Homeಮುಖಪುಟಇ-ರುಪಿ ವ್ಯವಸ್ಥೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಇ-ರುಪಿ ವ್ಯವಸ್ಥೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

- Advertisement -
- Advertisement -

ಪ್ರಧಾನಿ ಮೋದಿ ಇ-ರುಪಿ (ಎಲೆಕ್ಟ್ರಾನಿಕ್ ವೋಚರ್ ಆಧಾರಿತ ಡಿಜಿಟಲ್ ಪಾವತಿ) ವ್ಯವಸ್ಥೆಗೆ ಸೋಮವಾರ ಚಾಲನೆ ನೀಡಿದ್ದಾರೆ. e-RUPI ಡಿಜಿಟಲ್ ಪಾವತಿಯಾಗಿದ್ದು, ನಗದುರಹಿತ ಸಾಧನವಾಗಿದೆ. ಇದನ್ನು ಕ್ಯೂಆರ್ ಕೋಡ್ ಅಥವಾ ಎಸ್‌ಎಂಎಸ್ ಸ್ಟ್ರಿಂಗ್ ಮೂಲಕ ಹಣವನ್ನು ಸ್ವೀಕೃತಿದಾರರ ಮೊಬೈಲ್ ಫೋನ್‌ಗಳಿಗೆ ವರ್ಗಾಯಿಸಬಹುದು.

ಬಳಕೆದಾರರು ಕಾರ್ಡ್, ಡಿಜಿಟಲ್ ಪಾವತಿ ಅಪ್ಲಿಕೇಶನ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್‌ಗೆ ಹೋಗದೆಯೇ ಸೇವಾ ಪೂರೈಕೆದಾರರಿಂದ  ವೋಚರ್ ಅನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ.

ಇದನ್ನು ರಾಷ್ಟ್ರೀಯ ಪಾವತಿಗಳ ನಿಗಮವು (National Payment Corporation of India – NPCI) ತನ್ನ ಏಕೀಕೃತ ಪಾವತಿ ಇಂಟರ್ಫೇಸ್ (UPI) ವೇದಿಕೆಯ ಮೂಲಕ ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದೆ.

ಇದನ್ನೂ ಓದಿ: ಪೆಗಾಸಸ್ ತನಿಖೆಗೆ ಆಗ್ರಹಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌!

ಪ್ರಧಾನಮಂತ್ರಿ ಕಚೇರಿ(ಪಿಎಂಒ)ಯು ಇತ್ತೀಚೆಗೆ ನೀಡಿದ ಹೇಳಿಕೆಯಲ್ಲಿ ಇ-ರುಪಿ ಅನ್ನು ತಾಯಿ ಮತ್ತು ಮಕ್ಕಳ ಕಲ್ಯಾಣ ಯೋಜನೆ, ಔಷಧಗಳು ಮತ್ತು ರೋಗನಿರ್ಣಯಗಳ ಪೂರೈಕೆ, ಟಿಬಿ ನಿರ್ಮೂಲನೆ ಕಾರ್ಯಕ್ರಮಗಳು, ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗಳ ಅಡಿಯಲ್ಲಿ ಔಷಧಗಳು ಮತ್ತು ಪೌಷ್ಠಿಕಾಂಶಗಳನ್ನು ಒದಗಿಸುವ ಯೋಜನೆಗಳ ಅಡಿಯಲ್ಲಿ ಸೇವೆಗಳನ್ನು ನೀಡಲು ಮತ್ತು ರಸಗೊಬ್ಬರ ಸಹಾಯಧನ ಸೇರಿದಂತೆ ಇತರ ಪ್ರಮುಖ ಯೋಜನೆಗಳಲ್ಲಿ ಬಳಸಬಹುದು ಎಂದು ಹೇಳಿದೆ.

ಖಾಸಗಿ ವಲಯವೂ ಸಹ ಈ ಡಿಜಿಟಲ್ ವೋಚರ್‌ಗಳನ್ನು ತಮ್ಮ ಉದ್ಯೋಗಿಗಳ ಕಲ್ಯಾಣ ಮತ್ತು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮಗಳ ಭಾಗವಾಗಿ ಬಳಸಿಕೊಳ್ಳಬಹುದು ಎಂದು ಪಿಎಂಒ ತಿಳಿಸಿದೆ.

