Homeಮುಖಪುಟ'ಪಹಲ್ಗಾಮ್‌ ದಾಳಿಗೆ 3 ದಿನ ಮೊದಲೇ ಮೋದಿಗೆ ಮಾಹಿತಿ ಇತ್ತು, ಹಾಗಾಗಿ ಕಾಶ್ಮೀರ ಭೇಟಿ ರದ್ದುಗೊಳಿಸಿದ್ದರು':...

‘ಪಹಲ್ಗಾಮ್‌ ದಾಳಿಗೆ 3 ದಿನ ಮೊದಲೇ ಮೋದಿಗೆ ಮಾಹಿತಿ ಇತ್ತು, ಹಾಗಾಗಿ ಕಾಶ್ಮೀರ ಭೇಟಿ ರದ್ದುಗೊಳಿಸಿದ್ದರು’: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

“ಪಹಲ್ಗಾಮ್ ದಾಳಿ ನಡೆಯುವ ಮೂರು ದಿನಗಳ ಮೊದಲೇ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆಯಬಹುದು ಎಂದು ಗುಪ್ತಚರ ಇಲಾಖೆ ಪ್ರಧಾನಿ ಮೋದಿಯವರಿಗೆ ವರದಿ ಕೊಟ್ಟಿತ್ತು. ಈ ಕಾರಣಕ್ಕೆ ಅವರು ಅಲ್ಲಿಯ ಪ್ರವಾಸವನ್ನು ರದ್ದುಗೊಳಿಸಿದ್ದರು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ (ಮೇ.6) ಆರೋಪಿಸಿದ್ದಾರೆ.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ‘ಸಂವಿಧಾನ್ ಬಚಾವೋ’ ಸಮಾವೇಶದಲ್ಲಿ ಮಾತನಾಡಿದ ಅವರು, “ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ‘ಗುಪ್ತಚರ ವೈಫಲ್ಯ’ ಕಾರಣ ಎಂಬುವುದನ್ನು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ. ಹಾಗಾಗಿ, ಜನರನ್ನು ರಕ್ಷಿಸಲು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಲಪಡಿಸದಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಹೇಳಿದ್ದಾರೆ.

“ಪಹಲ್ಗಾಮ್ ದಾಳಿಯ ಮೂರು ದಿನ ಮುನ್ನ ಭಯೋತ್ಪಾದಕ ದಾಳಿಯ ಸಾಧ್ಯತೆಯ ಬಗ್ಗೆ ಮೋದಿಯವರಿಗೆ ಗುಪ್ತಚರ ಇಲಾಖೆ ವರದಿ ನೀಡಿದೆ. ಈ ಕಾರಣಕ್ಕೆ ಅವರು ಅಲ್ಲಿಯ ಭೇಟಿಯನ್ನು ರದ್ದುಗೊಳಿಸಿದ್ದರು ಎಂದು ನನಗೆ ಮಾಹಿತಿ ದೊರೆತಿದೆ. ಕೆಲವು ಪತ್ರಿಕೆಗಳು ಈ ಬಗ್ಗೆ ವರದಿ ಮಾಡಿವೆ” ಎಂದಿರುವ ಖರ್ಗೆ, “ನಿಮ್ಮ ಭದ್ರತೆಗಾಗಿ ಅಲ್ಲಿಗೆ ಭೇಟಿ ನೀಡುವುದು ಸೂಕ್ತವಲ್ಲ ಎಂದು ಗುಪ್ತಚರ ವರದಿ ಹೇಳಿದಾಗ, ಜನರನ್ನು ರಕ್ಷಿಸಲು ನೀವು ನಿಮ್ಮ ಭದ್ರತೆ, ಗುಪ್ತಚರ, ಸ್ಥಳೀಯ ಪೊಲೀಸರು ಮತ್ತು ಗಡಿ ಪಡೆಗೆ ಏಕೆ ತಿಳಿಸಲಿಲ್ಲ? ನಿಮಗೆ ಮಾಹಿತಿ ಬಂದಾಗ, ನೀವು ನಿಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದೀರಿ. ಆದರೆ, ಅಲ್ಲಿಯ ಪ್ರವಾಸಿಗರನ್ನು ರಕ್ಷಿಸಲು ಹೆಚ್ಚಿನ ಪಡೆಗಳನ್ನು ಏಕೆ ಕಳುಹಿಸಲಿಲ್ಲ?” ಎಂದು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಗುಪ್ತಚರ ವೈಫಲ್ಯವನ್ನು ಒಪ್ಪಿಕೊಂಡಿರುವ ಕೇಂದ್ರ ಸರ್ಕಾರ, ಪಹಲ್ಗಾಮ್ ದಾಳಿಯ ಜೀವಹಾನಿಗೆ ಹೊಣೆಗಾರನಾಗಬೇಕಲ್ಲವೇ? ಎಂದು ಖರ್ಗೆ ಕೇಳಿದ್ದಾರೆ.

ಅವರು (ಕೇಂದ್ರ ಸರ್ಕಾರ) ವ್ಯವಸ್ಥೆಯನ್ನು ಸುಧಾರಿಸುತ್ತೇವೆ ಎನ್ನುತ್ತಿದ್ದಾರೆ. ನಿಮಗೆ ದಾಳಿಯ ಬಗ್ಗೆ ಮೊದಲೇ ಮಾಹಿತಿಯಿದ್ದರೂ ಪ್ರವಾಸಿಗರ ಭದ್ರತೆಯ ನಿಟ್ಟಿನಲ್ಲಿ ಸರಿಯಾದ ವ್ಯವಸ್ಥೆ ಏಕೆ ಮಾಡಿಲ್ಲ? ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಪಹಲ್ಗಾಮ್ ದಾಳಿಯ ಹಿನ್ನೆಲೆ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾದರೂ ಕಾಂಗ್ರೆಸ್ ಅದರ ಬೆಂಬಲಕ್ಕೆ ನಿಲ್ಲುತ್ತದೆ. ಏಕೆಂದರೆ ದೇಶವು ಪಕ್ಷ, ಧರ್ಮ ಮತ್ತು ಜಾತಿಯನ್ನು ಮೀರಿದ್ದು” ಎಂದು ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಹೇಳಿದ್ದಾರೆ.

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಇಪ್ಪತ್ತೈದು ಪ್ರವಾಸಿಗರು ಮತ್ತು ಸ್ಥಳೀಯ ಕಾಶ್ಮೀರಿ ವ್ಯಕ್ತಿ ಸಾವಿಗೀಡಾಗಿದ್ದಾರೆ.

ಹೈದರಾಬಾದ್: ವಿಶ್ವ ಸುಂದರಿ ಸ್ಪರ್ಧೆಗೆ ಬಜರಂಗದಳದಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...