HomeUncategorizedಸೆಂಟ್ರಲ್ ವಿಸ್ತಾ ಹೊಸ ಸಂಸತ್ ಭವನಕ್ಕೆ ಡಿಸೆಂಬರ್‌ನಲ್ಲಿ ಪ್ರಧಾನಿಯಿಂದ ಅಡಿಪಾಯ!

ಸೆಂಟ್ರಲ್ ವಿಸ್ತಾ ಹೊಸ ಸಂಸತ್ ಭವನಕ್ಕೆ ಡಿಸೆಂಬರ್‌ನಲ್ಲಿ ಪ್ರಧಾನಿಯಿಂದ ಅಡಿಪಾಯ!

ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ನೇತೃತ್ವದಲ್ಲಿ 861.90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೊಸ ಸಂಸತ್ತಿನ ಕಟ್ಟಡ ನಿರ್ಮಿಸಲಾಗುತ್ತಿದೆ.

- Advertisement -
- Advertisement -

ಹೊಸದಾಗಿ ನಿರ್ಮಿಸಲಾಗುತ್ತಿರುವ ಸಂಸತ್ ಭವನಕ್ಕೆ ಡಿಸೆಂಬರ್‌ 10ಕ್ಕೆ ಪ್ರಧಾನಿ ನರೇಂದ್ರ ಮೋದಿ ಅಡಿಪಾಯ ಹಾಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ನೇತೃತ್ವದಲ್ಲಿ 861.90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೊಸ ಸಂಸತ್ತಿನ ಕಟ್ಟಡ ನಿರ್ಮಿಸಲಾಗುತ್ತಿದೆ.

ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಮತ್ತು ಭೀಮ್ ರಾವ್ ಅಂಬೇಡ್ಕರ್ ಸೇರಿದಂತೆ ಸುಮಾರು ಐದು ಪ್ರತಿಮೆಗಳನ್ನು ನಿರ್ಮಾಣ ಕಾರ್ಯದಿಂದಾಗಿ ತಾತ್ಕಾಲಿಕವಾಗಿ ಸ್ಥಳಾಂತರಿಸುವ ಸಾಧ್ಯತೆಯಿದೆ. ಯೋಜನೆ ಪೂರ್ಣಗೊಂಡ ನಂತರ ಹೊಸ ಸಂಸತ್ ಭವನ ಆವರಣದ ಪ್ರಮುಖ ತಾಣಗಳಲ್ಲಿ ಈ ಪುತ್ಥಳಿಗಳನ್ನು ಮರು ಸ್ಥಾಪಿಸಲಾಗುತ್ತದೆ ಎಂದು ಹೇಳಲಾಗಿದೆ.

ಹೊಸ ಸಂಸತ್ತಿನ ಕಟ್ಟಡಕ್ಕೆ ಶಂಕುಸ್ಥಾಪನೆ ದಿನಾಂಕ ಡಿಸೆಂಬರ್ 10ರ ಆಸುಪಾಸಿನಲ್ಲಿ ನಿಗದಿಯಾಗುವ ಸೂಚನೆಗಳಿದ್ದರೂ, ಪ್ರಧಾನಿ ಮೋದಿಯವರ ಲಭ್ಯತೆ ಆಧರಿಸಿ ದಿನಾಂಕವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯಡಿ ಹೊಸ ಕಟ್ಟಡವನ್ನು ಈಗಿರುವ ಕಟ್ಟಡದ ಸಮೀಪದಲ್ಲಿ ಹೊಸಕಟ್ಟಡ ನಿರ್ಮಿಸಲಾಗುವುದು ಮತ್ತು ನಿರ್ಮಾಣ ಕಾರ್ಯಗಳು ಪ್ರಾರಂಭವಾದಾಗಿನಿಂದ 21 ತಿಂಗಳಲ್ಲಿ ಪೂರ್ಣಗೊಳಿಸುವ ನಿರೀಕ್ಷೆಯಿದೆ.

ತ್ರಿಕೋನ ಆಕಾರದಲ್ಲಿ ನಿರ್ಮಾಣವಾಗಲಿರುವ ಸಂಸತ್ ಭವನದ ಜತೆಗೆ ಕೇಂದ್ರೀಯ ಸಚಿವಾಲಯಗಳ ಮತ್ತು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿ.ಮೀ ಉದ್ದದ ರಾಜ್‌ಪತ್‌ ಮಾರ್ಗವನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಯೋಜನೆಯ ಪ್ರಕಾರ, ಎಲ್ಲಾ ಸಂಸದರಿಗೆ ಪ್ರತ್ಯೇಕ ಕಚೇರಿಗಳನ್ನು ಹೊಂದಿರುವ ಹೊಸ ಸಂಸತ್ತಿನ ಕಟ್ಟಡವು ಇತ್ತೀಚಿನ ಡಿಜಿಟಲ್ ಸಂಪರ್ಕಸಾಧನಗಳನ್ನು ಹೊಂದಲಿದೆ. ಭವ್ಯವಾದ ಸಂವಿಧಾನ ಭವನ, ಸಂಸತ್ತಿನ ಸದಸ್ಯರಿಗೆ ವಿಶ್ರಾಂತಿ ಕೋಣೆ, ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು, ಊಟದ ಪ್ರದೇಶಗಳು ಮತ್ತು ಸಾಕಷ್ಟು ಪಾರ್ಕಿಂಗ್ ಸ್ಥಳವನ್ನು ಹೊಂದಿರಲಿದೆ.

ಈಗಿರುವ ಸಂಸತ್ ಭವನಕ್ಕೆ ಫೆಬ್ರವರಿ 12, 1921 ರಂದು ಅಡಿಪಾಯ ಹಾಕಲಾಗಿತ್ತು. ಭವನ ನಿರ್ಮಾಣಕ್ಕೆ 83 ಲಕ್ಷ ರೂಪಾಯಿ ವೆಚ್ಚವಾಗಿತ್ತು, ಸಂಸತ್ ಭವನ ಪೂರ್ಣಗೊಳ್ಳಲು ಆರು ವರ್ಷಗಳನ್ನು ತೆಗೆದುಕೊಂಡಿತು.  ಜನವರಿ 18, 1927 ರಂದು ಅಂದಿನ ಭಾರತದ ಗವರ್ನರ್ ಜನರಲ್ ಲಾರ್ಡ್ ಇರ್ವಿನ್ ಉದ್ಘಾಟನೆ ಮಾಡಿದ್ದರು. ಈಗಿನ ಸೆಂಟ್ರಲ್ ವಿಸ್ತಾಗೆ 861 ಕೋಟಿ ರೂ ವೆಚ್ಚ ಮಾಡುವ ಅಗತ್ಯವಿದೆಯೇ ಎಂಬ ಪ್ರಶ್ನೆಗಳು ಸಹ ಎದ್ದಿವೆ.


ಇದನ್ನೂ ಓದಿ: ನವೆಂಬರ್ 26-27 ಸಾರ್ವತ್ರಿಕ ಮುಷ್ಕರ: ಕೇಂದ್ರ ಮೊಂಡುತನ ಬಿಟ್ಟು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...