Homeಮುಖಪುಟಉದಯನಿಧಿ, ರಾಜಾ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶಿಸುವಂತೆ ಸುಪ್ರೀಂಗೆ ಅರ್ಜಿ

ಉದಯನಿಧಿ, ರಾಜಾ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶಿಸುವಂತೆ ಸುಪ್ರೀಂಗೆ ಅರ್ಜಿ

- Advertisement -
- Advertisement -

ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್  ಮತ್ತು ಸಂಸದ ರಾಜಾ ವಿರುದ್ಧ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ದ್ವೇಷ ಭಾಷಣ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲು ಸುಪ್ರೀಂಕೋರ್ಟ್ ನಿರ್ದೇಶನವನ್ನು ನೀಡಿದೆ. ಇದನ್ನು ದೆಹಲಿ ಪೊಲೀಸರು ಮತ್ತು ಚೆನ್ನೈ ಪೊಲೀಸರು ಪಾಲಿಸದೆ ನ್ಯಾಯಾಂಗ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಧಾರ್ಮಿಕ ಭಾವನೆಗಳನ್ನು ಕೆರಳಿಸುವ, ಹಿಂದೂ ಧರ್ಮದ ಅನುಯಾಯಿಗಳಿಗೆ ಅವಮಾನ ಮತ್ತು ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಹುಟ್ಟುಹಾಕುವ ಕೃತ್ಯಕ್ಕಾಗಿ ಇವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮನವಿಯಲ್ಲಿ ಕೋರಲಾಗಿದೆ. ಉದಯನಿಧಿ  ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A, 153B, 295A ಮತ್ತು 505ರ ಅಡಿಯಲ್ಲಿ ಪ್ರಕರಣ ದಾಖಲಿಸಲು ನಿರ್ದೇಶಿಸುವಂತೆ ಕೋರಲಾಗಿದೆ.

ಇದಲ್ಲದೆ ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ತಮಿಳುನಾಡಿನ ಸಂಸದ ಮತ್ತು ಮಾಜಿ ಕ್ಯಾಬಿನೆಟ್ ಸಚಿವ ಎ ರಾಜಾ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ರಾಜಾ   ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗಕ್ಕೆ  ಹೋಲಿಸಿದ್ದಾರೆ.

ಈ ಕುರಿತು ವಕೀಲ ವಿನೀತ್ ಜಿಂದಾಲ್ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಹಿಂದೂ ಮತ್ತು ಸನಾತನ ಧರ್ಮದ ಅನುಯಾಯಿಯಾಗಿರುವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೇಳಿದ್ದಾರೆ.

ಸನಾತನ ಧರ್ಮದ  ಕುರಿತು ಉದಯನಿಧಿ ಹೇಳಿಕೆಯನ್ನು ಸಮರ್ಥಿಸಿಕೊಂಡ  ಡಿಎಂಕೆ ಸಂಸದ ರಾಜಾ, ಉದಯನಿಧಿ ಅವರು ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ಕಾಯಿಲೆಗಳಿಗೆ ಮಾತ್ರ ಹೋಲಿಸಿದ್ದಾರೆ ಆದರೆ ಅದನ್ನು ಎಚ್‌ಐವಿ ಮತ್ತು ಕುಷ್ಟರೋಗಕ್ಕೆ ಹೋಲಿಸಬೇಕು ಎಂದು ಹೇಳಿದ್ದಾರೆ.

ಮತ್ತೊಂದು ವಿಡಿಯೋದಲ್ಲಿ ಎ. ರಾಜಾ ಅವರು ಅನುಮತಿ ನೀಡಿದರೆ ಸನಾತನ ಧರ್ಮದ ಬಗ್ಗೆ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ. ಪ್ರಧಾನಿ ಸಭೆ ಕರೆದರೆ ಮತ್ತು ಅವರು ನನಗೆ ಅನುಮತಿ ನೀಡಿದರೆ ಎಲ್ಲಾ ಕ್ಯಾಬಿನೆಟ್ ಮಂತ್ರಿಗಳಿಗೆ ಉತ್ತರಗಳನ್ನು ನೀಡಲು ನಾನು ಸಿದ್ಧನಿದ್ದೇನೆ. ಯಾವುದು ಸನಾತನ ಧರ್ಮ ಎಂದು ನಾನು ಹೇಳುತ್ತೇನೆ ಎಂದು ಹೇಳಿದ್ದರು.

ಇದನ್ನು ಓದಿ: ಸನಾತನ ಧರ್ಮವನ್ನು ಎಚ್‌ಐವಿ, ಕುಷ್ಟರೋಗಕ್ಕೆ  ಹೋಲಿಸಬೇಕು: ಡಿಎಂಕೆ ಸಂಸದ ರಾಜಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...