Homeಮುಖಪುಟಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು...

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

- Advertisement -
- Advertisement -

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, “ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ನಾಚಿಕೆಯಾಗಬೇಕು” ಎಂದು ಶನಿವಾರ (ನ.8) ಹೇಳಿದ್ದಾರೆ.

ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ವಿಜಯಪುರ ಬ್ಲಾಕ್‌ನ ಹುಲ್ಪುರ್ ಗ್ರಾಮದ ಶಾಲೆಯ ಮಕ್ಕಳು ತಟ್ಟೆಯಿಲ್ಲದೆ ನ್ಯೂಸ್‌ ಪೇಪರ್‌ನಲ್ಲಿ ಊಟ ಮಾಡಿದ ಬಗ್ಗೆ ಗುರುವಾರ (ನ.6) ವರದಿಯಾಗಿತ್ತು.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಶಿಯೋಪುರ್ ಜಿಲ್ಲಾಧಿಕಾರಿ ಅರ್ಪಿತ್ ವರ್ಮಾ ಅವರು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅವರಿಂದ ತನಿಖೆಗೆ ಆದೇಶಿಸಿದ್ದರು. ಪರಿಶೀಲನೆ ವೇಳೆ ಮಕ್ಕಳಿಗೆ ಪೇಪರ್‌ನಲ್ಲಿ ಊಟ ಬಡಿಸಿರುವುದು ದೃಢಪಟ್ಟಿದೆ. ಹಾಗಾಗಿ, ಬಿಸಿಯೂಟ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಮತ್ತು ಶಾಲೆಯ ಪ್ರಾಂಶುಪಾಲರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ.

“ನಾನು ಇಂದು ಮಧ್ಯಪ್ರದೇಶಕ್ಕೆ ಹೋಗುತ್ತಿದ್ದೇನೆ. ಅಲ್ಲಿನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಿ ಬಗ್ಗೆ ಸುದ್ದಿಯನ್ನು ಪತ್ರಿಕೆಗಳಲ್ಲಿ ನೋಡಿದಾಗಿನಿಂದ ನನ್ನ ಹೃದಯ ಒಡೆದುಹೋಗಿದೆ” ಎಂದು ರಾಹುಲ್ ಗಾಂಧಿ ಶನಿವಾರ ಪೋಸ್ಟ್ ಹಾಕಿದ್ದಾರೆ.

“ಈ ಮುಗ್ದ ಮಕ್ಕಳ ಕನಸುಗಳ ಮೇಲೆ ದೇಶದ ಭವಿಷ್ಯ ನಿಂತಿದೆ. ಆದರೆ, ಈ ಮಕ್ಕಳಿಗೆ ಕನಿಷ್ಠ ಒಂದು ತಟ್ಟೆಯ ಘನತೆಯು ಸಿಗುತ್ತಿಲ್ಲ. ರಾಜ್ಯದಲ್ಲಿ 20 ವರ್ಷಗಳಿಗೂ ಹೆಚ್ಚು ಕಾಲ ಬಿಜೆಪಿ ಅಧಿಕಾರ ನಡೆಸಿದೆ. ಆದರೂ ಅವರು ಜನರಿಗೆ ಏನೂ ಸಾಧಿಸಿಲ್ಲ; ಬಡತನ, ಭ್ರಷ್ಟಾಚಾರ ಇನ್ನೂ ಇದೆ. ಮಕ್ಕಳ ತಟ್ಟೆಯನ್ನೂ ಕದ್ದಿದ್ದಾರೆ. ಅವರ ಅಭಿವೃದ್ಧಿ ಎಂಬುದು ಕೇವಲ ಗಾಳಿ ಮಾತು, ನಿಜವಾದ ಪ್ರಗತಿ ಇಲ್ಲ. ಅಧಿಕಾರದಲ್ಲಿ ಉಳಿಯಲು ಬಳಸುವ ನಿಜವಾದ ರಹಸ್ಯ ವ್ಯವಸ್ಥೆ” ಎಂದಿದ್ದಾರೆ.

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...