Homeಮುಖಪುಟ79 ದಿನಗಳ ನಂತರ ಮಣಿಪುರದ ಹಿಂಸಾಚಾರದ ಕುರಿತು ಮೌನ ಮುರಿದ ಪ್ರಧಾನಿ ಮೋದಿ

79 ದಿನಗಳ ನಂತರ ಮಣಿಪುರದ ಹಿಂಸಾಚಾರದ ಕುರಿತು ಮೌನ ಮುರಿದ ಪ್ರಧಾನಿ ಮೋದಿ

- Advertisement -
- Advertisement -

ಎಸ್‌ಟಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮಣಿಪುರದಲ್ಲಿ ಎರಡು ಜನಾಂಗಗಳ ನಡುವೆ ಹಿಂಸಾಚಾರ ಆರಂಭವಾದಾಗಿನಿಂದ ಪ್ರಧಾನಿ ಮೋದಿಯವರು ಈ ಕುರಿತು ಮಾತನಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಎಷ್ಟೇ ಟೀಕೆಗಳು ಬಂದರೂ ಮೌನಹಿಸಿದ್ದ ಪ್ರಧಾನಿ ಮೋದಿಯವರು 79 ದಿನಗಳ ನಂತರ ಮೌನ ಮುರಿದಿದ್ದು, “ಈ ಘಟನೆಗಳಿಂದ ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ” ಎಂದಿದ್ದಾರೆ.

ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ವಿಡಿಯೋ ಬಹಿರಂಗಗೊಂಡ ನಂತರ ಮಾತನಾಡಿರುವ ಅವರು, “ಮಣಿಪುರದ ಘಟನೆಯು ಮುನ್ನೆಲೆಗೆ ಬಂದಿರುವುದು ಯಾವುದೇ ನಾಗರಿಕತೆಗೆ ನಾಚಿಕೆಗೇಡಿನ ಸಂಗತಿಯಾಗಿದೆ. ದೇಶ ನಾಚಿಕೆಪಡುವಂತಾಗಿದೆ. ಅಪರಾಧದ ವಿರುದ್ಧ ವಿಶೇಷವಾಗಿ ಮಹಿಳೆಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನುಗಳನ್ನು ಬಲಪಡಿಸುವಂತೆ ನಾನು ಎಲ್ಲ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಘಟನೆಯು ರಾಜಸ್ಥಾನ, ಛತ್ತೀಸ್‌ಗಢ ಅಥವಾ ಮಣಿಪುರದಿಂದ ಆಗಿರಬಹುದು, ಅಪರಾಧಿ ದೇಶದ ಯಾವುದೇ ಮೂಲೆಯಲ್ಲಿ ಇದ್ದರೂ ಶಿಕ್ಷೆಯಿಂದ ಮುಕ್ತವಾಗಬಾರದು” ಎಂದು ಪ್ರಧಾನಿ ಮೋದಿ ಹೇಳಿದರು.

ನಾನು ರಾಷ್ಟ್ರಕ್ಕೆ ಭರವಸೆ ನೀಡಲು ಬಯಸುತ್ತೇನೆ, ಯಾವುದೇ ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮಣಿಪುರದ ಹೆಣ್ಣುಮಕ್ಕಳಿಗೆ ಏನಾಯಿತು ಎಂಬುದನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ವೈರಲ್ ವಿಡಿಯೋ ತುಂಬಾ ಆಘಾತ ಉಂಟು ಮಾಡಿದೆ. ಈ ರೀತಿಯ ಘಟನೆಗಳು ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ. ಕೋಮುವಾದಿ ಗಲಭೆಗಳಲ್ಲಿ ಮಹಿಳೆಯರನ್ನು ಆಯುಧವಾಗಿ ಬಳಸಿಕೊಳ್ಳುವುದು ಅತಿ ದೊಡ್ಡ ಸಾಂವಿಧಾನಿಕ ದುರ್ಬಳಕೆಯಾಗಿದೆ. ಸರ್ಕಾರ ಕ್ರಮ ತೆಗೆದುಕೊಳ್ಳದಿದ್ದರೆ ನಾವು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಮಾನವೀಯತೆ ಸತ್ತಿದೆ: ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರಕ್ಕೆ ವಿಪಕ್ಷಗಳ ಕಿಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಬಳ್ಳಾರಿಯ ಚಿನ್ನಾಭರಣ ಮಳಿಗೆಯಲ್ಲಿ ನಡೆದಿರುವುದು ಬಾಂಬ್ ಸ್ಪೋಟವಲ್ಲ

0
ಬಳ್ಳಾರಿಯ ಕಲ್ಯಾಣ್ ಜುವೆಲ್ಲರ್ಸ್ ಮಳಿಗೆಯಲ್ಲಿ ಬಾಂಬ್ ಸ್ಪೋಟ ಸಂಭವಿಸಿದೆ ಎಂಬರ್ಥದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹಂಚಿಕೊಳ್ಳಲಾಗಿದೆ. "ಮತ್ತೊಂದು ದಿನ, ಕರ್ನಾಟಕದಲ್ಲಿ ಮತ್ತೊಂದು ಭಯಾನಕ ಘಟನೆ. ಬಳ್ಳಾರಿಯ ಕಲ್ಯಾಣ್ ಜುವೆಲ್ಲರ್ಸ್ ಶೋ ರೂಮ್‌ನಲ್ಲಿ ಸ್ಪೋಟ ಸಂಭವಿಸಿದ್ದು,...