Homeಮುಖಪುಟಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

- Advertisement -
- Advertisement -

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠವು, ನಿಧಿಯು ಸರ್ಕಾರದ ನಿಯಂತ್ರಣದಲ್ಲಿರುವ ಅಥವಾ ಸರ್ಕಾರಿ ಸಂಸ್ಥೆಯಂತೆ ಪರಿಗಣಿಸಿದರೂ ಸಹ, ಅದಕ್ಕೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕು ಇದೆ ಎಂದಿದೆ.

ಪಿಎಂ ಕೇರ್ಸ್ ನಿಧಿಗೆ ನೀಡಲಾದ ತೆರಿಗೆ ವಿನಾಯಿತಿಗೆ ಸಂಬಂಧಿಸಿದಂತೆ ವಿವರಗಳನ್ನು ಆರ್‌ಟಿಐ ಕಾಯ್ದೆಯಡಿ ಒದಗಿಸುವಂತೆ ಆದಾಯ ತೆರಿಗೆ (ಐಟಿ) ಇಲಾಖೆಗೆ ನಿರ್ದೇಶಿಸಿದ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್‌ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಗಿರೀಶ್ ಮಿತ್ತಲ್ ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ ಮಿತ್ತಲ್ ಪರ ವಕೀಲರು, ಈ ನಿಧಿಯು ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(ಜೆ) ರಲ್ಲಿ ನೀಡಲಾದ ವಿನಾಯಿತಿಯ ಅಡಿಯಲ್ಲಿ ಬರುವುದಿಲ್ಲ ಎಂದು ವಾದಿಸಿದ್ದಾರೆ. ವ್ಯಕ್ತಿಯ ಗೌಪ್ಯತೆಯನ್ನು ರಕ್ಷಿಸಬೇಕಾದರೂ, ಪಿಎಂ ಕೇರ್ಸ್ ಫಂಡ್‌ನಂತಹ ಸಾರ್ವಜನಿಕ ದತ್ತಿ ಟ್ರಸ್ಟ್‌ಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ನಿಗದಿಪಡಿಸಿದೆ.

ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 138 ರಲ್ಲಿ ಒದಗಿಸಲಾದ ಮಾಹಿತಿಯನ್ನು (ಮೌಲ್ಯಮಾಪಕರಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವುದು) ಒದಗಿಸುವಂತೆ ನಿರ್ದೇಶಿಸುವ ಅಧಿಕಾರವನ್ನು ಸಿಐಸಿ ಹೊಂದಿಲ್ಲ ಎಂದು ಈ ಹಿಂದೆ ಏಕ ಸದಸ್ಯ ನ್ಯಾಯಾಧೀಶರು ಹೇಳಿದ್ದರು.

ಮುಂಬೈ ಮೂಲದ ಕಾರ್ಯಕರ್ತ ಗಿರೀಶ್ ಮಿತ್ತಲ್ ಅವರು ಆರ್‌ಟಿಐ ಕಾಯ್ದೆಯ ಸೆಕ್ಷನ್ 6ರ ಅಡಿಯಲ್ಲಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಸಿಐಸಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಐಟಿ ಇಲಾಖೆಯ ಸಿಪಿಐಒ ಸಲ್ಲಿಸಿದ್ದ ಮನವಿಯನ್ನು ಏಕ ಸದಸ್ಯ ನ್ಯಾಯಾಧೀಶರು ಪುರಸ್ಕರಿಸಿದ್ದರು. ಮಿತ್ತಲ್ ಅವರು ತಮ್ಮ ಅರ್ಜಿಯಲ್ಲಿ ಪಿಎಂ ಕೇರ್ಸ್ ನಿಧಿಗೆ ನೀಡಲಾದ ತೆರಿಗೆ ವಿನಾಯಿತಿಯ ಕುರಿತು ವಿವರಗಳನ್ನು ಕೋರಿದ್ದರು.

ಪಿಎಂ ಕೇರ್ಸ್ ನಿಧಿಯು ತನ್ನ ತೆರಿಗೆ ವಿನಾಯಿತಿ ಅರ್ಜಿಯಲ್ಲಿ ಸಲ್ಲಿಸಿದ್ದ ಎಲ್ಲಾ ದಾಖಲೆಗಳ ಪ್ರತಿಗಳು, ಅನುಮೋದನೆ ನೀಡಿದ ಫೈಲ್ ನೋಟ್‌ಗಳ ಪ್ರತಿಗಳು, ಏಪ್ರಿಲ್ 1, 2019 ರಿಂದ ಮಾರ್ಚ್ 31, 2020 ರವರೆಗೆ ಐಟಿ ಇಲಾಖೆಗೆ ಸಲ್ಲಿಸಲಾದ ಎಲ್ಲಾ ವಿನಾಯಿತಿ ಅರ್ಜಿಗಳ ಪಟ್ಟಿ, ಸಲ್ಲಿಸಿದ ದಿನಾಂಕ ಮತ್ತು ವಿನಾಯಿತಿ ಪಡೆದ ದಿನಾಂಕ ಮತ್ತು ಯಾವುದೇ ಅರ್ಜಿಗಳನ್ನು ತಿರಸ್ಕರಿಸಿದ್ದರೆ ಅದಕ್ಕೆ ಕಾರಣಗಳನ್ನು ಮಿತ್ತಲ್ ಕೇಳಿದ್ದರು.

