Homeಮುಖಪುಟಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ದ್ವೇಷ ಭಾಷಣ: ಮೋದಿ ವಿರುದ್ಧ ರಾಹುಲ್‌, ಖರ್ಗೆ ಸೇರಿ ಪ್ರತಿಪಕ್ಷಗಳ...

ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ದ್ವೇಷ ಭಾಷಣ: ಮೋದಿ ವಿರುದ್ಧ ರಾಹುಲ್‌, ಖರ್ಗೆ ಸೇರಿ ಪ್ರತಿಪಕ್ಷಗಳ ನಾಯಕರಿಂದ ವಾಗ್ಧಾಳಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣವನ್ನು ಮಾಡಿದ್ದು, ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಜೊತೆಗೆ ಪ್ರಧಾನ ಮಂತ್ರಿ ಹುದ್ದೆಯ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ವ್ಯಾಪಕವಾದ ಆಕ್ರೋಶಕ್ಕೆ ಕಾರಣವಾಗಿದೆ.

ರಾಜಸ್ಥಾನದಲ್ಲಿ ಬನ್ಸ್ವಾರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದಾರೆ.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಇಂಡಿಯಾ ಮೈತ್ರಿಕೂಟವು ಮೊದಲ ಸುತ್ತಿನಲ್ಲಿ ಗೆದ್ದಿರುವುದನ್ನು ಮನಗಂಡ ನಂತರ ಪ್ರಧಾನಿ ಮೋದಿ “ದ್ವೇಷ” ಭಾಷಣ ಮಾಡಿದ್ದಾರೆ. ಅಧಿಕಾರಕ್ಕಾಗಿ ಸುಳ್ಳು ಹೇಳುವುದು ಮತ್ತು ವಿರೋಧಿಗಳ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುವುದು ಮೋದಿ ಅವರು ಮೈಗೂಡಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ-ಭಾರತೀಯ ಜನತಾ ಪಕ್ಷದ ಮೌಲ್ಯಗಳಾಗಿವೆ ಎಂದು ಖರ್ಗೆ ಆರೋಪಿಸಿದರು. ಭಾರತದ ಇತಿಹಾಸದಲ್ಲಿ, ಯಾವುದೇ ಪ್ರಧಾನಿ ಮೋದಿಯಂತೆ ‘ತಮ್ಮ ಹುದ್ದೆಯ ಘನತೆಯನ್ನು ಕಡಿಮೆ ಮಾಡಿಲ್ಲ’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪ್ರಧಾನಿಯವರ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಮೊದಲ ಹಂತದ ಮತದಾನದ ನಿರಾಸೆಯ ನಂತರ ನರೇಂದ್ರ ಮೋದಿಯ ಸುಳ್ಳುಗಳು ಬಹಳ ಕೆಳಹಂತಕ್ಕೆ ಇಳಿದಿದೆ, ಅದಕ್ಕಾಗಿಯೇ ಅವರು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಗೆಲ್ಲಲು, ನೀವು ಹಿಂದೂ-ಮುಸ್ಲಿಂ ಹೆಸರಿನಲ್ಲಿ ಸುಳ್ಳುಗಳನ್ನು ಹರಡುತ್ತಿದ್ದೀರಿ. ನಮ್ಮ ಪ್ರಣಾಳಿಕೆಯಲ್ಲಿ ಮುಸ್ಲಿಂ ಅಥವಾ ಹಿಂದೂ ಎಂಬ ಪದಗಳಿದ್ದರೆ ತೋರಿಸಲಿ ಎಂದು ಪ್ರಧಾನಿಗೆ ಸವಾಲು ಹಾಕುತ್ತೇನೆ. ಒಂದೋ ನೀವು ಈ ಸವಾಲನ್ನು ಸ್ವೀಕರಿಸಿ ಅಥವಾ ಸುಳ್ಳು ಹೇಳುವುದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ದ್ವೇಷ ಭಾಷಣದ ಬಗ್ಗೆ ಪ್ರಧಾನಿ ಮೋದಿಯನ್ನು ಟೀಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಹೇಳುತ್ತಿದ್ದಾರೆಂದು ದೇಶಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೆ ತಿಳಿದಿದೆ, ಅವರು ಕಾಂಗ್ರೆಸ್‌ನ ‘ನ್ಯಾಯ ಪತ್ರ’ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಬಗ್ಗೆ ಸುಳ್ಳುಗಳನ್ನು ಹರಡಿದ ರೀತಿ ಕೊಳಕು ರಾಜಕೀಯಕ್ಕೆ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಇಂಡಿಯಾ ಬ್ಲಾಕ್ ರ್‍ಯಾಲಿ: ಕೇಜ್ರಿವಾಲ್, ಹೇಮಂತ್ ಸೊರೇನ್‌ಗಾಗಿ ವೇದಿಕೆಯಲ್ಲಿ ಖಾಲಿ ಕುರ್ಚಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀಟ್ ಕೃಪಾಂಕ ರದ್ದು ಹಗರಣ ಮುಚ್ಚಿ ಹಾಕುವ ಪ್ರಯತ್ನ : ಎಂ.ಕೆ ಸ್ಟಾಲಿನ್

0
ನೀಟ್ ವಿದ್ಯಾರ್ಥಿಗಳ ಕೃಪಾಂಕ ರದ್ದುಗೊಳಿಸಿ ಮರು ಪರೀಕ್ಷೆಗೆ ಮುಂದಾಗಿರುವುದು ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಹಗರಣದ ಆರೋಪ ಕೇಳಿ ಬಂದ ಬೆನ್ನಲ್ಲೇ 1,563...