Homeಮುಖಪುಟಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಶೇಕಡ 20 ಎಥೆನಾಲ್ (E20) ಬೆರೆಸಿದ ಪೆಟ್ರೋಲ್ ಮಾರಾಟವನ್ನು ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಅಕ್ಷಯ್ ಮಲ್ಹೋತ್ರಾ ಎಂಬ ವಕೀಲ ಅರ್ಜಿ ಸಲ್ಲಿಸಿದ್ದು, ಗ್ರಾಹಕರಿಗೆ ಎಥೆನಾಲ್ ಮುಕ್ತ ಪೆಟ್ರೋಲ್ (E0) ಆಯ್ಕೆಯನ್ನು ಒದಗಿಸದೆ E20 ಪೆಟ್ರೋಲ್ ಅನ್ನು ಮಾತ್ರ ಲಭ್ಯವಾಗುವಂತೆ ಮಾಡುವುದು, ಹೆಚ್ಚಿನ ಎಥೆನಾಲ್ ಮಿಶ್ರಣದೊಂದಿಗೆ ಹೊಂದಿಕೆಯಾಗದ ಲಕ್ಷಾಂತರ ವಾಹನ ಮಾಲೀಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಅಲ್ಲದೆ, ಸಾರ್ವಜನಿಕ ಜಾಗೃತಿ ಮೂಡಿಸದೆ ಇಂತಹ ಯೋಜನೆ ಜಾರಿಗೊಳಿಸುವುದು ಗ್ರಾಹಕ ಸಂರಕ್ಷಣಾ ಕಾಯ್ದೆ, 2019ರ ಪ್ರಕಾರ ಮಾಹಿತಿಯುಕ್ತ ಆಯ್ಕೆಯನ್ನು ಹೊಂದುವ ಗ್ರಾಹಕರ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಲಕ್ಷಾಂತರ ಭಾರತೀಯರಿಗೆ ತಮ್ಮ ವಾಹನಗಳಲ್ಲಿರುವ ಪೆಟ್ರೋಲ್ 100% ಪೆಟ್ರೋಲ್ ಅಲ್ಲ, ಬದಲಾಗಿ ಎಥೆನಾಲ್ ಮತ್ತು ಪೆಟ್ರೋಲ್ ಮಿಶ್ರಣವಾಗಿದೆ ಎಂಬುದು ತಿಳಿದಿಲ್ಲ ಎಂದು ಅರ್ಜಿದಾರ ವಾದಿಸಿದ್ದಾರೆ. ಗ್ರಾಹಕರಿಗೆ ಯಾವುದೇ ವಾಸ್ತವಾಂಶವನ್ನು ಬಹಿರಂಗಪಡಿಸದ ಕಾರಣ ‘ತಿಳುವಳಿಕೆಯುಳ್ಳ ಗ್ರಾಹಕ’ ಆಯ್ಕೆಯ ಮೂಲ ಅಂಶವನ್ನು ಇದು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

E20 ಪೆಟ್ರೋಲ್ ಬಳಕೆಯು ಇಂಧನ ದಕ್ಷತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಮತ್ತು ವಿವಿಧ ವಾಹನ ಘಟಕಗಳ ಸವೆತಕ್ಕೆ ಕಾರಣವಾಗಬಹುದು. ಇದರಿಂದಾಗಿ ಗ್ರಾಹಕರ ಮೇಲೆ ಹೆಚ್ಚುವರಿ ವೆಚ್ಚಗಳು ಮತ್ತು ಸುರಕ್ಷತಾ ಕಾಳಜಿಗಳನ್ನು ಹೇರಿದಂತಾಗುತ್ತದೆ. E20ಗೆ ಅನುಗುಣವಾಗಿ ವಾಹನಗಳನ್ನು ವಿನ್ಯಾಸಗೊಳಿಸಲು ಮತ್ತು ಬಿಡುಗಡೆ ಮಾಡಲು ಆಟೋಮೊಬೈಲ್ ತಯಾರಕರಿಗೆ ಸಾಕಷ್ಟು ಅವಕಾಶವನ್ನು ನೀಡದೆ ನೀತಿಯನ್ನು ಜಾರಿಗೆ ತರುವ ಕೇಂದ್ರದ ಕ್ರಮವು ‘ಅಸಮಂಜಸ ಮತ್ತು ಅನಿಯಂತ್ರಿತ’ ಎಂದು ಅರ್ಜಿದಾರ ಹೇಳಿದ್ದಾರೆ.

