂಕರ್ ಎಂಬವರು ಅರ್ಜಿ ಸಲ್ಲಿಸಿದ್ದಾರೆ. ಶಂಕರ್ ಅವರು ಸಲ್ಲಿಸಿದ್ದ ಇದೇ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಕಳೆದ ಏಪ್ರಿಲ್‌ನಲ್ಲಿ ವಜಾಗೊಳಿಸಿತ್ತು.

2023ರ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾದ ಐದು ಚುನಾವಣಾ ಭರವಸೆಗಳು (ಗ್ಯಾರಂಟಿಗಳು) ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಪ್ರಕಾರ ಲಂಚ ಮತ್ತು ಭ್ರಷ್ಟಾಚಾರ ಎನಿಸಿಕೊಳ್ಳುತ್ತವೆ ಎಂದು ಶಂಕರ್‌‌ ವಾದಿಸಿದ್ದರು.

ಸಿದ್ದರಾಮಯ್ಯ ಅವರ ಒಪ್ಪಿಗೆಯೊಂದಿಗೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದರಿಂದ, ಅವರು ಕೂಡ ಭ್ರಷ್ಟಾಚಾರ ನಡೆಸಿದ್ದಾರೆ. ಆದ್ದರಿಂದ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು ಮತ್ತು ಆರು ವರ್ಷಗಳ ಕಾಲ ಅವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ವಿಧಿಸಬೇಕು ಎಂದು ಕೋರಿದ್ದರು.

ಈ ವಾದವನ್ನು ತಿರಸ್ಕರಿಸಿದ್ದ ಹೈಕೋರ್ಟ್‌ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರು, ಚುನಾವಣಾ ಭರವಸೆಗಳನ್ನು ಭ್ರಷ್ಟಾಚಾರ ಎನ್ನಲಾಗದು ಎಂದಿದ್ದರು. ಅರ್ಜಿಯಲ್ಲಿನ ಪ್ಯಾರಾಗಳ ಸಂಖ್ಯೆ ಮತ್ತು ಪರಿಶೀಲನಾ ಅಫಿಡವಿಟ್‌ ನಡುವೆ ವ್ಯತ್ಯಾಸಗಳಿವೆ. ಜೊತೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿಯ ಹೆಸರನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ ಎಂದಿದ್ದರು.

“ಗ್ಯಾರಂಟಿಗಳನ್ನು ಒಳಗೊಂಡ ಪ್ರಣಾಳಿಕೆ ಪಕ್ಷಕ್ಕೆ ಸೇರಿದ್ದು, ಇದನ್ನು ನನ್ನ ವೆಚ್ಚಕ್ಕೆ ಸೇರಿಸಬಹುದೇ? ಗ್ಯಾರಂಟಿ ಯೋಜನೆ ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಇದು ನನ್ನ ಚುನಾವಣಾ ವೆಚ್ಚಕ್ಕೆ ಸೇರುತ್ತದೆಯೇ, ನಾನು ಮುಖ್ಯಮಂತ್ರಿಯಾದ ಮೇಲೆ ಇದು ಅನ್ವಯಿಸುವುದೇ?” ಎಂದು ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...