ಜುಲೈ 2022ರಲ್ಲಿ ಸಿಐಸಿ ಆದೇಶವನ್ನು ಸಮನ್ವಯ ಪೀಠ ತಡೆಹಿಡಿದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೂಟರ್ನ್ ಹೊಡೆದ ಚುನಾವಣಾ ಆಯೋಗ : SIR ವಿರುದ್ಧದ ಹೋರಾಟದಲ್ಲಿ ಜನ ಸಂಘಟನೆಗಳಿಗೆ ಮತ್ತೊಂದು ಮಹತ್ವದ ಗೆಲುವು

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಹೋರಾಟದಲ್ಲಿ ಜನ ಸಂಘಟನೆಗಳಿಗೆ ಮತ್ತೊಂದು ಮಹತ್ವದ ಗೆಲುವಾಗಿದೆ. ಎಸ್‌ಐಆರ್ ವೇಳೆ ಡಿಲೀಟ್ ಪಟ್ಟಿಗೆ (ಎಎಸ್‌ಡಿಡಿ) ಬಿದ್ದ ಅರ್ಹ ಮತದಾರರು ತಮ್ಮ ಹಕ್ಕು ಮರಳಿ...

‘ಪ್ರಧಾನಿ ಮೋದಿಯನ್ನು ಗೊಂದಲಕ್ಕೀಡುಮಾಡಬೇಡಿ, ನನ್ನೊಂದಿಗೆ ಬಹಿರಂಗ ಚರ್ಚೆಗೆ ಒಪ್ಪಿಸಿ!’: ಅಮಿತ್ ಷಾಗೆ ರಾಹುಲ್ ಗಾಂಧಿ ಆಗ್ರಹ!

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೊಂದಲಕ್ಕೀಡುಮಾಡುವ ಬದಲು, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಇವಿಎಂ ಕುರಿತು ತಮ್ಮೊಂದಿಗೆ ಬಹಿರಂಗ ಚರ್ಚೆಗೆ...

‘ಅಮೆರಿಕ ಅಧ್ಯಕ್ಷರ ಹತ್ಯೆ ಮಾಡುವಂತೆ ಧ್ವನಿ ಕೇಳಿಸುತ್ತಿತ್ತು’: ವೈಟ್ ಹೌಸ್ ಬಳಿ ಮಾರಕಾಸ್ತ್ರಗಳಿದ್ದ ಕಾರಿನೊಂದಿಗೆ ವೆನಿಜುವೆಲ್ಲಾ ಪ್ರಜೆ ಬಂಧನ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ 26 ವರ್ಷದ ರೋನಿ ಯೋರ್ಡ್ರಿಕ್ಸ್ ಗುವಾನಿಪಾ ಚ್ರಿನೋಸ್ ಎಂಬ ವೆನಿಜುಎಲ್ಲಾ ಮೂಲದ ವಲಸಿಗನನ್ನು ಯುಎಸ್ ಸೀಕ್ರೆಟ್ ಸರ್ವಿಸ್...

‘E20 turned into 420’ : ಕರ್ನಾಟಕ ಸರ್ಕಾರದ ಪರಿಶೀಲನೆಯಲ್ಲಿ ಬಯಲಾದ ‘ಪೆಟ್ರೋಲ್ ಚೋರಿ’; ಕೇಂದ್ರದ ವಿರುದ್ಧ ಜನಾಕ್ರೋಶ

E20 ಹೆಸರಿನಲ್ಲಿ ಮಾರಾಟವಾಗುತ್ತಿರುವ ಪೆಟ್ರೋಲ್‌ನಲ್ಲಿ ಶೇಕಡ 30ಕ್ಕಿಂತ (31.2) ಅಧಿಕ ಎಥೆನಾಲ್ ಇರುವುದು ಕರ್ನಾಟಕ ಸರ್ಕಾರದ ನಡೆಸಿದ ಪರಿಶೀಲನೆಯಲ್ಲಿ ಬಟಾಬಯಲಾಗಿದ್ದು, ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮತ್ತು ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ...

