HomeಮುಖಪುಟMSP ಕುರಿತು ಕಾನೂನು ತರಲು ಪ್ರಧಾನಿ ಅಧಿವೇಶನ ಕರೆಯಲಿ: ರೈತ ಮುಖಂಡರ ಒತ್ತಾಯ

MSP ಕುರಿತು ಕಾನೂನು ತರಲು ಪ್ರಧಾನಿ ಅಧಿವೇಶನ ಕರೆಯಲಿ: ರೈತ ಮುಖಂಡರ ಒತ್ತಾಯ

- Advertisement -
- Advertisement -

ಒಂದು ದಿನದ ಸಂಸತ್ ಅಧಿವೇಶನವನ್ನು ಕರೆದು ಎಂಎಸ್‌ಪಿ ಗ್ಯಾರಂಟಿ ಕುರಿತು ಕಾನೂನು ತರಬೇಕು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಮಂಗಳವಾರ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

ಪ್ರಧಾನಿ ಒಂದು ದಿನದ ಸಂಸತ್ ಅಧಿವೇಶನವನ್ನು ಕರೆಯಬಹುದು ಮತ್ತು ಎಂಎಸ್‌ಪಿ ಕುರಿತು ಕಾನೂನನ್ನು  ಜಾರಿಗೆ ತರಬಹುದು. ಸಂಸತ್ತಿನಲ್ಲಿ ಕೇಂದ್ರವು ಎಂಎಸ್‌ಪಿ ಕಾನೂನನ್ನು ತಂದರೆ ಅದಕ್ಕೆ ಮತ ಹಾಕುತ್ತೇವೆ ಎಂದು ಎಲ್ಲಾ ವಿರೋಧ ಪಕ್ಷಗಳು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ಕಾಂಗ್ರೆಸ್, ಅಕಾಲಿದಳದಿಂದ ಹಿಡಿದು ತೃಣಮೂಲ ಕಾಂಗ್ರೆಸ್‌ವರೆಗೆ ಎಲ್ಲರೂ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಅವರು ಹೇಳಿದ್ದಾರೆ.

ಸೋಮವಾರ ನಡೆದ ‘ದೆಹಲಿ ಚಲೋ’ ಆಂದೋಲನದಲ್ಲಿ ಪಾಲ್ಗೊಂಡಿದ್ದ ರೈತ ಮುಖಂಡರು, ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಐದು ವರ್ಷಗಳ ಕಾಲದ ಅವಧಿಗೆ ಖರೀದಿಸುವ ಕೇಂದ್ರದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಕೇಂದ್ರದ ಪ್ರಸ್ತಾವನೆಯು ರೈತ ಸಮುದಾಯದ ಹಿತದೃಷ್ಟಿಯಿಂದ ಕೂಡಿಲ್ಲ ಎಂದು ರೈತ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ನಾವು ಬುಧವಾರ ಪಾದಯಾತ್ರೆ ಮಾಡುತ್ತೇವೆ ಎಂದು ರೈತ ಮುಖಂಡರು ಘೋಷಿಸಿದ್ದಾರೆ.

ನಮ್ಮ ಸಮಸ್ಯೆಗಳನ್ನು ಪರಿಹರಿಸಿ ಅಥವಾ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಿ ಶಾಂತಿಯುತವಾಗಿ ಪ್ರತಿಭಟಿಸಲು ದೆಹಲಿಗೆ ಹೋಗಲು ನಮಗೆ ಅವಕಾಶ ಮಾಡಿಕೊಡಿ ಎಂದು ನಾವು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಮತ್ತು ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟದಂತಹ ಸಹಕಾರ ಸಂಘಗಳು ಹಲಸು, ಉದ್ದಿನಬೇಳೆ ಬೆಳೆಯುವ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಿವೆ. ದಾಲ್ ಅಥವಾ ಮೆಕ್ಕೆಜೋಳವನ್ನು ಮುಂದಿನ ಐದು ವರ್ಷಗಳವರೆಗೆ MSPಯಲ್ಲಿ ಖರೀದಿಸಲು ಒಪ್ಪಂದವನ್ನು ಮಾಡಿಕೊಳ್ಳಲಿದೆ.  ಇದಕ್ಕಾಗಿ ಪೋರ್ಟಲ್‌ನ್ನು ಅಭಿವೃದ್ಧಿಪಡಿಸಲಾಗುವುದು, ಇದಲ್ಲದೆ ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ರೈತರೊಂದಿಗೆ ಕಾನೂನು ಒಪ್ಪಂದ ಮಾಡಿಕೊಂಡ ನಂತರ ಐದು ವರ್ಷಗಳವರೆಗೆ ಎಂಎಸ್‌ಪಿ ದರದಲ್ಲಿ ರೈತರಿಂದ ಹತ್ತಿ ಖರೀದಿಸಲಿದೆ ಎಂದು ಕೇಂದ್ರ ಸಚಿವರು ಹೇಳಿದ್ದರು.

ರೈತರ ಬೇಡಿಕೆಯೇನು? 

23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ರೈತರ ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಹೆಚ್ಚಳ ಬೇಡ, ರೈತರ  ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು, ಭೂ ಸ್ವಾಧೀನ ಕಾಯಿದೆ ಮತ್ತು 2020-21ರ ಪ್ರತಿಭಟನೆ ವೇಳೆ ಮೃತ ರೈತರಿಗೆ ಪರಿಹಾರವನ್ನು ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನು ಓದಿ: ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ನೀಡಿರುವುದು ಶೇ.1ಕ್ಕಿಂತ ಕಡಿಮೆ ಅನುದಾನ: ಸಚಿವ ಝಮೀರ್ ಅಹ್ಮದ್ ಖಾನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...