Homeಮುಖಪುಟಮಾಸ್ಕೋಗೆ ತೆರಳುವ ಪ್ರಧಾನಿಗೆ ಮಣಿಪುರ ಭೇಟಿಗೆ ಸಮಯವಿಲ್ಲ: ಕಾಂಗ್ರೆಸ್

ಮಾಸ್ಕೋಗೆ ತೆರಳುವ ಪ್ರಧಾನಿಗೆ ಮಣಿಪುರ ಭೇಟಿಗೆ ಸಮಯವಿಲ್ಲ: ಕಾಂಗ್ರೆಸ್

- Advertisement -
- Advertisement -

ಕಳೆದ ವರ್ಷದ ಮೇ ತಿಂಗಳಿನಲ್ಲಿ ಜನಾಂಗೀಯ ಸಂಘರ್ಷ ಉಂಟಾದ ಬಳಿಕ mnI. ಅಲ್ಲಿಗೆ ಹೋಗುವ ಆಸಕ್ತಿಯನ್ನೂ ಹೊಂದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್, “ಇಂದು ಲೋಕಸಭೆಯ ವಿಪಕ್ಷ ನಾಯಕರು ಅಸ್ಸಾಂ ಹಾಗೂ ಮಣಿಪುರಕ್ಕೆ ಭೇಟಿ ಕೊಟ್ಟರೆ, ಜೈವಿಕವಾಗಿ ಜನಿಸಿಲ್ಲ ಎಂದು ಹೇಳಿಕೊಳ್ಳುವ ಪ್ರಧಾನಿ ಮಾಸ್ಕೋಗೆ ತೆರಳಿದ್ದಾರೆ. ಜೈವಿಕವಲ್ಲದ ಪ್ರಧಾನಿಯ ಹೊಗಳುಭಟ್ಟರು ಕೆಲ ಕಾಲ ರಷ್ಯಾ- ಉಕ್ರೇನ್‌ ಯುದ್ಧವನ್ನೇ ನಿಲ್ಲಿಸಿದರೆಂದು ಸಮರ್ಥಿಸಿಕೊಳ್ಳುತ್ತಾರೆ. ಬಹುಶಃ ಈ ಮಾಸ್ಕೋ ಪ್ರವಾಸ ಇನ್ನಷ್ಟು ವಿಲಕ್ಷಣವಾದ ಘಟನೆಗಳಿಗೆ ಕಾರಣವಾಗಬಹುದು” ಎಂದು ಪ್ರಧಾನಿಯನ್ನು ಕುಟುಕಿದ್ದಾರೆ.

ಮಣಿಪುರ ಹೊತ್ತಿ ಉರಿದ 14 ತಿಂಗಳುಗಳಲ್ಲಿ ರಾಹುಲ್‌ ಗಾಂಧಿ ಮೂರು ಬಾರಿ ಭೇಟಿ ನೀಡಿದ್ದಾರೆ. ತಾವು ಜೈವಿಕವಾಗಿ ಜನಿಸಿಲ್ಲ ಎಂದು ಹೇಳಿಕೊಳ್ಳುವ ಪ್ರಧಾನಿ ಗಲಭೆ ಶುರುವಾದ 2023, ಮೇ 3 ರಿಂದ ಮಣಿಪುರಕ್ಕೆ ತೆರಳಲು ಕೆಲವು ಗಂಟೆಗಳ ಕಾಲ ಸಮಯವೂ ಮಾಡಿಕೊಳ್ಳುತ್ತಿಲ್ಲ, ಅಲ್ಲಿಗೆ ಹೋಗುವ ಆಸಕ್ತಿಯನ್ನು ಹೊಂದಿಲ್ಲ. ಅಲ್ಲಿ ಇರುವ ತಮ್ಮ ಸ್ವಂತ ಪಕ್ಷದ ಮುಖ್ಯಮಂತ್ರಿಯನ್ನೇ ಅವರು ಭೇಟಿ ಮಾಡಿಲ್ಲ. ಹಾಗೆಯೇ ಇತರ ಪಕ್ಷದ ಶಾಸಕರು, ಸಂಸದರನ್ನು ಕೂಡ ಭೇಟಿಯಾಗಿಲ್ಲ ಎಂದು ಆಕ್ರೋಶ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಹ ಪರಿಸ್ಥಿತಿ ಉಂಟಾಗಿರುವ ಅಸ್ಸಾಂ ಹಾಗೂ ಮಣಿಪುರ ರಾಜ್ಯಗಳಿಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇಂದು ಭೇಟಿ ನೀಡಿದ್ದಾರೆ. ಅಸ್ಸಾಂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಮಣಿಪುರದ ನಿರಾಶ್ರಿತ ಪ್ರದೇಶಗಳ ಜನರನ್ನು ಭೇಟಿಯಾಗಲಿದ್ದಾರೆ. ಸಂಜೆ ಮಣಿಪುರದ ರಾಜ್ಯಪಾಲರಾದ ಅನುಸೂಯ ಊಯ್ಕೆ ಅವರನ್ನು ಭೇಟಿ ಮಾಡಲಿದ್ದಾರೆ. ರಾಹುಲ್‌ ಅವರು ಉತ್ತರ ಪ್ರದೇಶ ರಾಯ್‌ಬರೇಲಿಯಿಂದ ಸಂಸದರಾಗಿ ಆಯ್ಕೆಯಾದ ನಂತರ ಮಣಿಪುರಕ್ಕೆ ಇದು ಮೊದಲ ಭೇಟಿ ಇದಾಗಿದೆ.

ಎರಡನೇ ಭಾರತ್ ಜೋಡೋ ಯಾತ್ರೆಯನ್ನು ರಾಹುಲ್ ಗಾಂಧಿ ಮಣಿಪುರದಿಂದಲೇ ಪ್ರಾರಂಭಿಸಿದ್ದರು. ಈ ಮೂಲಕ ಸಂಘರ್ಷ ಪೀಡಿತ ರಾಜ್ಯದ ಜನರಿಗೆ ಧೈರ್ಯ ತುಂಬಿ ಅವರ ಸಮಸ್ಯೆ ಆಲಿಸಿದ್ದರು.

ಇದನ್ನೂ ಓದಿ : ‘ಅಸ್ಸಾಂ ಜನರೊಂದಿಗೆ ನಿಲ್ಲುತ್ತೇನೆ, ಸಂಸತ್ತಿನಲ್ಲಿ ನಾನವರ ಸೈನಿಕ..’: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...