ಪ್ರಧಾನಿ ನರೇಂದ್ರ ಮೋದಿ ಭಾನುವಾರ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ತಕ್ಷಣವೇ ಪರಿಹರಿಕೊಳ್ಳುವಂತೆ ಕರೆ ನೀಡಿದ್ದಾರೆ. ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್
ಭಾನುವಾರ ಅಮೆರಿಕವು ಇರಾನ್‌ನಲ್ಲಿರುವ ಮೂರು ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿ ವ್ಯಾಪಕ ಪ್ರಾದೇಶಿಕ ಸಂಘರ್ಷಕ್ಕೆ ಕಾರಣವಾದ ಕೆಲವೇ ಗಂಟೆಗಳ ನಂತರ ಮೋದಿ ಮತ್ತು ಪೆಜೆಶ್ಕಿಯಾನ್ ನಡುವಿನ ಫೋನ್ ಸಂಭಾಷಣೆ ನಡೆಯಿತು ಎಂದು ವರದಿಗಳು ಉಲ್ಲೇಖಿಸಿವೆ.
ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಈ ಬಗ್ಗೆ ಪ್ರತಿಕ್ರಯಿಸಿರುವ ಪ್ರಧಾನಿ ಮೋದಿ, ಇತ್ತೀಚಿನ ಉಲ್ಬಣಗಳ ಬಗ್ಗೆ “ತೀವ್ರ ಕಳವಳ” ವ್ಯಕ್ತಪಡಿಸಿರುವುದಾಗಿ ಹೇಳಿದ್ದಾರೆ.
Spoke with President of Iran @drpezeshkian. We discussed in detail about the current situation. Expressed deep concern at the recent escalations. Reiterated our call for immediate de-escalation, dialogue and diplomacy as the way forward and for early restoration of regional…
— Narendra Modi (@narendramodi) June 22, 2025
“ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿದ್ದೇನೆ. ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನಾವು ವಿವರವಾಗಿ ಚರ್ಚಿಸಿದ್ದೇವೆ. ಇತ್ತೀಚಿನ ಉಲ್ಬಣಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ” ಎಂದು ಮೋದಿ ಹೇಳಿದ್ದಾರೆ.
“ಮುಂದಿನ ದಾರಿಯಾಗಿ ಮತ್ತು ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯ ಆರಂಭಿಕ ಪುನಃಸ್ಥಾಪನೆಗಾಗಿ ತಕ್ಷಣದ ಉಲ್ಬಣ, ಸಂವಾದ ಮತ್ತು ರಾಜತಾಂತ್ರಿಕತೆಗೆ ನಮ್ಮ ಕರೆಯನ್ನು ಪುನರುಚ್ಚರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.
ಇರಾನ್ ಮೇಲೆ ದಾಳಿ ಮಾಡಿರುವ ಕುರಿತು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಭಾನುವಾರ ಮಾಹಿತಿ ನೀಡಿದ್ದು, “ಅಮೆರಿಕದ ಪಡೆಗಳು ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ‘ಅತ್ಯಂತ ಯಶಸ್ವಿ’ ದಾಳಿಗಳನ್ನು ನಡೆಸಿವೆ. ಎಲ್ಲಾ ಅಮೆರಿಕನ್ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ” ಎಂದು ತಿಳಿಸಿದ್ದಾರೆ.
“ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ! ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು,” ಎಂದು ಅವರು ಉಲ್ಲೇಖಿಸಿದ್ದಾರೆ.
ಇರಾನ್‌ನ ಮೂರು ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದ ಬಳಿಕ, ಪಶ್ಚಿಮ ಏಷ್ಯಾದ ಪ್ರತಿಯೊಬ್ಬ ಅಮೆರಿಕನ್ ನಾಗರಿಕ ಅಥವಾ ಮಿಲಿಟರಿ ಸಿಬ್ಬಂದಿ ಈಗ ನಮ್ಮ ಗುರಿ ಎಂದು ಇರಾನ್‌ನ ಸರ್ಕಾರಿ ದೂರದರ್ಶನವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಎಚ್ಚರಿಕೆ ನೀಡಿರುವುದಾಗಿ news18.com ವರದಿ ಮಾಡಿದೆ.
“ಇರಾನ್‌ನ ವಾಯುಪ್ರದೇಶವನ್ನು ಉಲ್ಲಂಘಿಸುವ ಮೂಲಕ ಅಮೆರಿಕ ಇರಾನ್ ವಿರುದ್ಧ ಅಪರಾಧ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಇದಕ್ಕೆ ಅವಕಾಶವಿಲ್ಲ. ಅಮೆರಿಕದ ಅಧ್ಯಕ್ಷರೇ, ನೀವು ದಾಳಿ ಪ್ರಾರಂಭಿಸಿದ್ದೀರಿ, ನಾವು ಕೊನೆಗೊಳಿಸುತ್ತೇವೆ” ಎಂದು ಇರಾನ್ ದೂರದರ್ಶನ ಯುಎಸ್ ನೆಲೆಗಳ ಗ್ರಾಫಿಕ್ ಅನ್ನು ಪ್ರದರ್ಶಿಸುತ್ತಾ ಹೇಳಿದೆ” ಎಂದು ವರದಿ ವಿವರಿಸಿದೆ.
ಜೂನ್ 13 ರಂದು ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ ದೇಶದಲ್ಲಿ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ ಎಂದು ಶನಿವಾರ ಅಜ್‌ಜಝೀರಾ ವರದಿ ಮಾಡಿದೆ. ಇಸ್ರೇಲ್‌ನ “ಆಕ್ರಮಣ” ಕ್ಕೆ ಅಮೆರಿಕ ಸೇರಿಕೊಂಡರೆ ಅದು “ಎಲ್ಲರಿಗೂ ತುಂಬಾ ಅಪಾಯಕಾರಿ” ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.
ಇರಾನ್‌ನ ಆರೋಗ್ಯ ಸಚಿವಾಲಯದ ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಹೊಸೈನ್ ಕೆರ್ಮನ್‌ಪೋರ್, ದೇಶದ ಮೇಲೆ ಇಸ್ರೇಲಿ ನಡೆಸಿದ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆಯ ಬಗ್ಗೆ ಮಾಹಿತಿ ನಿಡಿದ್ದಾರೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಇರಾನ್‌ನಲ್ಲಿ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇದಕ್ಕೆ ಪ್ರತಿಯಾಗಿ ಇರಾನ್ ಸೇನೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ನಿರಂತರ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಗಳಿಗೆ ಕಾರಣವಾಗಿವೆ. ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಭಾರತದ ಮಿತ್ರ ಇರಾನ್ ಮೇಲಿನ ಅಮೆರಿಕ ದಾಳಿಗೆ ಮೋದಿ ಮೌನವೇಕೆ? | ಕಾಂಗ್ರೆಸ್, ಸಿಪಿಐ ಪ್ರಶ್ನೆ
ಭಾರತದ ಮಿತ್ರ ಇರಾನ್ ಮೇಲಿನ ಅಮೆರಿಕ ದಾಳಿಗೆ ಮೋದಿ ಮೌನವೇಕೆ? | ಕಾಂಗ್ರೆಸ್, ಸಿಪಿಐ ಪ್ರಶ್ನೆ

