ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

ಸರ್ಕಾರಿ ಕಂಪನಿಗಳ ಖಾಸಗೀಕರಣದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿದಾಳಿ ನಡೆಸಿದ್ದಾರೆ. ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾತ್ರ ಇದರ ಸುಳಿವು ಸಹ ಇಲ್ಲವೇನೋ ಎಂಬಂತೆ ನಟಿಸುತ್ತಿದೆ. ಪ್ರಧಾನಿ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ಪ್ರಣಾಳಿಕೆಯ ವಿಚಾರಗಳು ಮತ್ತು ಅಂಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಧಾನಿ ಮೋದಿ ಹೇಳಿಕೆಯನ್ನು ಖಂಡಿಸಿ, ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಗ್ರಾಮೀಣ ಪ್ರದೇಶಗಳು ಹಲವು ಸಮಸ್ಯೆಗಳಿಂದ ಬಳಲುತ್ತಿವೆ. ದೇಶದ ಅರ್ಥವ್ಯವಸ್ಥೆ ನೆಲಕಚ್ಚಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಇದ್ಯಾವುದರ ಅರಿವೂ ಇಲ್ಲವೆಂಬಂತೆ ನಟಿಸುತ್ತಿದೆ. ಪ್ರಧಾನಿ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಕೆಲವು ಅಂಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಸ್ಯೆಗೆ ಕಡಿವಾಣ ಹಾಕಬೇಕು ಎಂದಿದ್ದಾರೆ. ಕಳೆದ ಆರು ವರ್ಷಗಳಲ್ಲೇ ಭಾರತದ ಜಿಡಿಪಿ ಪ್ರಮಾಣ ಶೇ. 5ರಷ್ಟು ಕುಸಿದಿದೆ. ಆರ್ಥಿಕತೆ ಬೆಳವಣಿಗೆಯಿಲ್ಲದೆ, ಮಂದಗತಿಯಲ್ಲಿ ಸಾಗುತ್ತಿದೆ. ಕಳೆದ ಐದು ತಿಂಗಳಲ್ಲಿ ಆಟೋಮೊಬೈಲ್ ವಲಯ ಸೇರಿದಂತೆ ಅನೇಕ ವಲಯಗಳು ಉತ್ಪಾದನೆ ಮತ್ತು ಬೇಡಿಕೆ ಕುಸಿದಿದೆ.

ಕೇಂದ್ರ ಸರ್ಕಾರ ಆರ್ಥಿಕತೆಯ ಸುಧಾರಣೆಗೆ ಮತ್ತು ಪುನರುಜ್ಜೀವನಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ ಸಾರ್ವಜನಿಕ ಬ್ಯಾಂಕ್ ಗಳನ್ನು ವಿಲೀನಗೊಳಿಸಿದೆ. ಕಾರ್ಪೋರೇಟ್ ತೆರಿಗೆಯನ್ನು ಕಡಿತಗೊಳಿಸಿದೆ. ಕಾಂಗ್ರೆಸ್ ಮತ್ತು ವಿಪಕ್ಷಗಳು ಕೇಂದ್ರ ಸರ್ಕಾರದ ಆರ್ಥಿಕತೆ ನೀತಿಯ ಧೋರಣೆಯನ್ನು ಖಂಡಿಸಿವೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮಾತನಾಡಿ, ಮಂದಗತಿಯಲ್ಲಿ ಸಾಗುತ್ತಿರುವ ಆರ್ಥಿಕತೆ ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗಲಿದೆ. ಹೀಗೆ ನಡೆದರೆ 2024ರ ವೇಳೆಗೆ 5 ಟ್ರಿಲಿಯನ್ ಡಾಲರ್ ಅಭಿವೃದ್ಧಿ ಕಾಣುವುದು ಅಸಾಧ್ಯ ಎಂದು ವ್ಯಂಗ್ಯವಾಡಿದ್ದರು.

ಇನ್ನು ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಯುಕ್ತ ರ್ಯಾಲಿ ನಡೆಸಿರುವ ರಾಹುಲ್ ಗಾಂಧಿ, ಕುಸಿಯುತ್ತಿರುವ ಆರ್ಥಿಕತೆ, ನಿರುದ್ಯೋಗ ಮತ್ತು ಉತ್ಪಾದನೆ, ಬೇಡಿಕೆ, ಹೂಡಿಕೆ ಕುಸಿತದ ಪ್ರಶ್ನೆಗಳನ್ನು ಮುಂದಿಟ್ಟು, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ ಸಾರ್ವಜನಿಕ ವಲಯದ ಉದ್ಯಮಗಳನ್ನು ಮೋದಿ ಸರ್ಕಾರ ಸೂಟು-ಬೂಟು ಗೆಳೆಯರಿಗೆ ಮಾರಿಕೊಳ್ಳುತ್ತಿದೆ. ಸಾವಿರಾರು ಕಾರ್ಮಿಕರು ಅನಿಶ್ಚಿತತೆ ಮತ್ತು ಉದ್ಯೋಗ ಕಳೆದುಕೊಳ್ಳುವ ಭಯದಲ್ಲಿ ಬದುಕುತ್ತಿದ್ದಾರೆ. ದೇಶವನ್ನು ಲೂಟಿ ಮಾಡುತ್ತಿರುವ ಇಂತಹ ಕ್ರಮಗಳನ್ನು ವಿರೋಧಿಸುತ್ತೇನೆ. ಎಂದೆಂದಿಗೂ ಕಾರ್ಮಿಕರ ಹೆಗಲಿಗೆ ಹೆಗಲು ಕೊಟ್ಟು ಹೋರಾಟ ನಡೆಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here