Homeಮುಖಪುಟಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ0, ಜಾಮೀನು ಮಂಜೂರು ಮಾಡಿರುವ ದೆಹಲಿ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ವಕೀಲರಾದ ಅಂಜಲೆ ಪಟೇಲ್ ಮತ್ತು ಪೂಜಾ ಶಿಲ್ಪ್ಕರ್ ಅವರು ವಕೀಲ ಸಂಜೀವ್ ಮಲ್ಹೋತ್ರಾ ಮೂಲಕ ವಿಶೇಷ ರಜಾ ಅವಧಿಯ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸಿದ್ದಾರೆ.

“ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ಹಾಗಾಗಿ, ಸುಪ್ರೀಂ ಕೋರ್ಟ್‌ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು. ತನ್ನ ಅಧಿಕಾರವನ್ನು ಬಳಸಿಕೊಂಡು ಸೆಂಗಾರ್‌ನ ಶಿಕ್ಷೆ ಅಮಾನತು ಮತ್ತು ಜಾಮೀನನ್ನು ರದ್ದಗೊಳಿಸಬೇಕು” ಎಂದು ಅರ್ಜಿದಾರರು ಕೋರಿದ್ದಾರೆ.

ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನಿಯಮಗಳು ಮತ್ತು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳ ಪ್ರಕಾರ ವಿಚಾರಣೆ ಪಟ್ಟಿ ಮಾಡಬಹುದು. ಅರ್ಜಿದಾರರಾದ ಅಂಜಲೆ ಪಟೇಲ್ ಮತ್ತು ಪೂಜಾ ಶಿಲ್ಪ್ಕರ್ ಜೋಡಿ ಸೆಂಗಾರ್ ಬಂಧನ ಮತ್ತು ಶಿಕ್ಷೆಗೆ ಸಂಬಂಧಿಸಿದ ಮೂಲ ಪ್ರಕರಣದ ಪಕ್ಷಕಾರರು ಎಂಬುದನ್ನು ಇಲ್ಲಿ ಗಮನಾರ್ಹ.

ವಿಚಾರಣಾ ನ್ಯಾಯಾಲಯ ಎಲ್ಲಾ ಸಾಕ್ಷ್ಯಗಳನ್ನು ವಿಚಾರಣೆ ನಡೆಸಿ, ದಾಖಲೆಗಳನ್ನು ಪರಿಶೀಲಿಸಿ ಅಂತಿಮವಾಗಿ ಸೆಂಗಾರ್‌ಗೆ ಜೀವಿತವಾಧಿ ಶಿಕ್ಷೆ ವಿಧಿಸಿದೆ. ಹೀಗಿರುವಾಗ, ಶಿಕ್ಷೆ ಅಮಾನತು ಮತ್ತು ಜಾಮೀನು ಕೋರಿ ಅರ್ಜಿ ಸಲ್ಲಿಸಲು ಆತನಿಗೆ ಹೈಕೋರ್ಟ್‌ ಅವಕಾಶ ನೀಡಿರುವುದು ನ್ಯಾಯ ಸಮ್ಮತವಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಅಪರಾಧದ ಗಂಭೀರತೆ, ಅಪರಾಧಿಯ ಕ್ರಿಮಿನಲ್ ಹಿನ್ನೆಲೆ ಮತ್ತು ವಿಚಾರಣಾ ನ್ಯಾಯಾಲಯ ಕೊಟ್ಟ ತೀರ್ಪನ್ನು ಸರಿಯಾಗಿ ಪರಿಗಣಿಸದೆ ಹೈಕೋರ್ಟ್‌ ಆದೇಶ ನೀಡಿದಂತಾಗಿದೆ ಎಂದಿದ್ದಾರೆ. ಅಪರಾಧ ನ್ಯಾಯ ವ್ಯವಸ್ಥೆಯ ಪಾವಿತ್ರ್ಯವನ್ನು ಎತ್ತಿಹಿಡಿಯಲು ಮತ್ತು ನ್ಯಾಯದ ಆಡಳಿತದಲ್ಲಿ ಸಾರ್ವಜನಿಕ ವಿಶ್ವಾಸವನ್ನು ಕಾಪಾಡಿಕೊಳ್ಳಲು ದೆಹಲಿ ಹೈಕೋರ್ಟ್ ಆದೇಶದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಸ್ತುತ ಎಸ್‌ಎಲ್‌ಪಿ (ಕ್ರಿಮಿನಲ್) ಅನ್ನು ಭಾರತದ ಸಂವಿಧಾನದ 136 ನೇ ವಿಧಿಯ ಅಡಿಯಲ್ಲಿ ಸಲ್ಲಿಸಲಾಗಿದೆ.

“ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸುವ ಆದೇಶವನ್ನು ಹೊರಡಿಸಿದ್ದಲ್ಲದೆ, ಕುಲದೀಪ್ ಸಿಂಗ್ ಸೆಂಗಾರ್ ತನ್ನ ಉಳಿದ ಜೀವನದುದ್ದಕ್ಕೂ ನ್ಯಾಯಾಂಗ ಬಂಧನದಲ್ಲಿರಬೇಕೆಂದು ಹೇಳಿದೆ. ಇದು ಯಾವುದೇ ನ್ಯಾಯಾಂಗ ವೇದಿಕೆಗೆ ಸರಿಯಾದ ಕಾರಣಗಳನ್ನು ನೀಡದೆ ಆತ ಜೀವಿತಾವಧಿಯಲ್ಲಿ ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಿಲ್ಲ ಎಂದು ತೋರಿಸಿದೆ. ಆದ್ದರಿಂದ, ಸಂಪೂರ್ಣ ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್‌ನ ಹಸ್ತಕ್ಷೇಪದ ಅಗತ್ಯವಿದೆ” ಎಂದು ವಕೀಲರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...