ಪಿಎಂ ಕೇರ್ಸ್ ನಿಧಿಯು ಭಾರತ ಸರ್ಕಾರದ ನಿಧಿಯಲ್ಲ, ಅದನ್ನು ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ)ಯ ಅಡಿಯಲ್ಲಿ ತರಲು ಸಾಧ್ಯವಿಲ್ಲ ಎಂದು ಒಕ್ಕೂಟ ಸರ್ಕಾರ ಮತ್ತು ಪ್ರಧಾನ ಮಂತ್ರಿ ಕಚೇರಿ ದೆಹಲಿ ಹೈಕೋರ್ಟ್‌ಗೆ ಗುರುವಾರ ತಿಳಿಸಿದೆ. “ಪಿಎಂ ಕೇರ್ಸ್ ನಿಧಿಯು ಒಂದು ಚಾರಿಟೇಬಲ್ ಟ್ರಸ್ಟ್ ಆಗಿದ್ದು, ಅದು ಭಾರತದ ಸಂವಿಧಾನದ ಅಡಿಯಲ್ಲೋ ಅಥವಾ ಸಂಸತ್ತಿನಿಂದಲೋ ಅಥವಾ ಯಾವುದೇ ರಾಜ್ಯದ ಶಾಸಕಾಂಗದಿಂದ ರಚಿಸಲ್ಪಟ್ಟದ್ದಲ್ಲ” ಎಂದು ಪ್ರಧಾನ ಮಂತ್ರಿಗಳ ಕಚೇರಿಯ ಅಧೀನ ಕಾರ್ಯದರ್ಶಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಲಾಗಿದೆ.
ತಾನು ಒಕ್ಕೂಟ ಸರ್ಕಾರದ ಅಧಿಕಾರಿಯಾಗಿದ್ದರೂ ಗೌರವಾರ್ಥವಾಗಿ ಪಿಎಂ ಕೇರ್ಸ್ ಟ್ರಸ್ಟ್‌ನಲ್ಲಿ ಕಾರ್ಯಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶ್ರೀವಾಸ್ತವ ಅವರು ಹೇಳಿದ್ದಾರೆ.
ಇದನ್ನೂ ಓದಿ: ಮೀಸಲು ಸೌಲಭ್ಯ – ಭಾಗ 3; ಬೇಜವಾಬುದಾರಿ ಭಾರತೀಯರು ಮತ್ತು ಅವರ ಬಾಹ್ಯ ಕಾಳಜಿ
“ಪಿಎಂ ಕೇರ್ಸ್ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತದೆ. ಅದರ ಹಣವನ್ನು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಸಿದ್ಧಪಡಿಸಿದ ಸಮಿತಿಯಿಂದ ಚಾರ್ಟರ್ಡ್ ಅಕೌಂಟೆಂಟ್ ಮೂಲಕ ಲೆಕ್ಕಪರಿಶೋಧನೆ ಮಾಡಲಾಗುತ್ತದೆ. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಆಡಿಟ್ ಮಾಡಿದ ವರದಿಯನ್ನು ಟ್ರಸ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಹಾಗೂ ಟ್ರಸ್ಟ್ ಸ್ವೀಕರಿಸಿದ ನಿಧಿಯ ಬಳಕೆಯ ವಿವರಗಳನ್ನು ಸೇರಿಸಲಾಗಿದೆ” ಎಂದು ಅಧೀನ ಕಾರ್ಯದರ್ಶಿ ಶ್ರೀವಾಸ್ತವ ಅವರು ಹೇಳಿದ್ದಾರೆ.
ಆರ್‌ಟಿಐ ಅಡಿಯಲ್ಲಿ ಪಿಎಂ ಕೇರ್ಸ್ ಅನ್ನು ‘ಸಾರ್ವಜನಿಕ ಪ್ರಾಧಿಕಾರ’ ಎಂದು ಘೋಷಿಸಲು ಕೋರಿ ಹೈಕೋರ್ಟ್‌ನಲ್ಲಿ ಸಮ್ಯಕ್ ಗಂಗ್ವಾಲ್ ಎಂಬವರು ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಒಕ್ಕೂಟ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ.
“PM CARES ಪಾರದರ್ಶಕತೆ ಮತ್ತು ಸಾರ್ವಜನಿಕ ಹಿತದ ತತ್ವಗಳ ಮೇಲೆ ಕಾರ್ಯನಿರ್ವಹಿಸುತ್ತದೆ. ಬೇರೆ ಚಾರಿಟಬಲ್ ಟ್ರಸ್ಟ್‌ಗಳಂತೆ ಸಾರ್ವಜನಿಕ ಹಿತಾಸಕ್ತಿಗಳನ್ನು ಹೊಂದಿದೆ. ಪಾರದರ್ಶಕತೆ ಖಚಿತಪಡಿಸಿಕೊಳ್ಳಲು ತನ್ನ ಎಲ್ಲಾ ನಿರ್ಣಯಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಯಾವುದೇ ಆಕ್ಷೇಪವಿಲ್ಲ” ಎಂದು ಒಕ್ಕೂಟ ಸರ್ಕಾರವು ಅಫಿಡವಿಟ್‌ನಲ್ಲಿ ಹೆಚ್ಚುವರಿಯಾಗಿ ಹೇಳಲಾಗಿದೆ.
ಇದನ್ನೂ ಓದಿ: ಕೆಲವು ಫೋಟೊಗಳನ್ನು ಕಾಪಿ ಮಾಡೋದು ಕಷ್ಟ: ಮೋದಿ ಫೋಟೊಗೆ ಕಾಂಗ್ರೆಸ್ ವ್ಯಂಗ್ಯ



I like Narendra Modiji. Mera Bharat mahan.