Homeಮುಖಪುಟಮೋದಿ ಡಿಗ್ರಿ ವಿವಾದ: ಕೇಜ್ರಿವಾಲ್‌ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ

ಮೋದಿ ಡಿಗ್ರಿ ವಿವಾದ: ಕೇಜ್ರಿವಾಲ್‌ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರಗಳನ್ನು ನೀಡುವಂತೆ ಮುಖ್ಯ ಮಾಹಿತಿ ಆಯೋಗ (ಸಿಐಸಿ) ಗುಜರಾತ್ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದಕ್ಕೆ ಹೈಕೋರ್ಟ್ ತಡೆ ನೀಡಿತ್ತು ಮತ್ತು ಕೇಜ್ರಿವಾಲ್ಗೆ 25,000ರೂ.ದಂಡವನ್ನು ವಿಧಿಸಿತ್ತು. ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ಪೀಠವು ಕೇಜ್ರಿವಾಲ್ ಅವರ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. ಮಾ.31ರಂದು ನೀಡಿದ್ದ ತೀರ್ಪಿನ ಅನುಷ್ಠಾನಕ್ಕೆ ತಡೆ ಕೋರಿ ದೆಹಲಿ ಸಿಎಂ ನ್ಯಾಯಾಲಯದ ಮೊರೆ ಹೋಗಿದ್ದರು.

2016ರಲ್ಲಿ ಸರ್ಕಾರಿ ಸ್ವಾಮ್ಯದ ಗುಜರಾತ್ ವಿಶ್ವವಿದ್ಯಾನಿಲಯವು ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರಗಳನ್ನು ನೀಡುವಂತೆ ಸಿಐಸಿ ಹೊರಡಿಸಿದ್ದ ಆದೇಶಕ್ಕೆ ತಡೆ ಕೋರಿ ಹೈಕೋರ್ಟ್ಮೊರೆ ಹೋಗಿತ್ತು. ಹೈಕೋರ್ಟ್ಇದಕ್ಕೆ ತಡೆ ನೀಡಿತ್ತು ಮತ್ತು ಕೇಜ್ರಿವಾಲ್ಗೆ ಪದೇ ಪದೇ ಮಾಹಿತಿ ಕೇಳಿದ್ದಕ್ಕೆ 25,000 ದಂಡ ವಿಧಿಸಿತ್ತು. ಕೇಜ್ರಿವಾಲ್ ಅವರಿಗೆ ವಿಧಿಸಿರುವ ದಂಡವನ್ನು ಗುಜರಾತ್ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ ಇರಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ತೀರ್ಪಿಗೆ ತಡೆ ನೀಡಲು ಕೂಡ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ಪೀಠ ನಿರಾಕರಿಸಿದೆ.

ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಧಾನಿ ಮೋದಿ ಅವರ ಸ್ನಾತಕೋತ್ತರ ಪದವಿಯ ವಿವರಗಳನ್ನು ನೀಡುವಂತೆ 2016ರಲ್ಲಿ ಪ್ರಧಾನಿ ಕಾರ್ಯಾಲಯದ ಸಾರ್ವಜನಿಕ ಮಾಹಿತಿ ಅಧಿಕಾರಿ(PIO) ಮತ್ತು ವಿಶ್ವವಿದ್ಯಾಲಯಗಳ ಸಾರ್ವಜನಿಕ ಮಾಹಿತಿ ಅಧಿಕಾರಿ(PIO)ಗಳಿಗೆ ಮಾಹಿತಿ ಆಯೋಗದ ಮುಖ್ಯಸ್ಥ ರು(CIC) ಆದೇಶಿಸಿದ್ದರು.

ಯಾವುದೇ ಸಾರ್ವಜನಿಕ ಆಡಳಿತ ಹುದ್ದೆಯಲ್ಲಿರುವ ಯಾರೇ ಆಗಿರಲಿ, ಅವರ ಸಾರ್ವಜನಿಕ ಚಟುವಟಿಕೆಗಳಿಗೆ ಸಂಬಂಧವಿಲ್ಲದೆ ಇರುವ, ಇನ್ನೊಬ್ಬರ ವೈಯಕ್ತಿಕ ವಿಷಯಗಳನ್ನೆಲ್ಲ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳುವಂತಿಲ್ಲ.  ಪ್ರಧಾನಿ ನರೇಂದ್ರ ಮೋದಿಯವರ ಪದವಿ ಬಗ್ಗೆ ಸಾರ್ವಜನಿಕ ಡೊಮೇನ್ನಲ್ಲಿ ಮಾಹಿತಿ ನೀಡಲಾಗಿದೆ. ಗುಜರಾತ್ವಿಶ್ವವಿದ್ಯಾಲಯವೂ ಕೂಡ ಹಿಂದೆ ತನ್ನ ವೆಬ್ಸೈಟ್​​ನಲ್ಲಿ ಬಗ್ಗೆ ವಿವರವನ್ನು ನೀಡಿತ್ತು ಎಂದು ಗುಜರಾತ್ವಿಶ್ವವಿದ್ಯಾಲಯದ ಪರ ವಕೀಲರಾದ ಸಾಲಿಸಿಟರ್ ಜನರಲ್ ತುಷಾರ್ಮೆಹ್ತಾ ವಾದಿಸಿದ್ದರು.

ಆರ್ಟಿಐ ಕಾಯ್ದೆಯ ದುರುಪಯೋಗ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪ್ರಮಾಣ ಪತ್ರ ಪಡೆಯಲು ಆರ್ಟಿಐ ಕಾಯ್ದೆ ಅನ್ವಯ ಮಾಡಲು ಆಗುವುದಿಲ್ಲ. ಯಾರೋ ಒಬ್ಬರ ಬಾಲಿಶ ಕುತೂಹಲ ಸಾರ್ವಜನಿಕ ಹಿತಾಸಕ್ತಿ ಆಗುವುದಿಲ್ಲ ಎಂದು ಕೋರ್ಟ್​​ಗೆ ವಾದದ ವೇಳೆ ತುಷಾರ್ಮೆಹ್ತಾ ತಿಳಿಸಿದ್ದರು.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...