Homeಮುಖಪುಟಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

ಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾನಿಲಯವು ಶುಕ್ರವಾರ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಪತ್ರ ಬರೆದಿದ್ದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದಲ್ಲಿ ಆಕ್ರಮಿಸಿಕೊಂಡಿದ್ದಾರೆ ಎನ್ನಲಾದ ಪ್ಲಾಟ್‌ನ ಭಾಗಗಳನ್ನು ತಕ್ಷಣವೇ ಹಸ್ತಾಂತರಿಸಬೇಕು ಎಂದು ಸೂಚಿಸಿದೆ.

“ನೀವು 1.38 ಎಕರೆ ಭೂಮಿಯನ್ನು ಹೊಂದಿದ್ದೀರಿ. ಆದರೆ ಕಾನೂನಾತ್ಮಕವಾಗಿ 1.25 ಎಕರೆಗಿಂತ ಭೂಮಿ ಹೆಚ್ಚಿದೆ” ಎಂದು ವಿಶ್ವವಿದ್ಯಾಲಯದ ಆಡಳಿತವು ಸೇನ್‌ಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಕಳೆದ ಮೂರು ದಿನಗಳಲ್ಲಿ ಭೂಮಿಗೆ ಸಂಬಂಧಿಸಿದಂತೆ ಸೇನ್ ಅವರಿಗೆ ವಿಶ್ವವಿದ್ಯಾಲಯ ಬರೆಯುತ್ತಿರುವ ಎರಡನೇ ಪತ್ರ ಇದಾಗಿದೆ. ಮಂಗಳವಾರ, ವಿಶ್ವ ಭಾರತಿ ವಿಶ್ವವಿದ್ಯಾಲಯವು ಸೇನ್ ಅವರಿಗೆ ನೋಟಿಸ್ ನೀಡಿದ್ದು, ಈ ಜಾಗವು ಅವರ ಕುಟುಂಬ ಒಡೆತನದ ಎಸ್ಟೇಟ್ ಭಾಗವಲ್ಲ ಎಂದು ಹೇಳಿ ಭೂಮಿಯನ್ನು ಹಿಂದಿರುಗಿಸುವಂತೆ ಸೂಚಿಸಿತ್ತು.

ಸಾರ್ವಜನಿಕ ಕೇಂದ್ರೀಯ ವಿಶ್ವವಿದ್ಯಾನಿಲಯವಾದ ವಿಶ್ವ ಭಾರತಿ ತನ್ನ ಆವರಣದೊಳಗೆ ಅಕ್ರಮ ಪ್ಲಾಟ್ ಹೊಂದಿರುವವರ ಪಟ್ಟಿ ಮಾಡಿತ್ತು. ಅದರಲ್ಲಿ ಸೇನ್ ಹೆಸರಿಸಿತ್ತು.

ನೊಬೆಲ್ ಪ್ರಶಸ್ತಿ ವಿಜೇತ ಸೇನ್‌ ಶಾಂತಿನಿಕೇತನದಲ್ಲಿ ತಮ್ಮ ಕುಟುಂಬದ ಮನೆಯನ್ನು ಹೊಂದಿದ್ದಾರೆ, ಇದನ್ನು ಅವರ ಅಜ್ಜ ಮತ್ತು ಸಂಸ್ಕೃತ ವಿದ್ವಾಂಸರಾದ ಕ್ಷಿತಿಮೋಹನ್ ಸೇನ್ ಅವರು ಕಟ್ಟಿದ್ದಾಗಿದೆ. ಈ ಪಟ್ಟಿಯು ಸೇನ್ ಅವರ ಮನೆಯಾದ ‘ಪ್ರತಿಚಿ’ ಹೆಸರನ್ನು ಒಳಗೊಂಡಿದೆ.

“ನಮ್ಮ ಕುಟುಂಬಕ್ಕೆ 100 ವರ್ಷಗಳ ಕಾಲ ಭೂಮಿಯನ್ನು ಗುತ್ತಿಗೆ ನೀಡಲಾಗಿದೆ. ಅದರಲ್ಲಿ ಕೆಲವನ್ನು ನನ್ನ ತಂದೆ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಿ ಮಾರುಕಟ್ಟೆಯಿಂದ ಖರೀದಿಸಿದ್ದಾರೆ” ಎಂದು ಸೇನ್ ಹೇಳಿಕೊಂಡಿದ್ದರು.

“ಕ್ಯಾಂಪಸ್‌ನಲ್ಲಿರುವ ನಮ್ಮ ಆಸ್ತಿಯನ್ನು ಹಿಂದಿರುಗಿಸುವಂತೆ ಕೇಳುತ್ತಿರುವ ವಿಶ್ವ ಭಾರತಿ ವಿಶ್ವವಿದ್ಯಾಲಯದ ಉದ್ದೇಶ ಅರ್ಥವಾಗುತ್ತಿಲ್ಲ” ಎಂದು ಸೇನ್‌ ದೂರಿದ್ದಾರೆ.

“ಅವರ [ವಿಶ್ವವಿದ್ಯಾಲಯದ ಅಧಿಕಾರಿಗಳ] ಚಿಂತನೆಯಲ್ಲಿ ನನಗೆ ಯಾವುದೇ ಸೂಕ್ಷ್ಮತೆ ಕಾಣುತ್ತಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ವಿಶ್ವಭಾರತಿ ವಿಶ್ವವಿದ್ಯಾಲಯದ ಈ ಧೋರಣೆಯ ಹಿಂದಿನ ರಾಜಕೀಯ ನನಗೂ ಅರ್ಥವಾಗುತ್ತಿಲ್ಲ. ಇದು 1940 ರ ದಶಕದಲ್ಲಿ ವಿಶ್ವಭಾರತಿಯಿಂದ ಗುತ್ತಿಗೆ ಪಡೆದ ಭೂಮಿಯಲ್ಲಿ ನಿರ್ಮಿಸಲಾದ ನಮ್ಮ ನಿವಾಸ ಇದಾಗಿದೆ” ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಲವಾರು ನೀತಿಗಳ ಬಗ್ಗೆ ಸೇನ್ ಅವರು ತಮ್ಮ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಜನವರಿ 15ರಂದು ಪ್ರತಿಕ್ರಿಯಿಸಿದ್ದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದರಿಂದ ದೇಶದಲ್ಲಿ ಅಲ್ಪಸಂಖ್ಯಾತರ ಪಾತ್ರವನ್ನು ಕಡಿಮೆ ಮಾಡಲಾಗುತ್ತದೆ ಮತ್ತು ಬಹುಸಂಖ್ಯಾತ ಶಕ್ತಿಗಳನ್ನು ಪ್ರೋತ್ಸಾಹಿಸಲಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...