Homeಮುಖಪುಟಸೈನಿಕರ ವೇತನ ಲೂಟಿ ಮಾಡಿ ಕೋಟ್ಯಾಂತರ ರೂ.ಗಳನ್ನು ಸಂಗ್ರಹಿಸಿದ PM-CARES?

ಸೈನಿಕರ ವೇತನ ಲೂಟಿ ಮಾಡಿ ಕೋಟ್ಯಾಂತರ ರೂ.ಗಳನ್ನು ಸಂಗ್ರಹಿಸಿದ PM-CARES?

ಭಾರತೀಯ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆ ಸೇರಿ ತಮ್ಮ ನೌಕರರ ದೈನಂದಿನ ವೇತನದಿಂದ 203.67 ಕೋಟಿ ರೂ.ಗಳನ್ನು ನೀಡಿದೆ ಎಂಬ ಮಾಹಿತಿ ಹೊರಬಿದ್ದಿದೆ

- Advertisement -
- Advertisement -

ದೇಶದ ಮೂರು ಸೇನಾ ವಿಭಾಗಗಳಿಂದ ಕೋಟ್ಯಾಂತರ ರೂಪಾಯಿಗಳನ್ನು ಪಿಎಂ-ಕೇರ್ಸ್‌(PM-CARES)ಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ. ಸಾರ್ವಜನಿಕ ವಲಯದ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳು ಮಾತ್ರವಲ್ಲದೆ ಮೂರು ಸಶಸ್ತ್ರ ಪಡೆಗಳೂ ಪಿಎಂ-ಕೇರ್ಸ್‌ಗೆ ಹಣವನ್ನು ನೀಡಿವೆ ಎಂದು ತಿಳಿದು ಬಂದಿದೆ.

ಭಾರತೀಯ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆ ಸೇರಿ ತಮ್ಮ ನೌಕರರ ದೈನಂದಿನ ವೇತನದಿಂದ 203.67 ಕೋಟಿ ರೂ.ಗಳನ್ನು ನೀಡಿದೆ. ವಾಯುಪಡೆಯು ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ PM-CARES ‌ಗೆ ಒಟ್ಟು 29.18 ಕೋಟಿ ರೂ. ಗಳನ್ನು ನೀಡಿರುವುದಾಗಿ ವಾಯುಪಡೆಯ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಂ.ಕಾಮ್ ವರದಿ ಮಾಡಿದೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ಈ ಹಿಂದೆ ಆರ್‌ಟಿಐ ಸಿಕ್ಕಿದ ದಾಖಲೆಗಳ ಪ್ರಕಾರ, ರಿಸರ್ವ್ ಬ್ಯಾಂಕ್‌ ಹಾಗೂ ಏಳು ಸಾರ್ವಜನಿಕ ವಲಯದ ಬ್ಯಾಂಕುಗಳು ಸೇರಿದಂತೆ ಇತರ ಹಣಕಾಸು ಸಂಸ್ಥೆಗಳಿಂದ 204.75 ಕೋಟಿ ರೂ. ಹಣವನ್ನು PM-CARES ‌ಗೆ ನೀಡಲಾಗಿತ್ತು. ಅನೇಕ ಕೇಂದ್ರ ಶಿಕ್ಷಣ ಸಂಸ್ಥೆಗಳು ತಮ್ಮ ನೌಕರರ ವೇತನದಿಂದ 21.81 ಕೋಟಿ ರೂ.ಗಳನ್ನು PM-CARES ‌ಗೆ ನೀಡಲಾಗಿತ್ತು. ಈ ಹಣವನ್ನು ಮಾಸಿಕ ದೇಣಿಗೆಯ ರೂಪದಲ್ಲಿ ಪಾವತಿಸಲಾಗಿದೆ ಎನ್ನಲಾಗಿದೆ.

ಏಪ್ರಿಲ್‌ನಲ್ಲಿ 25.03 ಕೋಟಿ, ಮೇ ತಿಂಗಳಲ್ಲಿ 75.24 ಲಕ್ಷ, ಜೂನ್‌ನಲ್ಲಿ 1.08 ಕೋಟಿ, ಜುಲೈನಲ್ಲಿ 73.93 ಲಕ್ಷ, ಆಗಸ್ಟ್‌ನಲ್ಲಿ 61.18 ಲಕ್ಷ, ಸೆಪ್ಟೆಂಬರ್‌ನಲ್ಲಿ 50.27 ಲಕ್ಷ ಮತ್ತು ಅಕ್ಟೋಬರ್‌ನಲ್ಲಿ 46.70 ಲಕ್ಷ ರೂ. ಗಳನ್ನಾಗಿದೆ ವಾಯುಸೇನೆ PM-CARES ‌ಗೆ ನೀಡಿದೆ.

