Homeನಿಜವೋ ಸುಳ್ಳೋಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

ಫ್ಯಾಕ್ಟ್ ಚೆಕ್ : ಪಿಎಂ ಮಾಸ್ಕ್ ಯೋಜನೆ ನಕಲಿ ಎಂದ ’ಪಿಐಬಿ’

- Advertisement -
- Advertisement -

ನೀವು ಮನೆಯಲ್ಲಿಯೇ ಕೂತು ಆರ್ಡರ್‌ ಮಾಡಿದರೆ ಸಾಕು ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ಮಾಸ್ಕ್‌ ಬರಲಿದೆ. ಇದು ನರೇಂದ್ರ ಮೋದಿಯವರ ಹೊಚ್ಚಹೊಸ ಪ್ಲಾನ್‌ ಎಂಬ ಸಂದೇಶಗಳು ವೈರಲ್‌ ಆಗಿವೆ.

ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ಪಿಎಂ ಮಾಸ್ಕ್ ಯೋಜನೆ’ ಎಂಬುಂದು ಇಲ್ಲ. ವೈರಲ್‌ ಆಗಿರುವ ಮಾಹಿತಿಯೂ ನಕಲಿ ಎಂದು ಪಿಐಬಿ (ಪ್ರೆಸ್‌ ಇನ್ಫರ್ಮೇಷನ್‌ ಬ್ಯೂರೋ) ಫ್ಯಾಕ್ಟ್ ಚೆಕ್ ಹೇಳಿದೆ.

‘ಪಿಎಂ ಮಾಸ್ಕ್ ಯೋಜನೆ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶಗಳು ನಕಲಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಖಚಿತಪಡಿಸಿದೆ. ಸರಕಾರಿ ಫ್ಯಾಕ್ಟ್ ಚೆಕಿಂಗ್ ಹ್ಯಾಂಡಲ್ ಅಂತಹ ಉಚಿತವಾಗಿ ಮಾಸ್ಕ್ ಗಳನ್ನು ಆರ್ಡರ್ ಮಾಡಬಹುದಾದ ಯಾವುದೇ ಯೋಜನೆ ಇಲ್ಲ. ಹಾಗೂ ಅದಕ್ಕೆ ಸಂಬಂಧಿತ ಯಾವುದೆ ಲಿಂಕ್ ಇಲ್ಲ ಎಂದು ಅದು ಹೇಳಿದೆ. ಟ್ವಿಟ್ಟರ್‌ನಲ್ಲಿ ಪಿಐಬಿ ಫ್ಯಾಕ್ಟ್ ಚೆಕ್ ಪೋಸ್ಟ್ ಮಾಡಿದ ಚಿತ್ರದಲ್ಲಿ, ಮಾಸ್ಕನ್ನು ಆರ್ಡರ್ ಮಾಡಬಹುದಾದ ಲಿಂಕ್ www.narendramodiawasyojna ನೊಂದಿಗೆ ಈ ಸಂದೇಶಗಳು ಪ್ರಾರಂಭವಾಗುತ್ತದೆ.

ಈ ತಪ್ಪು ಮಾಹಿತಿಯು ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್ ಗಳಲ್ಲಿ ಹರಡಲಾಗುತ್ತಿತ್ತು. “ಅಂತಹ ಯಾವುದೇ ಯೋಜನೆಯನ್ನು ಭಾರತ ಸರ್ಕಾರ ಪ್ರಾರಂಭಿಸಿಲ್ಲ. ನಿಮ್ಮ ವೈಯಕ್ತಿಕ ಮಾಹಿತಿ / ಶುಲ್ಕವನ್ನು ಸಂಗ್ರಹಿಸುವ ಇಂತಹ ನಕಲಿ ಮತ್ತು ಮೋಸದ ಸೈಟ್‌ಗಳ ಬಗ್ಗೆ ಎಚ್ಚರದಿಂದಿರಿ ”ಎಂದು ಪಿಬಿಐ ಟ್ವೀಟ್ ಮಾಡಿದೆ.

ತಪ್ಪು ಮಾಹಿತಿ ಮತ್ತು ಮೋಸದ ಲಿಂಕ್‌ಗಳನ್ನು ಹರಡುವುದು ಹೊಸತಲ್ಲ ಅಲ್ಲದೆ ಅನೇಕರು ಇದಕ್ಕೆ ಬಲಿಯಾಗಿದ್ದಾರೆ. ಆದ್ದರಿಂದ ಮಾಹಿತಿಯನ್ನು ಪರಿಶೀಲಿಸಿದ ನಂತರ ವಿಶೇಷವಾಗಿ ಸಾಂಕ್ರಾಮಿಕ ಸಮಯದಲ್ಲಿ ಇಂತಹವುಗಳನ್ನು ಖಚಿತಪಡಿಸಿಕೊಂಡ ನಂತರವೇ ಅದನ್ನು ರವಾನಿಸಲು ನಾವು ಬಳಕೆದಾರರಿಗೆ ಶಿಫಾರಸು ಮಾಡುತ್ತೇವೆ. ತೀರಾ ಇತ್ತೀಚೆಗೆ, ಎಲ್ಲಾ ಪಡಿತರ ಚೀಟಿ ಹೊಂದಿರುವವರಿಗೆ 50,000 ರೂ.ಗಳ ಆನ್‌ಲೈನ್ ವರ್ಗಾವಣೆಯನ್ನು ಒದಗಿಸುವ ರಾಷ್ಟ್ರೀಯ ಶಿಕ್ಷಿತ್ ಬೆರೋಜ್ಗಾರ್ ಯೋಜನೆ ಇಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಸ್ಪಷ್ಟಪಡಿಸಿದೆ. ಅಂತಹ ಸೈಟ್‌ಗಳು ನಿಮ್ಮ ಬ್ಯಾಂಕಿಂಗ್ ಡೇಟಾವನ್ನು ಹಿಡಿದಿಟ್ಟುಕೊಂಡು ನಿಮ್ಮನ್ನು ಮೋಸಗೊಳಿಸಬಹುದು ಎಂದು ಟ್ವಿಟರ್ ಪೋಸ್ಟ್‌ಗಳಲ್ಲಿ ಪಿಐಬಿ ಹೇಳಿದೆ.

ಕಳೆದ ತಿಂಗಳು, ವಾಟ್ಸಪ್ ನಲ್ಲಿನ ನಮ್ಮ ಸಂದೇಶಗಳನ್ನು ಸರಕಾರ ಗಮನಿಸುತ್ತಿದೆ ಎಂದು ಸೂಚಿಸಲು ಮೂರನೇ ಟಿಕ್ ಅನ್ನು ತೋರಿಸಲಾಗುತ್ತಿದೆ ಎಂಬ ಸಂದೇಶ ಹರಿದಾಡಿತ್ತು. ಇದರ ಬಗ್ಗೆ ಕೂಡಾ ಪಿಐಬಿ ಫ್ಯಾಕ್ಟ್ ಚೆಕ್ ನಡೆಸಿ ವಾಟ್ಸಾಪ್ ಸಂದೇಶಗಳನ್ನು ಸರ್ಕಾರ ಬೇಹುಗಾರಿಕೆ ಮಾಡುತ್ತಿಲ್ಲ ಎಂದು ಪಿಐಬಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please check the headline. It’s not PBI. It’s PIB.
    These kind of mistakes will bring down the credibility of your articles and concern over the issues.

    Please take note. Thanks.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...