Homeಮುಖಪುಟಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಭೆ ಇಂದು

ಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಭೆ ಇಂದು

- Advertisement -
- Advertisement -

ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ಎರಡು ದಿನಗಳ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದು ಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳೊಂದಿಗೆ ಸಭೆ ನಡೆಸಲಿದ್ದಾರೆ. ಆಡಳಿತ ಸೇರಿದಂತೆ ಇನ್ನಿತರ ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಲಾಗುತ್ತದೆ ಎನ್ನಲಾಗಿದೆ.

ದೇಶದ 12 ರಾಜ್ಯಗಳ ಅಂದರೆ ಅಸ್ಸಾಂ, ಅರುಣಾಚಲ ಪ್ರದೇಶ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ತ್ರಿಪುರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ಮುಖ್ಯಮಂತ್ರಿಗಳೊಂದಿಗೆ ನಡೆಯುವ ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಈ ಎಲ್ಲಾ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಡಿಸೆಂಬರ್ 15 ರಂದು ರಾಮಲಲ್ಲಾನ ದರ್ಶನಕ್ಕಾಗಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ತದನಂತರ ಪ್ರಧಾನಮಂತ್ರಿಗಳ ಕಚೇರಿ (PMO) ಹೇಳಿಕೆಯಂತೆ ಇಂದು ಮಧ್ಯಾಹ್ನ 3:30 ರ ಸುಮಾರಿಗೆ ವಾರಣಾಸಿಯ ಸ್ವರ್ವೇದ್ ಮಹಾಮಂದಿರದಲ್ಲಿ ಸದ್ಗುರು ಸದಾಫಲ್ದಿಯೋ ವಿಹಂಗಮ ಯೋಗ ಸಂಸ್ಥಾನದ 98 ನೇ ವಾರ್ಷಿಕೋತ್ಸವದ ಆಚರಣೆಯಲ್ಲಿ ಸಹ ಮೋದಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಸೋಮವಾರ ವಾರಣಾಸಿಯಲ್ಲಿ ಸೋಮವಾರ ಸುಮಾರು ₹ 339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯ 1 ನೇ ಹಂತವನ್ನು ಉದ್ಘಾಟಿಸಿದರು.

ಸೋಮವಾರ ತಡರಾತ್ರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೊತೆಯಲ್ಲಿ ವಾರಣಾಸಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಮೋದಿಯವರು ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.


ಇದನ್ನೂ ಓದಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

0
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದ ಮೇರೆಗೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪೊಲೀಸರು "ಕಿರುಕುಳ" ಮತ್ತು "ಬೆದರಿಕೆ" ಹಾಕುತ್ತಿದ್ದಾರೆ  ಎಂದು...