Homeಮುಖಪುಟ'ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ' ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

‘ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ’ ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

- Advertisement -
- Advertisement -

‘ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ, ಈ ರೀತಿಯ ಶಕ್ತಿಯು ಜೈವಿಕ ದೇಹದಿಂದ ಬರಲು ಸಾಧ್ಯವಿಲ್ಲ, ದೇವರು ಮಾತ್ರ ಅಂತಹ ಶಕ್ತಿಯನ್ನು ನೀಡಬಲ್ಲನು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ನೀಡಿದ್ದು, ಇದೀಗ ಅಪಹಾಸ್ಯಕ್ಕೆ ಕಾರಣವಾಗಿದೆ.

ಪ್ರಧಾನಿ ಮೋದಿಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಗಂಗಾನದಿಯ ದಡದಲ್ಲಿ ಮೃತದೇಹಗಳು ಜಮಾಯಿಸುತ್ತಿದ್ದಾಗ, ‘ದೇವರ ದೂತರು’ ತಮ್ಮ ಮೊಬೈಲ್ ಫೋನ್‌ನ ಪ್ಲ್ಯಾಶ್‌ಲೈಟನ್ನು ಆನ್ ಮಾಡಲು ಜನರಿಗೆ ಹೇಳಿದ್ದಾರೆ ಎಂದು ಕೋವಿಡ್‌ ಮೊದಲ ಹಂತದ ಲಾಕ್‌ಡೌನ್‌ ವೇಳೆ ಪ್ರಧಾನಿ ಮೋದಿ ದೀಪಗಳು ಅಥವಾ ಟಾರ್ಚ್‌ಗಳನ್ನು ಬೆಳಗಿಸಲು ನಾಗರಿಕರಿಗೆ ಸೂಚಿಸಿದ್ದನ್ನು ನೆನಪಿಸಿಕೊಂಡಿದ್ದಾರೆ.

ಯಾರಾದರೂ ನಿಮ್ಮ ಬಳಿಗೆ ಬಂದು ಅಂತಹ ಮಾತುಗಳನ್ನು ಹೇಳಿದರೆ, ನೀವು ಏನು ಹೇಳುತ್ತೀರಿ? ನೀನು ನನ್ನನ್ನು ಕ್ಷಮಿಸು ಸಹೋದರ, ನೀನು ನಿನ್ನ ಕೆಲಸ ಮಾಡು, ನನ್ನ ಕೆಲಸ ಮಾಡಲು ನನಗೆ ಬಿಡು ಎಂದು ಹೇಳುತ್ತೀರಿ. ಆದರೆ ಅವರ ಭಕ್ತರು ಪ್ರಧಾನಿಯನ್ನು ಹೊಗಳುತ್ತಾರೆ ಮತ್ತು ಅವರು ದೇವರಿಂದ ಕಳುಹಿಸಲ್ಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಪ್ಪಾಳೆ ತಟ್ಟುವಂತೆ ಅವರು ಜನರಿಗೆ ಹೇಳಿದ್ದಾರೆ. ಜನರು ಆಸ್ಪತ್ರೆಗಳ ಹೊರಗೆ ಕೊನೆಯುಸಿರೆಳೆದಾಗ, ಪ್ರಧಾನಿ ಇರಲಿಲ್ಲ. ಪ್ರಧಾನಿ ಅಲ್ಲ, ಆದರೆ ದೇವರಿಂದ ಕಳುಹಿಸಲ್ಪಟ್ಟವರು, ಜನರಿಗೆ ಮೊಬೈಲ್ ಫೋನ್ ಪ್ಲ್ಯಾಶ್‌ಲೈಟ್‌ ಆನ್ ಮಾಡಲು ಕೇಳುತ್ತಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನ್ಯೂಸ್ 18ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಪ್ರಧಾನಿ ಮೋದಿ, ನನ್ನ ತಾಯಿ ಬದುಕಿರುವವರೆಗೂ ನಾನು ಜೈವಿಕವಾಗಿ ಹುಟ್ಟಿದ್ದೇನೆ ಎಂದು ಭಾವಿಸುತ್ತಿದ್ದೆ. ಆಕೆಯ ನಿಧನದ ನಂತರ, ನನ್ನ ಅನುಭವಗಳನ್ನು ನೋಡಿದಾಗ, ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ. ಈ ಶಕ್ತಿ ನನ್ನ ದೇಹದ್ದಲ್ಲ. ಅದನ್ನು ದೇವರು ನನಗೆ ಕೊಟ್ಟಿದ್ದಾನೆ. ಅದಕ್ಕಾಗಿಯೇ ದೇವರು ನನಗೆ ಸಾಮರ್ಥ್ಯ, ಶಕ್ತಿ, ಶುದ್ಧ ಹೃದಯ ಮತ್ತು ಇದನ್ನು ಮಾಡಲು ಸ್ಫೂರ್ತಿ ನೀಡಿದ್ದಾನೆ. ನಾನು ದೇವರು ಕಳುಹಿಸಿದ ಸಾಧನವಲ್ಲದೆ ಬೇರೇನೂ ಅಲ್ಲ ಎಂದು ಹೇಳಿದ್ದರು.

ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕನ್ಹಯ್ಯಾ ಕುಮಾರ್ ಅವರಿಗೆ ವ್ಯಾಪಕವಾದ ವಿಷಯಗಳ ಬಗ್ಗೆ ಸಾಕಷ್ಟು ಜ್ಞಾನವಿದೆ. ಆದರೆ ಅವನು ಒಂದು ದಿನ ಬಂದು ನನ್ನಲ್ಲಿ ತಾನು ಜೈವಿಕನಲ್ಲ ಮತ್ತು ದೇವರಿಂದ ಕಳುಹಿಸಲ್ಪಟ್ಟವನು ಎಂದು ನನ್ನಲ್ಲಿ ಹೇಳಿದರೆ, ನಾನು ಅದನ್ನು ಯಾರಿಗೂ ಹೇಳಬೇಡಿ ಅಥವಾ ಇದನ್ನು ಜೋರಾಗಿ ಹೇಳಬೇಡಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಆದರೆ ಪ್ರಧಾನಿ ತಾನು ಜೈವಿಕ ಅಲ್ಲ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಬೇರೆ ಎಲ್ಲಾ ಜನರು ಜೈವಿಕರು ಮತ್ತು ನಾನು ಮಾತ್ರ ಅಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಎ ರಾಜಾ, ಪೆರಿಯಾರ್ ‘ದೇವರು ಅಸ್ತಿತ್ವದಲ್ಲಿಲ್ಲ’ ಎಂದು ಏಕೆ ಹೇಳಿದರು ಎಂಬುವುದು ಈಗ ಅನೇಕರಿಗೆ ಅರ್ಥವಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನ ಲೋಕಸಭಾ ಅಭ್ಯರ್ಥಿ ಮಹುವಾ ಮೊಯಿತ್ರಾ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಅವರು ರಾಮನ ಬದಲಿಗೆ ದೇವಸ್ಥಾನಗಳಲ್ಲಿ ನರೇಂದ್ರ ಮೋದಿಯವರ ವಿಗ್ರಹಗಳನ್ನು ಪ್ರತಿಷ್ಠಾಪಿಸಬೇಕಿತ್ತು. ನರೇಂದ್ರ ಮೋದಿ ಮಾತನಾಡುವ ಕ್ಲಿಪ್‌ನ್ನು ನೋಡಿದೆ, ಅವರು ನಿಜವಾಗಿಯೂ ಮಾನವನಲ್ಲ, ದೈವಿಕವಾಗಿ ಹುಟ್ಟಿದ್ದಾರೆ, ನಮ್ಮೆಲ್ಲರನ್ನು ಉದ್ಧಾರ ಮಾಡಲು ಭೂಮಿಗೆ ಕಳುಹಿಸಲಾಗಿದೆ ಎಂದು ಅವರು ನಂಬುತ್ತಾರೆ. ರಾಮಲಲ್ಲಾ ಯಾಕೆ? ಬಿಜೆಪಿಯವರು ಎಲ್ಲ ದೇವಾಲಯಗಳಲ್ಲಿ ನಮೋ ಲಲ್ಲಾಗಳನ್ನು ಪ್ರತಿಷ್ಠಾಪಿಸಬೇಕಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...