Homeಮುಖಪುಟಪ.ಬಂಗಾಳ ಚುನಾವಣೆ: AAP ಯ ದೆಹಲಿ ಮಾದರಿ ಪ್ರಚಾರ ತಂತ್ರ ಬಳಸಲಿರುವ ಮಮತಾ ಬ್ಯಾನರ್ಜಿ

ಪ.ಬಂಗಾಳ ಚುನಾವಣೆ: AAP ಯ ದೆಹಲಿ ಮಾದರಿ ಪ್ರಚಾರ ತಂತ್ರ ಬಳಸಲಿರುವ ಮಮತಾ ಬ್ಯಾನರ್ಜಿ

"ಪ್ರಚಾರದ ತಂತ್ರವಾಗಿ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಬಳಸಿದ್ದ "ಅಭಿವೃದ್ಧಿ v/s ಹಿಂದುತ್ವ" ವಿಧಾನವನ್ನು ಬಳಸಿಕೊಳ್ಳುವುದಾಗಿ ತಿಳಿದುಬಂದಿದೆ"

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಇನ್ನೇನು ವಿಧಾನಸಭೆ ಚುನಾವಣೆ ಘೋಷಣೆಯಾಗಲಿದ್ದು, ಕೆಲವೇ ತಿಂಗಳಿನಲ್ಲಿ ಮತದಾನ ನಡೆಯಲಿದೆ. ಇದರ ಪ್ರಯುಕ್ತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಪ್ರಚಾರದ ತಂತ್ರವಾಗಿ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಬಳಸಿದ್ದ “ಅಭಿವೃದ್ಧಿ v/s ಹಿಂದುತ್ವ” ವಿಧಾನವನ್ನು ಬಳಸಿಕೊಳ್ಳುವುದಾಗಿ ತಿಳಿದುಬಂದಿದೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಮಮತಾ ಬ್ಯಾನರ್ಜಿಯವರ ಸರ್ಕಾರ ಜಾರಿಗೆ ತಂದಿರುವ ಅಭಿವೃದ್ಧಿ ಯೋಜನೆಗಳನ್ನು ಎತ್ತಿತೋರಿಸುವ ಅಂಶಗಳನ್ನು 2021 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಅಳವಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಮಮತಾ ಬ್ಯಾನರ್ಜಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿರಬೇಕಾದ ನಿರ್ದಿಷ್ಟ ವಿಷಯಗಳ ಬಗ್ಗೆ ಗಮನಹರಿಸಲು ಮಮತಾ ಬ್ಯಾನರ್ಜಿ ತಮ್ಮ ಪಕ್ಷದ ಕಾರ್ಯಕರ್ತರು, ಸಂಸದರು ಮತ್ತು ಶಾಸಕರಿಂದ ಸಲಹೆಗಳನ್ನು ಕೋರಿದ್ದಾರೆ.

“ದೆಹಲಿ ಚುನಾವಣೆಯಲ್ಲಿ ಬಿಜೆಪಿಯ ‘ಹಿಂದುತ್ವ’ದ ಆಕ್ರಮಣಕಾರಿ ಅಭಿಯಾನದ ವಿರುದ್ಧ ಅತ್ಯಂತ ಪರಿಣಾಮಕಾರಿಯಾಗಿದ್ದ ಆಪ್ ಪಕ್ಷದ ಪ್ರಚಾರದ ಮಾದರಿಯನ್ನು ನಾವು ಅನುಸರಿಸುತ್ತೇವೆ. ನಮ್ಮ ಪ್ರಣಾಳಿಕೆಯಲ್ಲಿ ಕಳೆದ 10 ವರ್ಷಗಳಲ್ಲಿ ಜಾರಿಗೆ ತರಲಾದ ಅಭಿವೃದ್ಧಿ ಯೋಜನೆಗಳನ್ನು ಎತ್ತಿತೋರಿಸುತ್ತೇವೆ. 2016 ರ ಚುನಾವಣೆಯಲ್ಲಿ ನಮ್ಮ ಪಕ್ಷ ಏನೇನು ಭರವಸೆಗಳನ್ನು ನೀಡಿತ್ತು ಮತ್ತು ಅದನ್ನು ಹೇಗೆ ನೆರವೇರಿಸಲಾಗಿದೆ ಎಂಬುದನ್ನು ಉಲ್ಲೇಖಿಸಲಿದ್ದೇವೆ” ಎಂದು ಟಿಎಂಸಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

2016 ರ ಚುನಾವಣೆಗೆ ಮೊದಲು ಘೋಷಿಸಲಾದ ಸರ್ಕಾರಿ ಯೋಜನೆಗಳನ್ನು ಪೂರ್ಣಗೊಳಿಸಲು ತೆಗೆದುಕೊಂಡ ಕಾಲಾವಕಾಶವನ್ನು ಸಹ ಈ ಪ್ರಣಾಳಿಕೆ ಉಲ್ಲೇಖಿಸುತ್ತದೆ.

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಅವರ ತಂಡ ನಡೆಸಿದ ಸಮೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಪ್ರಣಾಳಿಕೆ ರೂಪುಗೊಳ್ಳಲಿದ್ದು, ಇದರ ಪ್ರಕಾರ “ಬಿಜೆಪಿಯನ್ನು ಪ್ರಮುಖ ಪ್ರತಿಸ್ಪರ್ಧಿ ಎಂದು ಪರಿಗಣಿಸಿ ಪ್ರಣಾಳಿಕೆಯನ್ನು ವಿನ್ಯಾಸಗೊಳಿಸಲಾಗುವುದು. ಮತ್ತು ಬಿಜೆಪಿಯ ಒಡೆದು ಆಳುವ ನೀತಿಯನ್ನೂ ಸಹ ಉಲ್ಲೇಖಿಸಲಾಗುವುದು” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಾರ್ಯಕರ್ತರು ಮತ್ತು ಚುನಾಯಿತ ಪ್ರತಿನಿಧಿಗಳಿಂದ ಅಭಿಪ್ರಾಯವನ್ನು ಸಂಗ್ರಹಿಸಿದ ನಂತರ ಕರಡು ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ಪೊಲೀಸರಿಂದ ಬೂಟು ನೆಕ್ಕಿಸುತ್ತೇವೆ ಎಂದ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...