ಜೆಡಿಎಸ್ ಸಮರ್ಥನೆ ಬಿಜೆಪಿಯ ರಾಜಕೀಯ ದಿವಾಳಿತನ ತೋರಿಸುತ್ತದೆ : ಆರ್. ಅಶೋಕ್ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಕರ್ನಾಟಕ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾಕ್ಸಮರ ತೀವ್ರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಆರ್. ಅಶೋಕ್ ಮಾಡಿದ ಕಟು...

ಪೆಟ್ರೋಲ್‌ನಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ : ಕೇಂದ್ರದಿಂದ ಸ್ಪಷ್ಟನೆ ಕೋರಿದ ಕರ್ನಾಟಕ ಸರ್ಕಾರ

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿಪಡಿಸಿದ ಶೇಕಡ 20ಕ್ಕಿಂತ ಹೆಚ್ಚು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದ್ದು, ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಇದರ ಮಟ್ಟವು...

ಸಿಜೆಐ ಸೂರ್ಯ ಕಾಂತ್ ವಿರುದ್ಧದ ಪೋಸ್ಟ್ ಪ್ರಕರಣ: ಕೇರಳ ಕಾಂಗ್ರೆಸ್ ನಾಯಕರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದ ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್...

ಗೃಹಲಕ್ಷ್ಮಿ ಯೋಜನೆಯಡಿ ₹2 ಸಾವಿರ ಪಡೆಯುವುದು ಫಲಾನುಭವಿಗಳ ಹಕ್ಕಲ್ಲ : ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಸ್ಪಷ್ಟನೆ

'ಗೃಹಲಕ್ಷ್ಮಿ' ಒಂದು ಕಲ್ಯಾಣ (ಪರೋಪಕಾರಿ) ಯೋಜನೆಯಾಗಿದ್ದು, ಇದರ ಅನುಷ್ಠಾನವು ಹೆಚ್ಚಾಗಿ ಆಡಳಿತಾತ್ಮಕ ಅಗತ್ಯತೆಗಳನ್ನು ಅವಲಂಬಿಸಿರುತ್ತದೆ. ಹಾಗಾಗಿ, ಈ ಯೋಜನೆಯ ಫಲಾನುಭವಿಗಳು ಇದನ್ನು ತಮ್ಮ ಹಕ್ಕು ಎಂದು ಪ್ರತಿಪಾದಿಸಲು ಸಾಧ್ಯವಿಲ್ಲ ಮತ್ತು ನ್ಯಾಯಾಂಗದ ಹಸ್ತಕ್ಷೇಪದ...

ಇನ್ಮುಂದೆ ಸರ್ಕಾರಿ ಯೋಜನೆಗಳ ಅರ್ಹತೆಗೆ ‘ಆಧಾರ್’ ಬದಲು ‘ವೋಟರ್ ಐಡಿ’?: ಕೇಂದ್ರ ಸಚಿವರ ಹೇಳಿಕೆಗೆ ರಾಹುಲ್ ಗಾಂಧಿ ತೀವ್ರ ಆಕ್ರೋಶ!

ಕೇಂದ್ರ ಸರ್ಕಾರಿ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಹಾಗೂ ಪಾವತಿ ಪ್ರಕ್ರಿಯೆಗಳನ್ನು ನಡೆಸಲು ಇನ್ಮುಂದೆ ಆಧಾರ್ ಕಾರ್ಡ್ ಬದಲು 'ವೋಟರ್ ಐಡಿ' (ಮತದಾರರ ಗುರುತಿನ ಚೀಟಿ) ಹಾಗೂ ಬಯೋಮೆಟ್ರಿಕ್ ಪರಿಶೀಲನೆಯನ್ನು ಆಧಾರವಾಗಿ ಬಳಸಲಾಗುವುದು...

AMU ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆಯಾದ ನಶ್ರಾ ನಯೀಮ್ : ಮೊದಲ ಬಾರಿಗೆ ಉನ್ನತ ಹುದ್ದೆಗೆ ಮಹಿಳೆ ಆಯ್ಕೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (AMUSU) 105 ವರ್ಷಗಳ ಇತಿಹಾಸದಲ್ಲೇ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಕಾನೂನು ವಿದ್ಯಾರ್ಥಿನಿ ನಶ್ರಾ ನಯೀಮ್ ಪಾತ್ರರಾಗಿದ್ದಾರೆ. ಶುಕ್ರವಾರ (ನ.6) ಪ್ರಕಟಗೊಂಡ ಚುನಾವಣೆಯ...