ಭಾರತ್ ಜೋಡೋ ನ್ಯಾಯ ಯಾತ್ರೆ ಒಡಿಶಾದಲ್ಲಿ ಮುಂದುವರಿದಿದೆ. ಇಂದು ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜಾತಿಯ ಬಗ್ಗೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ಸಾಮಾನ್ಯ ವರ್ಗಕ್ಕೆ ಸೇರಿದ್ದು, ಇತರೆ ಹಿಂದುಳಿದ ವರ್ಗಕ್ಕೆ (ಒಬಿಸಿ ಸಮುದಾಯಕ್ಕೆ) ಸೇರಿಲ್ಲ ಎಂದು ಹೇಳಿದ್ದಾರೆ.
ಒಡಿಶಾದ ಝಾರ್ಸುಗುಡಾದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಒಬಿಸಿ ಸಮುದಾಯದಲ್ಲಿ ಹುಟ್ಟಿಲ್ಲ. ಅವರು ಗುಜರಾತ್‌ನ ತೇಲಿ ಜಾತಿಯಲ್ಲಿ ಜನಿಸಿದ್ದಾರೆ. 2000ನೇ ಇಸವಿಯಲ್ಲಿ ಬಿಜೆಪಿಯಿಂದ ಆ ಸಮುದಾಯಕ್ಕೆ ಒಬಿಸಿ ಎಂಬ ಟ್ಯಾಗ್ ನೀಡಲಾಗಿದೆ. ಅವರು ಸಾಮಾನ್ಯ ವರ್ಗದಲ್ಲಿ ಜನಿಸಿದ್ದಾರೆ ಎಂದು ಹೇಳಿದ್ದಾರೆ.
ಅವರು ತಮ್ಮ ಇಡೀ ಜೀವನದಲ್ಲಿ ಜಾತಿ ಗಣತಿಯನ್ನು ನಡೆಸಲು ಬಿಡುವುದಿಲ್ಲ, ಏಕೆಂದರೆ ಅವರು ಒಬಿಸಿ ಸಮುದಾಯದಲ್ಲಿ ಹುಟ್ಟಿಲ್ಲ, ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ್ದಾರೆ ಎಂದು ರಾಹುಲ್ ಗಾಂಧಿ ಯಾತ್ರೆಯ ವೇಳೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾನು ಒಡಿಶಾಗೆ ಬಂದಿದ್ದೇನೆ. ರಾಜ್ಯದಿಂದ 30 ಲಕ್ಷ ಜನರು ಜೀವನೋಪಾಯಕ್ಕಾಗಿ ಇತರ ರಾಜ್ಯಗಳಿಗೆ ಕಾರ್ಮಿಕರಾಗಿ ವಲಸೆ ಹೋಗಿದ್ದಾರೆ ಎಂದು ಹೇಳಿದ್ದಾರೆ.
ಒಡಿಶಾದಲ್ಲಿ ಬುಡಕಟ್ಟು ಜನಾಂಗದ ಹೆಚ್ಚಿನ ಜನಸಂಖ್ಯೆ ಇದೆ. ದಲಿತರ ಜೊತೆಗೆ ಬುಡಕಟ್ಟು ಜನರನ್ನು ಕೂಡ ಸರ್ಕಾರವು ರಾಜ್ಯದಲ್ಲಿ ನಿರ್ಲಕ್ಷಿಸಿದೆ. ನಾನು 6-7 ಗಂಟೆಗಳ ಕಾಲ ನಿಮ್ಮ ‘ಮಾನ್ ಕಿ ಬಾತ್’ ಕೇಳಲು ಮತ್ತು 15 ನಿಮಿಷಗಳ ಕಾಲ ಸ್ವಲ್ಪ ಮಾತನಾಡಲು ಇಲ್ಲಿಗೆ ಬಂದಿದ್ದೇನೆ. ಕೈಗಾರಿಕೆಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಒಡಿಶಾದ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
ಭಾರತ್ ಜೋಡೋ ನ್ಯಾಯ ಯಾತ್ರೆಯು ನೆರೆಯ ಒಡಿಶಾದಿಂದ ಇಂದು ಛತ್ತೀಸ್‌ಗಢವನ್ನು ಪ್ರವೇಶಿಸಲಿದೆ. ಇದು ನವೆಂಬರ್ 2023ರ ವಿಧಾನಸಭೆ ಚುನಾವಣೆಯ ನಂತರ ಛತ್ತೀಸ್‌ಗಢಕ್ಕೆ ರಾಹುಲ್ ಗಾಂಧಿಯವರ ಮೊದಲ ಭೇಟಿಯಾಗಿದೆ. ಜನವರಿ 14ರಂದು ಮಣಿಪುರದಿಂದ ಆರಂಭವಾದ ಯಾತ್ರೆ ಎರಡು ದಿನಗಳ ವಿರಾಮದ ಬಳಿಕ ಫೆ.11ರಂದು ರಾಯ್‌ಗಢ, ಶಕ್ತಿ ಮತ್ತು ಕೊರ್ಬಾ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಫೆಬ್ರವರಿ 14ರಂದು ಯಾತ್ರೆಯು ಬಲರಾಂಪುರದಿಂದ ಜಾರ್ಖಂಡ್‌ಗೆ ತೆರಳಲಿದೆ.
हर वो व्यक्ति जो लड़ना चाहता है ख़ुद पर हो रहे अन्याय के ख़िलाफ़, जो चाहता है एक बेहतर ज़िंदगी और आने वाली पीढ़ियों का सुरक्षित भविष्य – वो उतर आया है आज सड़कों पर न्याय के लिए! #BharatJodoNyayYatra pic.twitter.com/EECj990yjv
— Bharat Jodo Nyay Yatra (@bharatjodo) February 8, 2024
ಇದನ್ನು ಓದಿ: ಬಿಜೆಪಿಯ ಮುಂದಿನ ಟಾರ್ಗೆಟ್ ಕಾಶಿ, ಮಥುರಾ! ಯೋಗಿ ಆದಿತ್ಯನಾಥ್ ಹೇಳಿಕೆಯಲ್ಲೇನಿದೆ?


