Homeಮುಖಪುಟಗುಜರಾತ್ ಚುನಾವಣೆ ದಿನವೇ ಪ್ರಧಾನಿ ಮೋದಿ ರೋಡ್ ಶೋ: ಕಾಂಗ್ರೆಸ್ ಆರೋಪ

ಗುಜರಾತ್ ಚುನಾವಣೆ ದಿನವೇ ಪ್ರಧಾನಿ ಮೋದಿ ರೋಡ್ ಶೋ: ಕಾಂಗ್ರೆಸ್ ಆರೋಪ

ಮೂಲಭೂತ ಸೌಲಭ್ಯಗಳನ್ನು ನೀಡಿಲ್ಲ ಎಂದು ಆರೋಪಿಸಿ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ನಾಲ್ಕು ಗ್ರಾಮಗಳ ಮತದಾರರು ಚುನಾವಣೆ ಬಹಿಷ್ಕರಿಸಿದ್ದಾರೆ.

- Advertisement -
- Advertisement -

ಇಂದು ಗುಜರಾತ್‌ನ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಮತಚಲಾಯಿಸಿದ್ದಾರೆ. ಆದರೆ ಪ್ರಧಾನಿ ಮೋದಿ ಮತಗಟ್ಟೆಗೆ ಆಗಮಿಸುವ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಸುಮಾರು ಎರಡೂವರೆ ಗಂಟೆಗಳ ಕಾಲ ರೋಡ್‌ ಶೋ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ.

ಪ್ರಧಾನಿ ಮೋದಿಯವರು ಅಹಮದಬಾದ್‌ನ ರಾಣಿಪ್‌ನ ನಿಶಾನ್ ಪಬ್ಲಿಕ್ ಶಾಲೆಯಲ್ಲಿ ಮತದಾನ ಮಾಡಿದರು. ಆದರೆ ಅದಕ್ಕೂ ಮುನ್ನ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಸತತ ಎರಡೂವರೆ ಗಂಟೆಗಳ ಕಾಲ ರೋಡ್ ಶೋ ನಡೆಸಿದ್ದಾರೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು. ಆದರೆ ಚುನಾವಣಾ ಆಯೋಗವೇ ಆಳುವ ಸರ್ಕಾರದ ಭಾರೀ ಒತ್ತಡದಲ್ಲಿರುವಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ತಿಳಿಸಿದ್ದಾರೆ.

ಇಂದು ನಮ್ಮ ಬುಡಕಟ್ಟು ನಾಯಕ ಮತ್ತು ದಂತದ ಶಾಸಕ (ಕಾಂತಿ ಖಾರಾಡಿ) ರಕ್ಷಣೆ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಆದರೆ ಯಾವುದೇ ರೀತಿಯಲ್ಲಿ ಸ್ಪಂದಿಸಲಿಲ್ಲ. ಆನಂತರ ನಮ್ಮ ನಾಯಕರ ಮೇಲೆ ಬಿಜೆಪಿಯ 24 ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಗುಜರಾತ್‌ನಲ್ಲಿ ಮದ್ಯ ನಿಷೇಧಿಸಿದ್ದರೂ ಸಹ ಬಿಜೆಪಿಯು ಎಲ್ಲೆಡೆ ಮದ್ಯ ವಿತರಿಸಿತು. ಆದರೆ ಚುನಾವಣಾ ಆಯೋಗ ಈ ಬಗ್ಗೆಯೂ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದ್ದಾರೆ.

ಚುನಾವಣೆ ಬಹಿಷ್ಕರಿಸಿದ ನಾಲ್ಕು ಗ್ರಾಮಗಳು

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ನಾಲ್ಕು ಗ್ರಾಮಗಳ ಮತದಾರರು ತಮ್ಮ ಗ್ರಾಮಗಳಿಗೆ ಯಾವುದೇ ಮೂಲಭೂತ ಸೌಲಭ್ಯ ಒದಗಿಸಿಲ್ಲ ಮತ್ತು ಆ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಚುನಾವಣೆ ಬಹಿಷ್ಕರಿಸಿವೆ. ಬಿಜೆಪಿ ಶಾಸಕರಿರುವ ಖೇರಾಳು ತಾಲೂಕಿನ ಮೂರು ಗ್ರಾಮದ ಜನರು ತಮ್ಮ ಸಮಸ್ಯೆಗಳು ದಶಕಗಳಿಂದ ಬಗೆಹರಿಯದೆ ಉಳಿದಿವೆ ಎಂದು ಪ್ರತಿಪಾದಿಸಿ, ಮತದಾನದಿಂದ ದೂರ ಉಳಿದಿದ್ದಾರೆ. ಅದೇ ರೀತಿ ಕಾಂಗ್ರೆಸ್ ಶಾಸಕರಿರುವ ಬೇಚರಜಿ ತಾಲೂಕಿನ ಬರಿಯಾಫ್ ಗ್ರಾಮಸ್ಥರೂ ಸಹ ಚುನಾವಣೆ ಬಹಿಷ್ಕರಿಸಿದ್ದಾರ. ಕಳೆದ ಚುನಾವಣೆಯಲ್ಲಿ ಮೆಹ್ಸಾನಾ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿತ್ತು.

ಇದನ್ನೂ ಓದಿ: ಗುಜರಾತ್‌ 2ನೇ ಹಂತದ ಚುನಾವಣೆ: ಘಟನಾನುಘಟಿಗಳ ಭವಿಷ್ಯ ನಿರ್ಧಾರ ಇಂದು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...