Homeಮುಖಪುಟವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಅರ್ಜಿ: ಕೇಂದ್ರದಿಂದ ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಕೆ

ವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಅರ್ಜಿ: ಕೇಂದ್ರದಿಂದ ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಕೆ

- Advertisement -
- Advertisement -

ವಕ್ಫ್‌ (ತಿದ್ದುಪಡಿ) ಕಾಯ್ದೆ,2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಏಪ್ರಿಲ್ 15 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಕೇಂದ್ರ ಸರ್ಕಾರ ಮಂಗಳವಾರ (ಏ.8) ಕೇವಿಯಟ್ ಸಲ್ಲಿಸಿದ್ದು, ವಕ್ಫ್‌ ಅರ್ಜಿಗಳ ಸಂಬಂಧ ಯಾವುದೇ ಆದೇಶ ಹೊರಡಿಸುವ ಮುನ್ನ ತನ್ನ ವಾದವನ್ನು ಆಲಿಸುವಂತೆ ಕೋರಿದೆ.

ತಮ್ಮ ವಾದವನ್ನು ಆಲಿಸದೆ ಆದೇಶ ನೀಡದಂತೆ ಕೋರಿ ಹೈಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ಯಾವುದೇ ಪಕ್ಷಕಾರರು ಸಲ್ಲಿಸುವ ಅರ್ಜಿಯನ್ನು ಕೇವಿಯೆಟ್ ಎನ್ನಲಾಗುತ್ತದೆ.

ಈ ಮಧ್ಯೆ, ಕಳೆದ ವಾರ ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಮಂಗಳವಾರದಿಂದ ಜಾರಿಗೆ ಬರಲಿದೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ.

ವಕ್ಫ್‌ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಜಮಿಯತ್ ಉಲಮಾ-ಇ-ಹಿಂದ್, ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ), ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ, ಸಂಸದರಾದ ಅಸಾದುದ್ದೀನ್ ಓವೈಸಿ, ಮೊಹಮ್ಮದ್ ಜಾವೆದ್, ಅಮಾನುಲ್ಲಾ ಖಾನ್ ಸೇರಿದಂತೆ 10ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿವೆ.

ಈ ಅರ್ಜಿಗಳಿಗೆ ಸಂಬಂಧಿತ ಬೆಳವಣಿಗೆಗಳ ಬಗ್ಗೆ ಮಾಹಿತಿಯಿರುವ ವಕೀಲರು, ಏಪ್ರಿಲ್ 15ರಂದು ಅರ್ಜಿಗಳು ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ, ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅರ್ಜಿಗಳ ವಿಚಾರಣೆ ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ.

ವಕ್ಫ್‌ ಕಾಯ್ದೆ ಸಂಬಂಧಿತ ಅರ್ಜಿಗಳನ್ನು ತುರ್ತು ವಿಚಾರಣೆ ನಡೆಸುವಂತೆ ಜಮಿಯತ್ ಉಲಮಾ-ಇ-ಹಿಂದ್ ಪರ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು. ಆದರೆ, ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸರಿಯಾದ ಸಮಯಕ್ಕೆ ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಏಪ್ರಿಲ್ 7ರಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಭರವಸೆ ನೀಡಿದೆ.

ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರ ಪಡೆದ ವಕ್ಫ್‌ (ತಿದ್ದುಪಡಿ) ಮಸೂದೆಗೆ ಏಪ್ರಿಲ್ 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದಾರೆ. ಹಾಗಾಗಿ, ಮಸೂದೆ ಈಗ ಕಾಯ್ದೆ ಆಗಿ ಮಾರ್ಪಟ್ಟಿದೆ.

ಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...