ಇ-ರುಪಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮೋದಿ, ಸರ್ಕಾರದಿಂದ ನೇರ ಲಾಭ ವರ್ಗಾವಣೆ (ಡಿಬಿಟಿ) ಯೋಜನೆಯನ್ನು ಬಲಪಡಿಸುವಲ್ಲಿ ಇ-ರುಪಿ ವೋಚರ್ ಪ್ರಮುಖ ಪಾತ್ರ ವಹಿಸಲಿದೆ. ಎಲ್ಲರಿಗೂ ಉದ್ದೇಶಿತ, ಪಾರದರ್ಶಕ ಮತ್ತು ಸೋರಿಕೆ ರಹಿತ ವಿತರಣೆಯನ್ನು ಖಾತ್ರಿಪಡಿಸಿಕೊಳ್ಳಲು ಇ-ರೂ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಗಸ್ಟ್‌‌ 5 ರಂದು ಬಿಜೆಪಿ ಸೇರಲಿರುವ ಉಚ್ಚಾಟಿತ ಬಿಎಸ್‌ಪಿ ಶಾಸಕ ಎನ್‌. ಮಹೇಶ್‌

ತಂತ್ರಜ್ಞಾನವನ್ನು ಬಡವರಿಗೆ ಸಹಾಯ ಮಾಡುವ ಸಾಧನವಾಗಿ ಬಳಸಲಾಗುತ್ತಿದೆ. ಡಿಬಿಟಿಯಲ್ಲಿ ತಂತ್ರಜ್ಞಾನವು ಪಾರದರ್ಶಕತೆಯನ್ನು ತರುತ್ತಿದೆ ಎಂದು ಅವರು ಹೇಳಿದ್ದಾರೆ.

ತಂತ್ರಜ್ಞಾನ ಅಳವಡಿಕೆ ಕುರಿತು ಮಾತನಾಡಿದ ಮೋದಿ, ಭಾರತವು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಮುನ್ನುಗ್ಗುತ್ತಿದೆ ಎಂಬುದನ್ನು ಜಗತ್ತಿಗೆ ತೋರಿಸುತ್ತಿದೆ. ಸೇವೆಗಳ ವಿತರಣೆಯಲ್ಲಿ ಆವಿಷ್ಕಾರಗಳು ಅಥವಾ ತಂತ್ರಜ್ಞಾನದ ಬಳಕೆಯಲ್ಲಿ ಭಾರತವು ಜಾಗತಿಕ ನಾಯಕ ಸ್ಥಾನಕ್ಕೇರಲು ಸಮರ್ಥವಾಗಿದೆ ಎಂದು ಹೇಳಿದ್ದಾರೆ.

ಕಳೆದ 6-7 ವರ್ಷಗಳಲ್ಲಿ ದೇಶದಾದ್ಯಂತ ಡಿಜಿಟಲ್ ಮೂಲಸೌಕರ್ಯ ಮತ್ತು ಡಿಜಿಟಲ್ ವಹಿವಾಟು ಕ್ಷೇತ್ರದಲ್ಲಾದ ಕೆಲಸವನ್ನು ಇಂದು ವಿಶ್ವವು ಶ್ಲಾಘಿಸುತ್ತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಎಲ್‌ಪಿಜಿ, ಪಡಿತರ, ಪಿಂಚಣಿ ಸೇರಿದಂತೆ 300 ಯೋಜನೆಗಳ ಪ್ರಯೋಜನಗಳನ್ನು ನೇರವಾಗಿ ಫಲಾನುಭವಿಗಳಿಗೆ ಒದಗಿಸಲು ಸರ್ಕಾರವು ನೇರ ಲಾಭ ವರ್ಗಾವಣೆಯನ್ನು ಬಳಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಆಗಸ್ಟ್‌‌ 5 ರಂದು ಬಿಜೆಪಿ ಸೇರಲಿರುವ ಉಚ್ಚಾಟಿತ ಬಿಎಸ್‌ಪಿ ಶಾಸಕ ಎನ್‌. ಮಹೇಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...