Homeಅಂತರಾಷ್ಟ್ರೀಯಯೆಮೆನ್‌ನಲ್ಲಿ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಯೆಮೆನ್‌ನಲ್ಲಿ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಜುಲೈ 16ರಂದು ಯೆಮೆನ್‌ನಲ್ಲಿ ಮರಣದಂಡನೆ ಜಾರಿಯಾಗಲಿದೆ. ಅದನ್ನು ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಪೀಠದ ಮುಂದೆ ಹಿರಿಯ ವಕೀಲ ರಾಗೇಂತ್ ಬಸಂತ್ ಈ ವಿಷಯವನ್ನು ಪ್ರಸ್ತಾಪಿಸಿ, ತುರ್ತು ವಿಚಾರಣೆಗೆ ಕೋರಿದ್ದಾರೆ. ಯೆಮನ್‌ನ ಶರಿಯತ್ ಕಾನೂನಿನ ಪ್ರಕಾರ ಮೃತರ ಸಂಬಂಧಿಕರು ಬ್ಲಡ್ ಮನಿ ಸ್ವೀಕರಿಸಿ ಕ್ಷಮೆ ನೀಡಲು ಒಪ್ಪಿಕೊಂಡರೆ ಅಪರಾಧಿ ಶಿಕ್ಷೆಯಿಂದ ಪಾರಾಗುತ್ತಾರೆ. ಹಾಗಾಗಿ, ಆ ಆಯ್ಕೆಯನ್ನು ಅನ್ವೇಷಿಸಲು ಮಾತುಕತೆ ನಡೆಸಬಹುದು ಎಂದು ವಾದಿಸಿದ್ದಾರೆ. ಬಸಂತ್ ಅವರಿಗೆ ವಕೀಲ ಕೆ ಸುಭಾಷ್ ಚಂದ್ರನ್ ಸಹಕಾರ ನೀಡಿದ್ದಾರೆ.

‘ಸೇವ್ ನಿಮಿಷಾ ಪ್ರಿಯಾ ಆಕ್ಷನ್ ಕೌನ್ಸಿಲ್’ ಎಂಬ ಹೆಸರಿನ ಸಮಿತಿಯ ಪರವಾಗಿ ಸಲ್ಲಿಕೆಯಾದ ಅರ್ಜಿಯಲ್ಲಿ, ರಾಜತಾಂತ್ರಿಕ ಮಾರ್ಗಗಳ ಮೂಲಕ ನಿಮಿಷಾ ಪ್ರಿಯಾ ಅವರನ್ನು ಮರಣದಂಡನೆಯಿಂದ ಪಾರು ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಲಾಗಿದೆ.

ನಿಮಿಷಾ ಅವರಿಗೆ ಏಕೆ ಮರಣದಂಡನೆ ವಿಧಿಸಲಾಗಿದೆ? ಎಂಬ ನ್ಯಾಯಮೂರ್ತಿ ಧುಲಿಯಾ ಅವರ ಪ್ರಶ್ನೆಗೆ ಉತ್ತರಿಸಿದ ವಕೀಲ ಬಸಂತ್, “ಕೇರಳದ ನರ್ಸ್ ನಿಮಿಷಾ ಅವರು ಕೆಲಸಕ್ಕಾಗಿ ಯೆಮನ್‌ಗೆ ಹೋಗಿದ್ದರು. ಅಲ್ಲಿ ಸ್ಥಳೀಯ ವ್ಯಕ್ತಿಯೊಬ್ಬ ಅವರಿಗೆ ಕಿರುಕುಳ ಕೊಡುತ್ತಿದ್ದ. ಈ ಕಾರಣಕ್ಕೆ ಆತನನ್ನು ಕೊಲೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ಈ ವೇಳೆ, ಜುಲೈ 14ರಂದು ಅರ್ಜಿ ವಿಚಾರಣೆ ಮಾಡುವುದಾಗಿ ಪೀಠ ಹೇಳಿದೆ. ತಕ್ಷಣ ಮಧ್ಯಪ್ರವೇಶಿಸಿದ ವಕೀಲ ಬಸಂತ್, “ಜುಲೈ 16ರಕ್ಕೆ ಮರಣದಂಡನೆ ನಿಗದಿಯಾಗಿರುವ ಕಾರಣ, ಎರಡು ದಿನ ಮುಂಚೆ ವಿಚಾರಣೆ ಕೈಗೆತ್ತಿಕೊಂಡರೆ ಪರಿಣಾಮ ಬೀರದಿರಬಹುದು. ರಾಜತಾಂತ್ರಿಕ ಮಾತುಕತೆಗೆ ಸಮಯ ಬೇಕಿದೆ. ಹಾಗಾಗಿ, ಇಂದು ಅಥವಾ ನಾಳೆ ವಿಚಾರಣೆ ನಡೆಸುವಂತೆ ಕೋರಿದ್ದಾರೆ.

2017ರ ಜುಲೈನಲ್ಲಿ ಯೆಮನ್‌ ಪ್ರಜೆ ತಲಾಲ್ ಅಬ್ದೋ ಮಹದಿ ಎಂಬಾತನನ್ನು ಹತ್ಯೆಗೈದ ಪ್ರಕರಣದಲ್ಲಿ ನಿಮಿಷಾ ಪ್ರಿಯಾ ಮರಣದಂಡನೆಗೆ ಗುರಿಯಾಗಿದ್ದಾರೆ. ಮೃತ ಅಬ್ದೋ ಮಹದಿ ನಿಮಿಷಾ ಅವರ ಪಾಸ್‌ಪೋರ್ಟ್ ತನ್ನ ಬಳಿ ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ನಿಮಿಷಾ ಅವರು, ಆತನಿಗೆ ನಿದ್ರೆ ಬರುವ ಚುಚ್ಚುಮದ್ದನ್ನು ಚುಚ್ಚಿ ಪಾಸ್‌ಪೋರ್ಟ್ ತೆಗೆದುಕೊಳ್ಳುವ ಪ್ಲಾನ್ ಮಾಡಿದ್ದರು. ಆದರೆ ಚುಚ್ಚುಮದ್ದು ಚುಚ್ಚಿದ ಬಳಿಕ ಅಬ್ದೋ ಮೃತಪಟ್ಟಿದ್ದ.

ಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...