Homeಅಂತರಾಷ್ಟ್ರೀಯಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ಮೋದಿ ಮುಖ್ಯಮಂತ್ರಿಯಾಗಿದ್ದಾಗ 2002 ರಲ್ಲಿ ಭಾರತದ ಗುಜರಾತ್‌ನಲ್ಲಿ 1,000 ಕ್ಕೂ ಹೆಚ್ಚು ಮುಸ್ಲಿಮರು ಕೊಲ್ಲಲ್ಪಟ್ಟರು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

- Advertisement -
- Advertisement -

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶ ಸ್ವಾತಂತ್ರ್ಯದ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದು, ಬಾಂಗ್ಲಾದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆಗೆ ಸಾಕ್ಷಿಯಾಗಿದೆ. ಸುವರ್ಣ ಮಹೋತ್ಸವದ ಅತಿಥಿ ಪ್ರಧಾನಿ ಮೋದಿ ಎಂದು ಘೋಷಣೆಯಾದಾಗಿನಿಂದಲೂ ಪ್ರತಿಭಟನೆಗಳು ನಡೆಯುತ್ತಿವೆ.

ಇದೇ 27ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶಕ್ಕೆ ಭಾರತದ ಪ್ರಧಾನಿ ತೆರಳಿದ್ದು, ದೇಶದ ಸ್ಥಾಪಕ ಮತ್ತು ಹಾಲಿ ಪ್ರಧಾನಿ ಶೇಖ್ ಹಸೀನಾ ಅವರ ತಂದೆ ’ಬಂಗಬಂಧು’ ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವದಲ್ಲಿಯೂ ಭಾಗಿಯಾಗಲಿದ್ದಾರೆ.

ಮೋದಿಯವರ ಭೇಟಿಯು ಢಾಕಾದ ಮುಖ್ಯ ಮಸೀದಿಯಲ್ಲಿ ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಯಿತು. ಪೊಲೀಸರು ಅಶ್ರುವಾಯು ಮತ್ತು ರಬ್ಬರ್ ಗುಂಡುಗಳನ್ನು ಬಳಸಿ ಸಾವಿರಾರು ಮಂದಿ ಪ್ರತಿಭಟನಾಕಾರರನ್ನು ಚದುರಿಸುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ…

ಶುಕ್ರವಾರ ನಮಾಜ್ ನಂತರ ಮೊಕರ್ರಾಮ್ ಮಸೀದಿ ಬಳಿ ನೂರಾರು ಪ್ರತಿಭಟನಾಕಾರರು ಮೋದಿಯವರಿಗೆ ಅಗೌರವ ತೋರುವ ಸಂಕೇತವಾಗಿ ಬೂಟುಗಳನ್ನು ಬೀಸಲು ಪ್ರಾರಂಭಿಸಿದ ನಂತರ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿದವು.

ಮಸೀದಿಯ ಬಳಿಯ ಬೀದಿಗಳಲ್ಲಿ ಭಾರಿ ಪ್ರಮಾಣದಲ್ಲಿ ಹಾಜರಿದ್ದ ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ಎಸೆಯುತ್ತಿರುವುದನ್ನು ಸ್ಥಳೀಯ ಮಾಧ್ಯಮಗಳು ತೋರಿಸಿವೆ. ಪತ್ರಕರ್ತರು ಸೇರಿದಂತೆ ಕನಿಷ್ಠ 40 ಜನರು ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ಸೊಮೊಯ್ ಟಿವಿ ವರದಿ ಮಾಡಿದೆ.

PC: Al Jazeera

ಮೋದಿಯ ಭೇಟಿಯನ್ನು ವಿರೋಧಿಸಿ ಬಾಂಗ್ಲಾ ದೇಶದಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಶುಕ್ರವಾರ 40 ಮಂದಿ ಗಾಯಗೊಂಡಿದ್ದಾರೆ. ಭಾರತದಲ್ಲಿ ಮುಸ್ಲಿಮರನ್ನು ಹಿಂಸಿಸುತ್ತಿದ್ದಾರೆ ಎಂದು ಆರೋಪಿಸಿ ಈ ಪ್ರತಿಭಟನೆಗಳು ನಡೆದಿವೆ ಎನ್ನಲಾಗಿದೆ.

ಸುಮಾರು 2,000 ಪ್ರತಿಭಟನಾಕಾರರು ಶುಕ್ರವಾರ ಢಾಕಾದಲ್ಲಿ ಮೆರವಣಿಗೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಅನೇಕರು ಕಲ್ಲುಗಳನ್ನು ಅಧಿಕಾರಿಗಳ ಮೇಲೆ ಎಸೆದಿದ್ದಾರೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಕಳೆದ ಶುಕ್ರವಾರ ಕೂಡ ಬೈತುಲ್ ಮೊಕರ್ರಾಮ್ ಮಸೀದಿಯ ಹೊರಗೆ ನಡೆದ ಮತ್ತೊಂದು ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು, ಮೋದಿ ಮುಖ್ಯಮಂತ್ರಿಯಾಗಿದ್ದಾಗ 2002 ರಲ್ಲಿ ಗುಜರಾತ್‌ನಲ್ಲಿ 1,000 ಕ್ಕೂ ಹೆಚ್ಚು ಮುಸ್ಲಿಮರು ಕೊಲ್ಲಲ್ಪಟ್ಟರು ಎಂದು ಆರೋಪಿಸಿದ್ದಾರೆ.

PC: Munir Uz zaman

“ಅವರ (ಮೋದಿ) ಸರ್ಕಾರವು ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ, ಅದು ಮುಸ್ಲಿಮರನ್ನು ಭಾರತದಲ್ಲಿ ಎರಡನೇ ದರ್ಜೆಯ ಪ್ರಜೆಯನ್ನಾಗಿ ಮಾಡುತ್ತದೆ. ಅವರಂತಹ ನಾಯಕನನ್ನು 50 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಅನುಮತಿಸಬಾರದು” ಎಂದು ಇಸ್ಲಾಮಿಸ್ಟ್ ರಾಜಕೀಯ ಸಂಘಟನೆಯಾದ ಹೆಫಜತ್-ಎ-ಇಸ್ಲಾಂನ ಪ್ರಧಾನ ಕಾರ್ಯದರ್ಶಿ ಮೌಲಾನಾ ಮಾಮುನುಲ್ ಹಕ್ ಹೇಳಿದ್ದಾರೆ.

ಮೋದಿಯ ನೀತಿಗಳು ಬಾಂಗ್ಲಾದೇಶದ ಸ್ಥಾಪನಾ ತತ್ವಗಳ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿವೆ ಎಂದು ಬಾಂಗ್ಲಾದೇಶ ವಿದ್ಯಾರ್ಥಿ ಸಂಘದ ಅಧ್ಯಕ್ಷ ಫೊಯೆಜ್ ಉಲ್ಲಾ ಹೇಳಿದ್ದಾರೆ.


ಇದನ್ನೂ ಓದಿ: ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...