Homeಮುಖಪುಟಪಿಎಂ ಮೋದಿ ಸಂಪೂರ್ಣ ಸುಳ್ಳು ಹೇಳುತ್ತಿದ್ದಾರೆ: ದೆಹಲಿ, ಮಹಾರಾಷ್ಟ್ರ ಸರ್ಕಾರಗಳ ಆಕ್ರೋಶ

ಪಿಎಂ ಮೋದಿ ಸಂಪೂರ್ಣ ಸುಳ್ಳು ಹೇಳುತ್ತಿದ್ದಾರೆ: ದೆಹಲಿ, ಮಹಾರಾಷ್ಟ್ರ ಸರ್ಕಾರಗಳ ಆಕ್ರೋಶ

ದೇಶಾದ್ಯಂತ ಕೊರೊನಾ ಸಾಂಕ್ರಾಮಿಕ ಹರಡಲು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳೆ ಕಾರಣವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು.

- Advertisement -
- Advertisement -

ದೇಶಾದ್ಯಂತ ಕೊರೊನಾ ಸಾಂಕ್ರಾಮಿಕ ಹರಡಲು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳೆ ಕಾರಣವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾಡಿದ ಆರೋಪಕ್ಕೆ ದೆಹಲಿ ಮತ್ತು ಮಹರಾಷ್ಟ್ರ ಸರ್ಕಾರಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಮೋದಿ ಸಂಪೂರ್ಣ ಸುಳ್ಳು ಹೇಳುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದರೆ, 5 ರಾಜ್ಯಗಳ ಚುನಾವಣೆಗಾಗಿ ಮೋದಿ ವಾಸ್ತವವನ್ನು ತಿರುಚಿತ್ತಿದ್ದಾರೆ ಎಂದು ಮಹಾರಾಷ್ಟ್ರದ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯಗಳ ನಡುವಿನ ಹೊಸ ತಿಕ್ಕಾಟಕ್ಕೆ ದಾರಿ ಮಾಡಿಕೊಟ್ಟಿದೆ.

“ಪ್ರಧಾನಿಯವರ ಹೇಳಿಕೆ ಸಂಪೂರ್ಣ ಸುಳ್ಳು. ಕೊರೋನಾ ಅವಧಿಯ ಸಂಕಷ್ಟ ಅನುಭವಿಸಿದವರು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಬಗ್ಗೆ ಪ್ರಧಾನಿ ಸಂವೇದನಾಶೀಲರಾಗುತ್ತಾರೆ ಎಂದು ದೇಶ ಭಾವಿಸುತ್ತದೆ. ಜನರ ನೋವಿನಲ್ಲಿ ರಾಜಕೀಯ ಮಾಡುವುದು ಪ್ರಧಾನಿಗೆ ಸರಿಹೊಂದುವುದಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ನಿನ್ನೆ ಸಂಸತ್ತಿನಲ್ಲಿ ಮೋದಿ, “ವಿರೋಧ ಪಕ್ಷಗಳು ಸಕರಾತ್ಮಕವಾಗಿ ಏನನ್ನು ಮಾಡಲಿಲ್ಲ, ಕೋವಿಡ್ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಿ ಎಂದು ಜನರಿಗೆ ಮನವಿ ಮಾಡಲಿಲ್ಲ, ಆದರೆ ದೇಶಾದ್ಯಂತ ಕೋವಿಡ್ ಹರಡಲು ಅವರ ಕೊಡುಗೆ ಸಾಕಷ್ಟಿದೆ. ಮೊದಲ ಕೋವಿಡ್ ಅಲೆಯಲ್ಲಿ ನಾವು ಲಾಕ್‌ಡೌನ್ ಹೇರಿದ್ದೆವು. ವಿಶ್ವ ಆರೋಗ್ಯ ಸಂಸ್ಥೆಯು ನೀವು ಇರುವಲ್ಲಿಯೇ ಇರಿ ಎಂದು ಎಚ್ಚರಿಕೆ ನೀಡಿತ್ತು. ಆದರೆ ಕಾಂಗ್ರೆಸ್ ಪಕ್ಷವು ತನ್ನ ಮಿತಿಯನ್ನು ದಾಟಿತು. ಅದು ಮುಂಬೈ ರೈಲ್ವೆ ಸ್ಟೇಷನ್‌ನಲ್ಲಿ ವಲಸೆ ಕಾರ್ಮಿಕರಿಗೆ ಟಿಕೆಟ್ ಕೊಡಿಸಿ ದೇಶಾದ್ಯಂತ ವೈರಸ್ ಹರಡಿ ಎಂದು ಹುರಿದುಂಬಿಸಿತು” ಎಂದು ಆರೋಪಿಸಿದ್ದರು.

