Homeಮುಖಪುಟಪ್ರಧಾನಿ ಮೋದಿ ದೇಶದ ಶ್ರೀಮಂತ ಉದ್ಯಮಿಗಳ 'ಸಾಧನ': ರಾಹುಲ್ ಗಾಂಧಿ

ಪ್ರಧಾನಿ ಮೋದಿ ದೇಶದ ಶ್ರೀಮಂತ ಉದ್ಯಮಿಗಳ ‘ಸಾಧನ’: ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಕೆಲವೇಕೆಲವು ಶ್ರೀಮಂತ ಉದ್ಯಮಿಗಳ ಸಾಧನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದ ನೈಜ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ಸೆಳೆಯುವುದು, ಭಾರತದ ಶ್ರೀಮಂತ ಉದ್ಯಮಿಗಳನ್ನು ರಕ್ಷಿಸುವುದು ಮತ್ತು ಅವರ ಬ್ಯಾಂಕ್ ಸಾಲಗಳನ್ನು ಮನ್ನಾ ಮಾಡುವುದು ಮೋದಿಯವರ ಕೆಲಸ ಎಂದು ಅವರು ಆರೋಪಿಸಿದರು.

“ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಐದಾರು ದೊಡ್ಡ, ಶ್ರೀಮಂತ ಉದ್ಯಮಿಗಳ ಸಾಧನ; ದೇಶದ 20-25 ಜನರಿಗೆ ಸುಮಾರು 16 ಲಕ್ಷ ಕೋಟಿ ರೂ.ಗಳನ್ನು ನೀಡಿದ್ದಾರೆ” ಎಂದು ಅವರು ಕಿಡಿಕಾರಿದರು.

“ದೇಶದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ನಿರುದ್ಯೋಗ ಅಥವಾ ಬೆಲೆ ಏರಿಕೆಯ ಬಗ್ಗೆ ಅವರು ಮಾತನಾಡುವುದಿಲ್ಲ” ಎಂದು ಪಕ್ಷದ ಬೆಂಬಲಿಗರು, ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಇಂದು ತಮ್ಮ ಸ್ವಕ್ಷೇತ್ರ ವಯನಾಡಿನಲ್ಲಿ ಮಾತನಾಡಿದರು.

‘ಚುನಾವಣಾ ಬಾಂಡ್‌ಗಳು ಪಿಎಂ ಮೋದಿ ನಡೆಸಿದ ಸುಲಿಗೆಯ ಒಂದು ರೂಪವಾಗಿದೆ. ಬಿಜೆಪಿ ಮತ್ತು ಆರೆಸ್ಸೆಸ್ ಸಂವಿಧಾನವನ್ನು ನಾಶಪಡಿಸಲು ಮತ್ತು ಬದಲಾಯಿಸಲು ಪ್ರಯತ್ನಿಸುತ್ತಿವೆ. 2024 ರ ಲೋಕಸಭೆ ಚುನಾವಣೆಯ ಏಕೈಕ ದೊಡ್ಡ ವಿಷಯ ಮತ್ತು ಇತರ ಎಲ್ಲ ವಿಷಯಗಳು ಅದರಿಂದ ಹೊರಹೊಮ್ಮಿವೆ’ ಎಂದು ಹೇಳಿದರು.

ಅವರು ದಕ್ಷಿಣ ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಪ್ರಚಾರದ ಭಾಗವಾಗಿ ಬೆಳಿಗ್ಗೆ 11.30 ರ ಸುಮಾರಿಗೆ ಇಲ್ಲಿನ ಕೇರಳದ ಕೊಡಿಯತ್ತೂರಿನಿಂದ ಬೃಹತ್ ರೋಡ್ ಶೋ ನಡೆಸಿದರು. ಪಕ್ಷದ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಅವರು ಸಾಗುತ್ತಿದ್ದ ವಾಹನದ ಹಿಂದೆಮುಂದೆ ಓಡಿದರು.

ಅವರು ತೆರೆದ ಕಾರಿನ ಮೇಲೆ ಕುಳಿತುಕೊಂಡು ರಸ್ತೆಯ ಎರಡೂ ಬದಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರತ್ತ ಕೈ ಬೀಸುತ್ತಾ ಸಾಗಿದರು. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರ ಭಾವಚಿತ್ರವಿರುವ ಫಲಕಗಳನ್ನು ಹಿಡಿದುಕೊಂಡು ಘೋಷಣೆ ಕೂಗಿದರು.

ವಯನಾಡಿನಿಂದ ಮತ್ತೊಮ್ಮೆ ಗೆಲ್ಲುವ ನಿರೀಕ್ಷೆಯಲ್ಲಿರುವ ರಾಹುಲ್ ಗಾಂಧಿ, ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಎರಡನೇ ಬಾರಿಗೆ ಕ್ಷೇತ್ರಕ್ಕೆ ಬಂದಿದ್ದಾರೆ. ಕಾಂಗ್ರೆಸ್ ನಾಯಕ ಈ ತಿಂಗಳ ಆರಂಭದಲ್ಲಿ ವಯನಾಡಿನಲ್ಲಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿ, ಬೃಹತ್ ರೋಡ್ ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಅವರು ವಯನಾಡ್‌ನಿಂದ 4,31,770 ಮತಗಳ ದಾಖಲೆಯ ಅಂತರದಿಂದ ಗೆದ್ದಿದ್ದರು. ಕೇರಳದ 20 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ; ಪತಂಜಲಿ ದಾರಿ ತಪ್ಪಿಸುವ ಜಾಹೀರಾತು ಪ್ರಕರಣ; ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ರಾಮ್‌ದೇವ್‌ಗೆ ಸುಪ್ರೀಂ ತಪರಾಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...