ಏಪ್ರಿಲ್ 2023ರ ಮೊದಲು ಭಾರತದಲ್ಲಿ ತಯಾರಾದ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುವುದಿಲ್ಲ. ಅಲ್ಲದೆ, 2 ವರ್ಷ ಹಳೆಯದಾದ ಈ ವಾಹನಗಳು, BS-VI ಗೆ ಅನುಗುಣವಾಗಿದ್ದರೂ, ಶೇ. 20 ಎಥೆನಾಲ್‌ಗೆ ಹೊಂದಿಕೆಯಾಗುವುದಿಲ್ಲ, ಅವು E-10ಗೆ ಹೊಂದಿಕೆಯಾಗಬಹುದು ಎಂದಿದ್ದಾರೆ.

ಪೆಟ್ರೋಲ್‌ನಲ್ಲಿರುವ ಎಥೆನಾಲ್ ಅಂಶವು ಎಂಜಿನ್ ಭಾಗಗಳ ಸವೆತಕ್ಕೆ ಕಾರಣವಾಗುತ್ತದೆ. ಇದು ಇಂಧನ ದಕ್ಷತೆಯನ್ನು ಕಡಿಮೆ ಮಾಡುತ್ತದೆ. ವಾಹನಗಳ ಅಕಾಲಿಕ ಹಾನಿಗೊಳಗಾಗಲು ಕಾರಣವಾಗುತ್ತದೆ. ಇಂಧನ ಮಾರ್ಗಗಳು, ಪ್ಲಾಸ್ಟಿಕ್/ರಬ್ಬರ್ ಘಟಕಗಳು ಇತ್ಯಾದಿಗಳಿಗೆ ಹಾನಿ ಮಾಡುತ್ತದೆ. ವಾಹನದ ಕಡಿಮೆ ದಕ್ಷತೆಯಿಂದಾಗಿ ಪೆಟ್ರೋಲ್ ಬಳಕೆ ಹೆಚ್ಚಾಗಿರುತ್ತದೆ. ಎಂಜಿನ್‌ಗಳು ಹಾನಿಗೊಳಗಾಗುತ್ತವೆ. ಮೈಲೇಜ್ ಕಡಿಮೆಯಾಗುತ್ತದೆ. ಮಾಲಿನ್ಯವನ್ನು ಹೆಚ್ಚಿಸುತ್ತದೆ. ಕಾರುಗಳ ದುರಸ್ತಿ ಬಿಲ್‌ಗಳು ಹೆಚ್ಚಾಗುತ್ತವೆ ಮತ್ತು ವಿಮಾ ಹಕ್ಕುಗಳನ್ನು ನಿರಾಕರಿಸಲಾಗುತ್ತದೆ ಎಮದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪೆಟ್ರೋಲಿಯಂ ಕಂಪನಿಗಳು ಮಾರುಕಟ್ಟೆಯಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0) ಲಭ್ಯವಾಗುವಂತೆ ನೋಡಿಕೊಳ್ಳಲು ಮತ್ತು ಮಾರಾಟವಾಗುತ್ತಿರುವ ಪೆಟ್ರೋಲ್ E20 ಎಂದು ಸ್ಪಷ್ಟವಾಗಿ ಸೂಚಿಸುವ ಲೇಬಲ್‌ಗಳನ್ನು ಇಂಧನ ಪಂಪ್‌ಗಳಲ್ಲಿ ಅಳವಡಿಸಲು ನಿರ್ದೇಶನಗಳನ್ನು ನೀಡುವಂತೆ ಪಿಐಎಲ್‌ ಕೋರಿದೆ.