ಡಿಸೆಂಬರ್ 9 ರಂದು ನೌಕಾಪಡೆ ನೀಡಿದ ಪ್ರತಿಕ್ರಿಯೆಯಲ್ಲಿ, ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ PM-CARES ‌ಗೆ 12.41 ಕೋಟಿ ಪಾವತಿಸಿದೆ. ಭಾರತೀಯ ಸೇನೆಯ ಎಡಿಜಿ ಪಿಐ (ಸಾರ್ವಜನಿಕ ಮಾಹಿತಿ ಹೆಚ್ಚುವರಿ ನಿರ್ದೇಶನಾಲಯ) ಮಾಡಿರುವ ಟ್ವೀಟ್ ಪ್ರಕಾರ, ಸೇನಾ ಸಿಬ್ಬಂದಿ 2020 ರ ಏಪ್ರಿಲ್‌ನಲ್ಲಿ 157.71 ಕೋಟಿ. ರೂ. ಗಳನ್ನು ಸ್ವಯಂಪ್ರೇರಣೆಯಿಂದ ನೀಡಿದ್ದಾಗಿ ಮಾಹಿತಿ ನೀಡಿದೆ.

ಇದನ್ನೂ ಓದಿ: PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?

ಮಾರ್ಚ್ 29 ರಂದು ರಕ್ಷಣಾ ಸಚಿವಾಲಯ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ, “ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಕ್ಷಣಾ ಸಚಿವಾಲಯದ ನೌಕರರು ಪ್ರಧಾನಮಂತ್ರಿಗೆ ಒಂದು ದಿನದ ವೇತನವನ್ನು ನೀಡುವ ಪ್ರಸ್ತಾಪವನ್ನು ಅಂಗೀಕರಿಸಿದ್ದಾರೆ” ಎಂದು ಹೇಳಲಾಗಿತ್ತು. ಕೊರೊನಾ ವಿರುದ್ದ ಹೋರಾಡಲು PM-CARES ‌ಗೆ ಭೂಸೇನೆ, ನೌಕಾಪಡೆ, ವಾಯುಪಡೆ ಮತ್ತು ಇತರ ರಕ್ಷಣಾ ವಿಭಾಗಗಳ ವಿವಿಧ ಕ್ಷೇತ್ರಗಳಿಂದ ಸುಮಾರು 500 ಕೋಟಿ ರೂ.ಗಳನ್ನು ಸ್ವಯಂಪ್ರೇರಿತವಾಗಿ ಸಂಗ್ರಹಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

ಕೊರೊನಾ ಸಂಧರ್ಭದಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಿದ್ದ PM-CARES ನಿಧಿ ಖಾಸಗಿಯೆ ಅಥವಾ ಸರ್ಕಾರಿ ಟ್ರಸ್ಟ್‌‌ ಆಗಿದೆಯೆ ಎಂಬ ಬಗ್ಗೆ ಇದೀಗ ವಿರೋಧಾಭಾಸಗಳು ಎದ್ದಿದೆ. ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಇದನ್ನು ಸರ್ಕಾರಿ ಟ್ರಸ್ಟ್ ಎಂದು ವ್ಯಾಖ್ಯಾನಿಸಲಾಗಿದ್ದರೂ, ಟ್ರಸ್ಟ್ ದಾಖಲೆಗಳಲ್ಲಿನ ಒಂದು ಷರತ್ತು ಇದನ್ನು ”ಖಾಸಗಿ” ಎಂದು ಕರೆಯುತ್ತದೆ.

ಇದನ್ನೂ ಓದಿ: ಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ ಕಂಪನಿ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...

2018ರ ‘ಬಿಜೆಪಿ ಐಟಿ ಸೆಲ್’ ವೀಡಿಯೊ ವಿವಾದ: ಯೂಟ್ಯೂಬರ್ ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್!

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ (Criminal Defamation Case) ಸಂಬಂಧಿಸಿದಂತೆ, ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ...

ಅ.23ರಂದು ದೇಶವ್ಯಾಪಿ ಪ್ರತಿಭಟನೆಗೆ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’ ಕರೆ : ದೆಹಲಿಯಲ್ಲಿ ಜಂಟಿ ವೇದಿಕೆ ರಚನೆ

ಚುನಾವಣಾ ಪ್ರಜಾಪ್ರಭುತ್ವದ ಸಮಗ್ರತೆಯನ್ನು ಮರುಸ್ಥಾಪಿಸಲು ಮತ್ತು ನಾಗರಿಕರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಲು ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು, ಆದಿವಾಸಿಗಳು, ದಲಿತರು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಜನಪರ ಸಂಘಟನೆಗಳ ಒಕ್ಕೂಟವಾದ ‘ಪೀಪಲ್...