ಮುಂದುವರಿದು ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳೇ ಕೋವಿಡ್ ಹರಡಲು ಕಾರಣವಾಗಿವೆ. ಅವು ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡಿದವು. ದೆಹಲಿ ಸರ್ಕಾರವು ವಾಹನಗಳಲ್ಲಿ ಮೈಕ್ ಹಾಕಿಕೊಂಡು ನಿಮಗಾಗಿ ಬಸ್ ವ್ಯವಸ್ಥೆ ಮಾಡಿದ್ದೇವೆ ಎಂದು ಸಾರಿತು. ಹಾಗಾಗಿ ಉತ್ತರ ಪ್ರದೇಶ ಸೇರಿದಂತೆ ಯಾವ ರಾಜ್ಯಗಳಲ್ಲಿ ಕೊರೊನಾ ಇರಲಿಲ್ಲವೋ ಅಲ್ಲಿಯೂ ಕೊರೊನಾ ಹರಡಲು ಕಾರಣವಾಯಿತು.ಕೆಲವರು ಕೊರೊನಾ ಮೋದಿಯವರ ವರ್ಚಸ್ಸನ್ನು ಹಾಳು ಮಾಡುತ್ತದೆ ಎಂದು ನಂಬಿದ್ದರು. ಹಾಗಾಗಿಯೇ ಈ ಕೆಲಸ ಮಾಡಿದರು ಎಂದು ನರೇಂದ್ರ ಮೋದಿ ಹೇಳಿದ್ದರು.

ಪ್ರಧಾನಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಹಾಗೂ ಕಂದಾಯ ಸಚಿವ ಬಾಳಾಸಾಹೇಬ್ ಥೋರಟ್ “ಕೇಂದ್ರವು ಯಾವುದೇ ಪೂರ್ವಸಿದ್ದತೆ ಇಲ್ಲದೆ ಲಾಕ್‌ಡೌನ್ ಹೇರುವ ಮೂಲಕ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿತ್ತು ಮತ್ತು ಕಾರ್ಮಿಕರನ್ನು ಸಾಯಲು ಬಿಟ್ಟಿತು. ಮುಂಬೈ ಮತ್ತು ಮಹಾರಾಷ್ಟ್ರದಲ್ಲಿರುವ ಉತ್ತರ ಪ್ರದೇಶ ಮತ್ತು ಬಿಹಾರದ ನಮ್ಮ ಸಹೋದರರ ಪರಿಸ್ಥಿತಿ ಹದಗೆಟ್ಟಿತು ಮತ್ತು ಅವರು ಹಸಿವಿನಿಂದ ಬಳಲುತ್ತಿದ್ದರು. ಕೊರೋನಾ ಅವಧಿಯಲ್ಲಿ ವಲಸೆ ಕಾರ್ಮಿಕರಿಗೆ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರ ಮತ್ತು ಕಾಂಗ್ರೆಸ್ ನೀಡಿದ ಬೆಂಬಲದ ಬಗ್ಗೆ ನಾವು ಹೆಮ್ಮೆಪಡುತ್ತೇವೆ” ಎಂದು ತಿಳಿಸಿದ್ದಾರೆ.

ಎನ್‌ಸಿಪಿ ನಾಯಕ ನವಾಬ್ ಮಲ್ಲಿಕ್ ಪ್ರತಿಕ್ರಿಯಿಸಿ, “ದೇಶದಲ್ಲಿ ಕೋವಿಡ್ ಹರಡಲು ನರೇಂದ್ರ ಮೋದಿಯವರೆ ನೇರ ಕಾರಣ. ಅವರು ಫೆಬ್ರವರಿ 2020 ರಲ್ಲಿ ನಮಸ್ತೆ ಟ್ರಂಪ್ ಕಾರ್ಯಕ್ರಮ ಏರ್ಪಡಿಸಿ ಕೋವಿಡ್ ಹರಡಲು ಕಾರಣರಾದರು. ಅಲ್ಲದೆ ಸೂಕ್ತ ಸಮಯದಲ್ಲಿ ಅಂತರಾಷ್ಟ್ರೀಯ ಗಡಿ ಮತ್ತು ವಿಮಾನ ನಿಲ್ದಾಣಗಳನ್ನು ಮುಚ್ಚಿದ್ದರೆ ಕೊರೊನಾ ಹರಡದಂತೆ ತಡೆಯಬಹುದಿತ್ತು” ಎಂದಿದ್ದಾರೆ.

ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ, “ಲಾಕ್‌ಡೌನ್ ಘೋಷಣೆಯಾಗುವ 4 ಗಂಟೆಗಳ ಮೊದಲು, ರೈಲುಗಳು ನಿಂತುಹೋದವು, ಅಂತರರಾಜ್ಯ ಪ್ರಯಾಣವು ಸ್ಥಗಿತಗೊಂಡಿತು. ವಲಸಿಗರು – ಮುಖ್ಯವಾಗಿ ದೈನಂದಿನ ಕೂಲಿ ಕಾರ್ಮಿಕರು ಸಿಕ್ಕಿಹಾಕಿಕೊಂಡರು. ಅವರಿಗೆ ಆಹಾರ ಮತ್ತು ಆಶ್ರಯ ನೀಡಿ ನೋಡಿಕೊಳ್ಳುವುದು ಪ್ರಧಾನಿಯ ದೃಷ್ಟಿಯಲ್ಲಿ ತಪ್ಪಾಗಿದ್ದರೆ, ಮಾನವೀಯತೆಗಾಗಿ ಈ ತಪ್ಪನ್ನು 100 ಬಾರಿ ಮಾಡುತ್ತೇವೆ” ಎಂದು ಟ್ವೀಟ್ ಮಾಡಿದ್ದಾರೆ.

ಮೋದಿಯವರ ಸಂಸತ್ತಿನ ಭಾಷಣಕ್ಕೆ ವಿಪಕ್ಷಗಳು ಮಾತ್ರವಲ್ಲದೆ ನಾಗರೀಕರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ಕೋವಿಡ್ ನಿಭಾಯಿಸುವಲ್ಲಿ ತಮ್ಮ ಸಂಪೂರ್ಣ ವೈಫಲ್ಯವನ್ನು ಮುಚ್ಚಿಹಾಕಲು ವಿಪಕ್ಷಗಳನ್ನು ಟೀಕಿಸುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.

ಒಂದೆಡೆ ವಲಸೆ ಕಾರ್ಮಿಕರಿಗೆ ಉಚಿತ ಟಿಕೆಟ್, ಬಸ್ ವ್ಯವಸ್ಥೆ ಮಾಡಿದ್ದಕ್ಕೆ ಮೋದಿ ವಿಪಕ್ಷಗಳನ್ನು ಕೋವಿಡ್ ಹರಡಲು ಕಾರಣ ಎಂದು ದೂರುತ್ತಿದ್ದಾರೆ. ಅದೇ ಸಂದರ್ಭದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವರು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದ ಪ್ರಕಾರ, 2020ರ ಮಾರ್ಚ್-ಜೂನ್ ನಡುವಿನ ಅವಧಿಯಲ್ಲಿ 1 ಕೋಟಿಗೂ ಹೆಚ್ಚು ವಲಸೆ ಕಾರ್ಮಿಕರು ದೇಶಾದ್ಯಂತ ಕಾಲ್ನಡಿಗೆಯಲ್ಲಿ ತಮ್ಮ ರಾಜ್ಯಗಳಿಗೆ ಮರಳಿದ್ದಾರೆ. ಆ ಸಂದರ್ಭದಲ್ಲಿ ಸಾವಿರಾರು ಕಿ.ಮೀ ಅಂತರವನ್ನು ನಡೆದು ಸಾಗುತ್ತಿದ್ದ ದೃಶ್ಯಗಳು ಮನಕಲಕುವಂತಿದ್ದವು.


ಇದನ್ನೂ ಓದಿ: ಕಾಂಗ್ರೆಸ್ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಮೂಲಕ ದೇಶಾದ್ಯಂತ ಕೊರೊನಾ ಹರಡಿತು: ಪಿಎಂ ಮೋದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...