ಪೆಟ್ರೋಲ್‌ಗೆ ಶೇ. 20 ಎಥೆನಾಲ್ ಬೆರೆಸುತ್ತಿದ್ದರೂ, ಪೆಟ್ರೋಲ್ ಬೆಲೆ ಕಡಿಮೆಯಾಗಿಲ್ಲ ಎಂದು ಅರ್ಜಿದಾರರು ಗಮನಸೆಳೆದಿದ್ದಾರೆ. ಪೆಟ್ರೋಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ಕಂಪನಿಗಳು ಗಳಿಸುವ ಲಾಭವನ್ನು ಅಂತಿಮವಾಗಿ ಗ್ರಾಹಕರಿಗೆ ವರ್ಗಾಯಿಸಲಾಗುವುದಿಲ್ಲ, ಅವರು ಅದೇ ಮೊತ್ತವನ್ನು ಪಾವತಿಸುತ್ತಲೇ ಇರುತ್ತಾರೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಪೆಟ್ರೋಲ್‌ನೊಂದಿಗೆ ಎಥೆನಾಲ್ ಬೆರೆಸುವ ಯೋಜನೆಯು ಜಾಗತಿಕ ಪದ್ಧತಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ಪಿಐಎಲ್ ಎತ್ತಿ ತೋರಿಸಿದೆ. ಯುಎಸ್ ಮತ್ತು ಯುರೋಪಿಯನ್ ಒಕ್ಕೂಟದಲ್ಲಿ, ಎಥೆನಾಲ್ ಮುಕ್ತ ಪೆಟ್ರೋಲ್ ಇನ್ನೂ ಲಭ್ಯವಿದೆ. ಮಿಶ್ರಿತ ಇಂಧನವನ್ನು ಪೆಟ್ರೋಲ್ ಬಂಕ್‌ಗಳಲ್ಲಿ ಸ್ಪಷ್ಟ ಲೇಬಲ್‌ಗಳೊಂದಿಗೆ ನೀಡಲಾಗುತ್ತಿದೆ. ಆದ್ದರಿಂದ ಗ್ರಾಹಕರು ಮಾಹಿತಿಯುಕ್ತ ಆಯ್ಕೆ ಮಾಡಬಹುದು. ಆದರೆ, ಭಾರತದಲ್ಲಿ, ವಾಹನ ಚಾಲಕರ ಕಣ್ಣಿಗೆ ಮಣ್ಣೆಚರಲಾಗುತ್ತುದೆ. ಪೆಟ್ರೋಲ್ ಪಂಪ್‌ಗಳು ತಮ್ಮ ವಾಹನಗಳಿಗೆ ಏನು ತುಂಬಿಸುತ್ತಿವೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡದೆ ಎಥೆನಾಲ್-ಮಿಶ್ರಿತ ಇಂಧನವನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ ಎಂದು ಅರ್ಜಿದಾರ ಹೇಳಿದ್ದಾರೆ.

ಎಲ್ಲಾ ಇಂಧನ ಕೇಂದ್ರಗಳಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0)ಆಯ್ಕೆಯನ್ನೂ ನೀಡಬೇಕು. ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಸ್ಪಷ್ಟ ಲೇಬಲ್ ಹಾಕಿ ಗ್ರಾಹಕರಿಗೆ ಮಾಹಿತಿ ನೀಡಬೇಕು. ಇಂಧನ ತುಂಬಿಸುವ ಸಮಯದಲ್ಲಿ ಗ್ರಾಹಕರಿಗೆ ಅವರ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುತ್ತವೆಯೇ ಎಂದು ತಿಳಿಸಬೇಕು. ಗ್ರಾಹಕ ವ್ಯವಹಾರಗಳ ಸಚಿವಾಲಯವು ಎಥೆನಾಲ್ ಮಿಶ್ರಿತ ಇಂಧನಗಳಿಗೆ ಗ್ರಾಹಕ ರಕ್ಷಣಾ ನಿಯಮಗಳನ್ನು ಜಾರಿಗೊಳಿಸಬೇಕು ಮತ್ತು ಸರಿಯಾದ ಸಲಹೆಗಳನ್ನು ನೀಡಬೇಕು. ಇಂಧನ ದಕ್ಷತೆ ಮತ್ತು ಹೊಂದಾಣಿಕೆಯಾಗದ ವಾಹನಗಳಲ್ಲಿ ಸವೆತಗಳ ಮೇಲೆ ಶೇ. 20 ಎಥೆನಾಲ್-ಮಿಶ್ರಿತ ಪೆಟ್ರೋಲ್ (E20) ಪ್ರಭಾವದ ಕುರಿತು ರಾಷ್ಟ್ರವ್ಯಾಪಿ ಅಧ್ಯಯನ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...