HomeUncategorizedಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ - 2025 ಹಾಗೂ ಚಲೋ ಕಲಬುರಗಿ...

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

- Advertisement -
- Advertisement -

ಏಕ ಸಂಸ್ಕೃತಿಯ ಹೇರಿಕೆಯ ವಿರುದ್ಧ ಕಲಬುರಗಿಯಲ್ಲಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವ – 2025’ ಹಾಗೂ ಚಲೋ ಕಲಬುರಗಿ ರ‍್ಯಾಲಿಯನ್ನು ರಾಜ್ಯದ ಎಡ, ದಲಿತ, ಕಾರ್ಮಿಕ, ಮಹಿಳಾ ಮತ್ತು ಬಸವಾದಿ ಸೇರಿದಂತೆ ಸುಮಾರು 40 ಸಂಘಟನೆಗಳು ಜನವರಿ 17, 18 ಮತ್ತು 19ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿವೆ. ಈ ನಡುವೆ, ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳು ಕೂಡಾ ಜನವರಿ 29 ಮತ್ತು ಫೆಬ್ರವರಿ 6ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ವನ್ನು ಆಯೋಜಿಸಿವೆ.

ಸೌಹಾರ್ದ ಕರ್ನಾಟಕ ವೇದಿಕೆ ಆಯೋಜಿಸಿರುವ ಬಹುತ್ವ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಲು ಹಲವಾರು ಲಿಂಗಾಯತ ಮಠಾಧೀಶರು ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ, ಗದಗಿನ ತೋಂಟದ ಸಿದ್ಧರಾಮ ಸ್ವಾಮೀ, ಇಲಕಲ್ಲಿನ ಗುರುಮಹಾಂತ ಸ್ವಾಮೀ, ಗುರುಮಠಕಲ್‌ನ ಶಾಂತವೀರ ಸ್ವಾಮಿ, ಬಸವ ಕಲ್ಯಾಣದ ಗಂಗಾಂಬಿಕ ಅಕ್ಕ ಸೇರಿದಂತೆ ಹಲವಾರು ಪ್ರಮುಖರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜನವರಿ 17 ರಂದು ಪ್ರಾರಂಭವಾಗಲಿರುವ ಬಹುತ್ವ ಸಂಸ್ಕೃತಿ ಉತ್ಸವವು ಸೌಹಾರ್ದ ಯಾತ್ರೆಯೊಂದಿಗೆ ಆರಂಭವಾಗಲಿದ್ದು, ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಮಹಾತ್ಮ ಬಸವೇಶ್ವರ ಮತ್ತು ಬಾಬಾಸಾಹೇಬರ ಪುತ್ಥಳಿ ಮಾರ್ಗವಾಗಿ ಖ್ವಾಜಾ ಬಂದೇನವಾಜ್ ದರ್ಗಾದವರೆಗೆ ಇದು ನಡೆಯಲಿದೆ. ಇದೇ ವೇಳೆ “ನಮ್ಮ ನಡಿಗೆ ಶರಣ, ಸಂತ, ಸೂಫಿ ಪ್ರಜ್ಞೆಯೆಡೆಗೆ” ಘೋಷಣೆಯಡಿಯಲ್ಲಿ ವಾಹನ ಜಾಥಾ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 18ರಂದು “ಭಾವೈಕ್ಯದ ಹೊನಲು: ಸಮನ್ವಯದ ಗಾಯನ ಗಮಲು” ಘೋಷಣೆಯಡಿ ದಿನವಿಡೀ ತತ್ವಪದ, ಸೂಫಿಪದ, ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಜನವರಿ 19ರಂದು ದಿನವಿಡೀ “ಬಹುತ್ವ ಭಾರತದ ಜಾಗ್ರತ ಅಭಿಯಾನ” ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ನಾಡಿನೆಲ್ಲೆಡೆಯಿಂದ ಸರ್ವಧರ್ಮಗಳ ನೇತಾರರು, ವಿಚಾರವಾದಿಗಳು, ಸಾಮಾಜಿಕ ಹೋರಾಟಗಾರರು, ಮಾನವಹಕ್ಕುಗಳ ಹೋರಾಟಗಾರರು, ನಾಡಿನ ದುಡಿಯುವ ವರ್ಗದ ಜನರು ಸಮಾವೇಶಗೊಂಡು ಸಮತೆ-ಮಮತೆಗಳ ಸಂದೇಶ ಸಾರಲಿದ್ದಾರೆ ಎಂದು ಸಂಘಟಕರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಕಲಬುರಗಿಯು ಬಸವಕಲ್ಯಾಣದ ಹೆಬ್ಬಾಗಿಲು. ಶರಣಬಸವಪ್ಪನವರ ಕರ್ಮಭೂಮಿ ಮತ್ತು ಸೂಫಿಸಂತ ಖ್ವಾಜಾ ಬಂದೇನವಾಜ್‌ರ ಪ್ರಯೋಗ ಭೂಮಿ. ಕ್ರಿ.ಶ 1ನೇ ಶತಮಾನದಲ್ಲಿ ಚಿತ್ತಾಪೂರದ ಕನಗವಳ್ಳಿಯಲ್ಲಿ ನಿರ್ಮಿಸಲಾದ ಬೌದ್ಧ ಮಹಾಸ್ತೂಪವು ಸಾಮ್ರಾಟ್ ಅಶೋಕನ ಕಾಲದಲ್ಲಿ ಇದು ಬೌದ್ಧ ಭೂಮಿಯಾಗಿತ್ತು ಎಂಬುದನ್ನು ಸಾಕ್ಷೀಕರಿಸುತ್ತಿದೆ. ಅತ್ಯಂತ ಪ್ರಾಚೀನ ಕಾಲದಿಂದಲೂ ಹಲವು ಧರ್ಮ, ಜಾತಿ, ಮತ, ಪಂಥ ಮತ್ತು ಭಾಷೆಗಳ ಸಮ್ಮಿಲನಕ್ಕೆ ನೆಲೆಮನೆಯಾಗಿದೆ. ಧಾರ್ಮಿಕ ಸಾಮರಸ್ಯ, ಸಹಬಾಳ್ವೆ, ಮತ ಸಮನ್ವಯತೆಗೆ ಪ್ರಸಿದ್ಧಿಯಾಗಿರುವ ಈ ನಾಡು¸ ಸಾಂಸ್ಕೃತಿಕ ಬಹುತ್ವಕ್ಕೂ ಹೆಸರುವಾಸಿಯಾಗಿದೆ. ಇಂಥ ಕಲ್ಬುರ್ಗಿಯನ್ನು ಇತ್ತೀಚಿಗೆ ಕೋಮುವಾದೀಕರಣಗೊಳಿಸುವ ನಿಷ್ಫಲ ಪ್ರಯತ್ನಗಳು ನಡೆಯುತ್ತಿವೆ” ಎಂದು ಸಂಘಟಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

