Homeಮುಖಪುಟಮೋದಿ ದೇಶದಲ್ಲಿ 'ಭ್ರಷ್ಟಾಚಾರದ ಶಾಲೆ'ಯನ್ನು ನಡೆಸುತ್ತಿದ್ದಾರೆ: ರಾಹುಲ್‌ ಗಾಂಧಿ ವಾಗ್ಧಾಳಿ

ಮೋದಿ ದೇಶದಲ್ಲಿ ‘ಭ್ರಷ್ಟಾಚಾರದ ಶಾಲೆ’ಯನ್ನು ನಡೆಸುತ್ತಿದ್ದಾರೆ: ರಾಹುಲ್‌ ಗಾಂಧಿ ವಾಗ್ಧಾಳಿ

- Advertisement -
- Advertisement -

ಚುನಾವಣಾ ಬಾಂಡ್‌ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್‌ ಗಾಂಧಿ ವಾಗ್ಧಾಳಿಯನ್ನು ನಡೆಸಿದ್ದು, ಮೋದಿ ದೇಶದಲ್ಲಿ ‘ಭ್ರಷ್ಟಾಚಾರದ ಶಾಲೆ’ಯನ್ನು ನಡೆಸುತ್ತಿದ್ದಾರೆ ಮತ್ತು ಸಂಪೂರ್ಣ ಭ್ರಷ್ಟಾಚಾರ ವಿಜ್ಞಾನ” ವಿಷಯದಲ್ಲಿ ಎಲ್ಲಾ ಅಧ್ಯಾಯಗಳನ್ನು ಕಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಎಕ್ಸ್’ನಲ್ಲಿ ಈ ಕುರಿತು ರಾಹುಲ್‌ ಗಾಂಧಿ ಪೋಸ್ಟ್‌ ಮಾಡಿದ್ದು,  ಚುನಾವಣಾ ಬಾಂಡ್‌ಗಳ ಕುರಿತು ಬಿಜೆಪಿಯನ್ನು ಟೀಕಿಸುವ ಹೊಸ ಜಾಹೀರಾತಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ನರೇಂದ್ರ ಮೋದಿ ಅವರು ದೇಶದಲ್ಲಿ ‘ಭ್ರಷ್ಟಾಚಾರದ ಶಾಲೆ’ ನಡೆಸುತ್ತಿದ್ದಾರೆ, ಅಲ್ಲಿ ಅವರು  ‘ಇಡೀ ಭ್ರಷ್ಟಾಚಾರ ವಿಜ್ಞಾನ’ ವಿಷಯದ ಅಡಿಯಲ್ಲಿ ‘ಡೊನೇಶನ್‌ ವ್ಯವಹಾರ’ ಸೇರಿದಂತೆ ಎಲ್ಲಾ ಅಧ್ಯಾಯಗಳನ್ನು ವಿವರವಾಗಿ ಬೋಧಿಸುತ್ತಾರೆ ಎಂದು ಹೇಳಿದ್ದಾರೆ.

ದಾಳಿಗಳ ಮೂಲಕ ಡೊನೇಶನ್‌ ಸಂಗ್ರಹವನ್ನು ಹೇಗೆ ಮಾಡಲಾಗುತ್ತದೆ ಮತ್ತು ಡೊನೇಶನ್‌ ಪಡೆದ ನಂತರ ಹೇಗೆ ಕಾಂಟ್ರಾಕ್ಟ್‌ಗಳನ್ನು ನೀಡಲಾಗುತ್ತದೆ ಎಂಬುದರ ಕುರಿತು ಪ್ರಧಾನ ಮಂತ್ರಿ ಅಧ್ಯಾಯಗಳನ್ನು ಕಲಿಸುತ್ತಿದ್ದಾರೆ. ಭ್ರಷ್ಟರನ್ನು ತೊಳೆಯುವ ವಾಷಿಂಗ್ ಮೆಷಿನ್ ಹೇಗೆ ಕೆಲಸ ಮಾಡುತ್ತದೆ? ಏಜೆನ್ಸಿಗಳನ್ನು ರಿಕವರಿ ಏಜೆಂಟ್‌ಗಳನ್ನಾಗಿ ಮಾಡಿ ‘ಜಾಮೀನು ಮತ್ತು ಜೈಲು’ ಆಟ ಹೇಗೆ ಎಂದು ಕಲಿಸುತ್ತಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

‘ಭ್ರಷ್ಟರ ಗುಹೆ’ಯಾಗಿ ಮಾರ್ಪಟ್ಟಿರುವ ಬಿಜೆಪಿ ತನ್ನ ನಾಯಕರಿಗೆ ಈ ‘ಕ್ರ್ಯಾಶ್ ಕೋರ್ಸ್’ ಅನ್ನು ಕಡ್ಡಾಯಗೊಳಿಸಿದೆ ಮತ್ತು ಅದಕ್ಕೆ ದೇಶವೇ ಬೆಲೆ ತೆರುತ್ತಿದೆ.  I.N.D.I.A. ಬ್ಲಾಕ್ ಸರ್ಕಾರವು ಈ “ಭ್ರಷ್ಟಾಚಾರದ ಶಾಲೆ” ಯನ್ನು ಮುಚ್ಚಲಿದೆ ಮತ್ತು ಈ ಕೋರ್ಸ್‌ನ್ನು ಶಾಶ್ವತವಾಗಿ ಮುಚ್ಚಲಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇದೇ ಜಾಹೀರಾತನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದು, ‘ಹಫ್ತಾ ವಸೂಲಿ’ ಸರ್ಕಾರವನ್ನು ಆಯ್ಕೆ ಮಾಡಬೇಡಿ, ಬದಲಾವಣೆಯನ್ನು ಆಯ್ಕೆ ಮಾಡಿಕೊಳ್ಳಿ, ಕಾಂಗ್ರೆಸ್‌ಗೆ ಮತ ನೀಡಿ’ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿ ತೀರ್ಪು ನೀಡಿತು. ಸುಪ್ರೀಂ ಕೋರ್ಟ್‌ನ ನಿರ್ದೇಶನದ ನಂತರ ಚುನಾವಣಾ ಬಾಂಡ್‌ಗಳ ಅಧಿಕೃತ ಮಾರಾಟಗಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಾರ್ವಜನಿಕಗೊಳಿಸಿತ್ತು. ಚುನಾವಣಾ ಬಾಂಡ್‌ಗಳ ದತ್ತಾಂಶವು ಬಿಜೆಪಿಯ ಕೊಡು ಕೊಳ್ಳುವಿಕೆ ಮತ್ತು ದೇಣಿಗೆಗೆ ಪ್ರತಿಯಾಗಿ ಕಂಪನಿಗಳಿಗೆ ‘ರಕ್ಷಣೆ’ಯಂತಹ ‘ಭ್ರಷ್ಟ ತಂತ್ರ’ಗಳನ್ನು ಬಹಿರಂಗಪಡಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನು ಓದಿ: ಕೀಟನಾಶಕ ರಾಸಾಯನಿಕ ಬಳಕೆ ಆರೋಪ: ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ನಿಷೇಧಿಸಿದ ಸಿಂಗಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...