Homeಅಂತರಾಷ್ಟ್ರೀಯವ್ಯಾಟಿಕನ್ ಸಿಟಿಯಲ್ಲಿ ಪೋಪ್ ಭೇಟಿಯಾದ ಪ್ರಧಾನಿ ಮೋದಿ: ಭಾರತಕ್ಕೆ ಆಹ್ವಾನ

ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಭೇಟಿಯಾದ ಪ್ರಧಾನಿ ಮೋದಿ: ಭಾರತಕ್ಕೆ ಆಹ್ವಾನ

ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜಿ20 ಶೃಂಗಸಭೆಗಾಗಿ ರೋಮ್‌ಗೆ ಎರಡು ದಿನಗಳ ಭೇಟಿ ನೀಡಿದ್ದಾರೆ.

- Advertisement -
- Advertisement -

ಎರಡು ದಿನಗಳ ರೋಮ್ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಂದು ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಫ್ರಾನ್ಸಿಸ್‌ರವರನ್ನು ಭೇಟಿಯಾಗಿದ್ದಾರೆ. ವಿವಿಧ ವಿಷಯಗಳ ಕುರಿತು ಒಂದು ಗಂಟೆಗಳ ಕಾಲ ಚರ್ಚಿಸಿದ ಪ್ರಧಾನಿ, ಪೋಪ್ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಜೊತೆ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಜೊತೆಗಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿಗಳು, “ಪೋಪ್ ಫ್ರಾನ್ಸಿಸ್‌ರವರೊಂದಿಗೆ ಮುಖ್ಯ ಸಭೆ ನಡೆಸಿದೆ. ಅವರೊಂದಿಗೆ ವಿವಿಧ ವಿಷಯಗಳನ್ನು ಚರ್ಚಿಸಲು ಮತ್ತು ಅವರನ್ನು ಭಾರತಕ್ಕೆ ಆಹ್ವಾನಿಸಲು ಅವಕಾಶ ಸಿಕ್ಕಿತು” ಎಂದಿದ್ದಾರೆ.

ಪ್ರಧಾನಿ ಮತ್ತು ಪೋಪ್ ಹವಾಮಾನ ವೈಪರಿತ್ಯ ಸೇರಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಮತ್ತು ಪೋಪ್ ಜಾನ್ ಪಾಲ್ II ಭಾರತಕ್ಕೆ ಬಂದಿದ್ದು ಪೋಪ್‌ರವರ ಕೊನೆಯ ಭಾರತ ಭೇಟಿಯಾಗಿದೆ.

ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜಿ20 ಶೃಂಗಸಭೆಗಾಗಿ ರೋಮ್‌ಗೆ ಎರಡು ದಿನಗಳ ಭೇಟಿ ನೀಡಿದ್ದಾರೆ. ನಿನ್ನೆ ಅವರು ರೋಮ್ ನಲ್ಲಿನ ಗಾಂಧಿ ಪ್ರತಿಮೆ ಬಳಿ ತೆರಳಿ ಗೌರವ ಸಲ್ಲಿಸಿದ್ದರು.


ಇದನ್ನೂ ಓದಿ: ಸತತ ನಾಲ್ಕನೇ ದಿನವೂ ಪೆಟ್ರೊಲ್‌, ಡೀಸೆಲ್‌ ಬೆಲೆ ಏರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...