Homeಮುಖಪುಟಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

ಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

- Advertisement -
- Advertisement -

ಪಿಎಂ ಕೇರ್ಸ್‌ ನಿಧಿಯು ಭಾರತ ಸರ್ಕಾರದ ನಿಧಿಯಲ್ಲ, ಅದನ್ನು ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ)ಯ ಅಡಿಯಲ್ಲಿ ತರಲು ಸಾಧ್ಯವಿಲ್ಲ ಎಂದು ಒಕ್ಕೂಟ ಸರ್ಕಾರ ಮತ್ತು ಪ್ರಧಾನ ಮಂತ್ರಿ ಕಚೇರಿ ದೆಹಲಿ ಹೈಕೋರ್ಟ್‌ಗೆ ಗುರುವಾರ ತಿಳಿಸಿದೆ. “ಪಿಎಂ ಕೇರ್ಸ್‌ ನಿಧಿಯು ಒಂದು ಚಾರಿಟೇಬಲ್ ಟ್ರಸ್ಟ್‌ ಆಗಿದ್ದು, ಅದು ಭಾರತದ ಸಂವಿಧಾನದ ಅಡಿಯಲ್ಲೋ ಅಥವಾ ಸಂಸತ್ತಿನಿಂದಲೋ ಅಥವಾ ಯಾವುದೇ ರಾಜ್ಯದ ಶಾಸಕಾಂಗದಿಂದ ರಚಿಸಲ್ಪಟ್ಟದ್ದಲ್ಲ” ಎಂದು ಪ್ರಧಾನ ಮಂತ್ರಿಗಳ ಕಚೇರಿಯ ಅಧೀನ ಕಾರ್ಯದರ್ಶಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಲಾಗಿದೆ.

ತಾನು ಒಕ್ಕೂಟ ಸರ್ಕಾರದ ಅಧಿಕಾರಿಯಾಗಿದ್ದರೂ ಗೌರವಾರ್ಥವಾಗಿ ಪಿಎಂ ಕೇರ್ಸ್‌ ಟ್ರಸ್ಟ್‌ನಲ್ಲಿ ಕಾರ್ಯಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶ್ರೀವಾಸ್ತವ ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೀಸಲು ಸೌಲಭ್ಯ – ಭಾಗ 3; ಬೇಜವಾಬುದಾರಿ ಭಾರತೀಯರು ಮತ್ತು ಅವರ ಬಾಹ್ಯ ಕಾಳಜಿ

“ಪಿಎಂ ಕೇರ್ಸ್‌ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತದೆ. ಅದರ ಹಣವನ್ನು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಸಿದ್ಧಪಡಿಸಿದ ಸಮಿತಿಯಿಂದ ಚಾರ್ಟರ್ಡ್ ಅಕೌಂಟೆಂಟ್‌‌ ಮೂಲಕ ಲೆಕ್ಕಪರಿಶೋಧನೆ ಮಾಡಲಾಗುತ್ತದೆ. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಆಡಿಟ್ ಮಾಡಿದ ವರದಿಯನ್ನು ಟ್ರಸ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಹಾಗೂ ಟ್ರಸ್ಟ್ ಸ್ವೀಕರಿಸಿದ ನಿಧಿಯ ಬಳಕೆಯ ವಿವರಗಳನ್ನು ಸೇರಿಸಲಾಗಿದೆ” ಎಂದು ಅಧೀನ ಕಾರ್ಯದರ್ಶಿ ಶ್ರೀವಾಸ್ತವ ಅವರು ಹೇಳಿದ್ದಾರೆ.

ಆರ್‌ಟಿಐ ಅಡಿಯಲ್ಲಿ ಪಿಎಂ ಕೇರ್ಸ್ ಅನ್ನು ‘ಸಾರ್ವಜನಿಕ ಪ್ರಾಧಿಕಾರ’ ಎಂದು ಘೋಷಿಸಲು ಕೋರಿ ಹೈಕೋರ್ಟ್‌ನಲ್ಲಿ ಸಮ್ಯಕ್ ಗಂಗ್ವಾಲ್ ಎಂಬವರು ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಒಕ್ಕೂಟ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ.

“PM CARES ಪಾರದರ್ಶಕತೆ ಮತ್ತು ಸಾರ್ವಜನಿಕ ಹಿತದ ತತ್ವಗಳ ಮೇಲೆ ಕಾರ್ಯನಿರ್ವಹಿಸುತ್ತದೆ. ಬೇರೆ ಚಾರಿಟಬಲ್ ಟ್ರಸ್ಟ್‌ಗಳಂತೆ ಸಾರ್ವಜನಿಕ ಹಿತಾಸಕ್ತಿಗಳನ್ನು ಹೊಂದಿದೆ. ಪಾರದರ್ಶಕತೆ ಖಚಿತಪಡಿಸಿಕೊಳ್ಳಲು ತನ್ನ ಎಲ್ಲಾ ನಿರ್ಣಯಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಯಾವುದೇ ಆಕ್ಷೇಪವಿಲ್ಲ” ಎಂದು ಒಕ್ಕೂಟ ಸರ್ಕಾರವು ಅಫಿಡವಿಟ್‌ನಲ್ಲಿ ಹೆಚ್ಚುವರಿಯಾಗಿ ಹೇಳಲಾಗಿದೆ.

ಇದನ್ನೂ ಓದಿ: ಕೆಲವು ಫೋಟೊಗಳನ್ನು ಕಾಪಿ ಮಾಡೋದು ಕಷ್ಟ: ಮೋದಿ ಫೋಟೊಗೆ ಕಾಂಗ್ರೆಸ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...