“ಉಗ್ರ ಹಿಂದುತ್ವವಾದಿಗಳು ಸಂಸ್ಕೃತಿ ಉತ್ಸವದ ನೆಪದಲ್ಲಿ ಏಕ ಸಂಸ್ಕೃತಿಯನ್ನು ಹೇರುತ್ತಾ ನಮ್ಮ ನಾಡಿನ ಭಾವೈಕ್ಯ ಪರಂಪರೆಯನ್ನು ಹಾಳು ಮಾಡಲು ಮುಂದಾಗುತ್ತಿದ್ದಾರೆ. ಇದಕ್ಕೆ ಉತ್ತರವೆಂಬಂತೆ ಕೆಲವು ಅಲ್ಪಸಂಖ್ಯಾತ ಮೂಲಭೂತವಾದಿಗಳು ಮತಾಂಧತೆಯಲ್ಲಿ ಮುಳುಗುತ್ತಿದ್ದಾರೆ. ಅತ್ಯಂತ ಅಪಾಯಕಾರಿ ಕೋಮು ಚಟುವಟಿಕೆಗಳು ಪ್ರಭುತ್ವ ಪ್ರೇರಿತ ಅಧಿಕಾರದ ಮೂಲಕ ನಡೆಯುತ್ತಿವೆ. ಈ ನಡೆಗಳು ನಮ್ಮ ಬದುಕನ್ನು ಇನ್ನಷ್ಟು ದುರ್ಬಲಗೊಳಿಸುತ್ತವೆ. ಈಗಾಗಲೇ ಬಡತನ, ಅಪೌಷ್ಟಿಕತೆ, ಅನಿಯಂತ್ರಿತ ವಲಸೆ, ನಿರುದ್ಯೋಗ, ಪ್ರಾದೇಶಿಕ ಅಸಮಾನತೆ, ಮೌಢ್ಯಗಳಿಂದ ನಲುಗುತ್ತಿರುವ ಜನಸಮುದಾಯಗಳನ್ನು ಮತ್ತಷ್ಟು ಪ್ರಪಾತಕ್ಕೆ ತಳ್ಳುತ್ತಿವೆ.” ಎಂದು ಅವರು ಹೇಳಿದ್ದಾರೆ.

“ಕೋಮುವಾದಿಗಳ ಆಕರ್ಷಕ ಮಾತುಗಳಿಗೆ ಮರುಳಾದ ನಮ್ಮ ಯುವಜನರು, ವಿಶೇಷವಾಗಿ ದಲಿತ, ಶೂದ್ರ ಮುಂತಾಗಿ ಹಿಂದುಳಿದ ಯುವಜನರು ಅವರು ತೋಡಿದ ಖೆಡ್ಡಾಗಳಿಗೆ ಬೀಳುತ್ತಿದ್ದಾರೆ. ಧಾರ್ಮಿಕ ದ್ವೇಷಗಳಿಂದ ಕೋಮುದಂಗೆಗಳಲ್ಲಿ ನಿರತರಾಗಿ ಕೇಸು ಹಾಕಿಸಿಕೊಂಡು ಒದ್ದಾಡುತ್ತಿದ್ದಾರೆ. ಹಿಂದೂ ನಾವೆಲ್ಲ ಒಂದು ಎನ್ನುತ್ತ ದಲಿತಾದಿ ಶೂದ್ರ ಬಡಮಕ್ಕಳನ್ನು ಮತಾಂಧತೆಯಲ್ಲಿ ಕೆರಳಿಸಿ ಅವರೆಲ್ಲರನ್ನು ಕ್ರಿಮಿನಲ್‌ಗಳಾಗಿಸುತ್ತಿದ್ದಾರೆ. ನಮ್ಮ ತರುಣ ಪೀಳಿಗೆ ಕೋಮುದ್ವೇಷದ ದಳ್ಳುರಿಗೆ ಸಿಲುಕದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹಾಗಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಸಂಘಟಕರು ಹೇಳಿದ್ದಾರೆ.

ಇದನ್ನೂಓದಿ:  ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...