Homeಮುಖಪುಟಧಾರ್ಮಿಕ ಸ್ಥಳ ಸಮೀಕ್ಷೆ : ಅರ್ಜಿ ಪರಿಗಣಿಸದಂತೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ

ಧಾರ್ಮಿಕ ಸ್ಥಳ ಸಮೀಕ್ಷೆ : ಅರ್ಜಿ ಪರಿಗಣಿಸದಂತೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ

- Advertisement -
- Advertisement -

ಧಾರ್ಮಿಕ ಸ್ಥಳಗಳಲ್ಲಿ ಸಮೀಕ್ಷೆ ನಡೆಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಗಣಿಸದಂತೆ ಮತ್ತು ಈಗಾಗಲೇ ನಡೆಯುತ್ತಿರುವ ಸಮೀಕ್ಷೆಗಳನ್ನು ನಿಲ್ಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಒಂದು ಧರ್ಮದ ಧಾರ್ಮಿಕ ಸ್ಥಳ ತಮಗೆ ಸೇರಿದ್ದು ಎಂದು ಇನ್ನೊಂದು ಧರ್ಮದ ಅನುಯಾಯಿಗಳು ಅರ್ಜಿ ಹಾಕಿದಾಗ ಸಮೀಕ್ಷೆಗೆ ಆದೇಶಿಸದೆ 1991ರ ಆರಾಧನಾ ಸ್ಥಳಗಳ ಕಾಯ್ದೆ ಪಾಲಿಸುವಂತೆ ಕೆಳ ನ್ಯಾಯಾಲಯಗಳಿಗೆ ನಿರ್ದೇಶನ ನೀಡಬೇಕು. ಸಮೀಕ್ಷೆ ನಡೆಸುವಂತೆ ನ್ಯಾಯಾಲಯಗಳು ನೀಡಿರುವ ಆದೇಶಗಳನ್ನು ಕಾರ್ಯಗತಗೊಳಿಸದಂತೆ ಸರ್ಕಾರಗಳಿಗೆ ಸೂಚಿಸಬೇಕು ಎಂದು ಅಲೋಕ್ ಶರ್ಮಾ ಮತ್ತು ಪ್ರಿಯಾ ಮಿಶ್ರಾ ಎಂಬವರು ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿದೆ.

ಹೈಕೋರ್ಟ್, ವಿಚಾರಣಾ ನ್ಯಾಯಾಲಯ ಸೇರಿದಂತೆ ಕೆಳ ನ್ಯಾಯಾಲಯಗಳು 1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಅನುಸರಿಸುವಂತೆ ಮತ್ತು ಸಮೀಕ್ಷೆ ಆದೇಶಿಸದಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಶಾಂತಿ, ಸೌಹಾರ್ದತೆಯನ್ನು ಕಾಪಾಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಬೇಕು. ಸಿವಿಲ್ ನ್ಯಾಯಾಲಯಗಳು ಸಮೀಕ್ಷೆಗೆ ಆದೇಶಿಸಿದ ತಕ್ಷಣ ತರಾತುರಿ ಮಾಡದೆ, ಪ್ರಕರಣ ಸಂಬಂಧ ಹೈಕೋರ್ಟ್‌, ಸುಪ್ರೀಂ ಕೋರ್ಟ್‌ಗೆ ಹೋಗಲು ಸಮಯ ನೀಡುವಂತೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅಜ್ಮೀರ್ ದರ್ಗಾ ಷರೀಫ್, ಭೋಜಶಾಲಾ, ಸಂಭಾಲ್ ಜಾಮಾ ಮಸೀದಿ, ಮಥುರಾ ಶ್ರೀಕೃಷ್ಣ ಜನ್ಮಭೂಮಿ-ಶಾಹೀ ಈದ್ಗಾ ಮಸೀದಿ ಮತ್ತು ಜ್ಞಾನವಾಪಿಗೆ ಸಂಬಂಧಿಸಿದ ಪ್ರಕರಣಗಳು ದೇಶದ ಕೋಮು ವಾತಾವರಣವನ್ನು ಹಾಳು ಮಾಡುತ್ತಿದ್ದು, ಈ ಎಲ್ಲಾ ಪ್ರಕರಣಗಳಿಗೆ ಕಡಿವಾಣ ಹಾಕಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯ್ದೆ, ದೇಶಕ್ಕೆ ಸ್ವಾಂತತ್ರ್ಯ ಬರುವಾಗ ಇದ್ದ ಹಾಗೆಯೇ ಧಾರ್ಮಿಕ ಸ್ಥಳ, ನಿರ್ಮಾಣಗಳು ಮುಂದುವರಿಸಬೇಕು. ಅದರ ಸ್ವರೂಪದಲ್ಲಿ ಬದಲಾವಣೆ ಮಾಡಬಾರದು ಎಂದು ಹೇಳುತ್ತದೆ. ಹೀಗಿರುವಾಗ, ಧಾರ್ಮಿಕ ಸ್ಥಳಗಳ ಹಕ್ಕು ಪ್ರತಿಪಾದಿಸಿ ಅರ್ಜಿ ಸಲ್ಲಿಸುವುದು. ಅದನ್ನು ಪರಿಗಣಿಸಿ ನ್ಯಾಯಾಲಯಗಳು ಸಮೀಕ್ಷೆಗೆ ಆದೇಶಿಸುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಇದನ್ನೂ ಓದಿ : “ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...