Homeಮುಖಪುಟಅಯೋಧ್ಯೆ ರಾಮಮಂದಿರ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಬಾರದು: ಮೌಲಾನಾ ಮಹಮೂದ್ ಮದನಿ

ಅಯೋಧ್ಯೆ ರಾಮಮಂದಿರ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಬಾರದು: ಮೌಲಾನಾ ಮಹಮೂದ್ ಮದನಿ

- Advertisement -
- Advertisement -

2024ರ ಜನವರಿಯಲ್ಲಿ ಅಯೋಧ್ಯೆ ಉದ್ಘಾಟನೆಗೊಳ್ಳಲಿದ್ದು, ಪ್ರಧಾನಿ ಮೋದಿ ಅವರನ್ನು ಕೂಡ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಆದರೆ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಜಮಿಯತ್ ಉಲಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಹೇಳಿದ್ದಾರೆ.

”ಪ್ರಧಾನಿ ಮೋದಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಮಾತ್ರವಲ್ಲದೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು. ಧಾರ್ಮಿಕ ವಿಧಿವಿಧಾನಗಳು ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾಗಬೇಕು ಮತ್ತು ಧರ್ಮಪಾಲಕರು ಅಂದರೆ ಧಾರ್ಮಿಕ ವಿಚಾರಗಳನ್ನು ಆಚರಣೆ ಮಾಡುವವರು ಮಾತ್ರ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು” ಎಂದು ಹೇಳಿದ್ದಾರೆ.

”ಬಾಬರಿ ಮಸೀದಿಯ ಬಗ್ಗೆ ಸುಪ್ರೀಂ ಕೋರ್ಟ್​​ ನೀಡಿರುವ ತೀರ್ಪು ಕಾನೂನು ಮತ್ತು ಐತಿಹಾಸಿಕ ಸತ್ಯಗಳಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

”ಅಯೋಧ್ಯೆ ವಿವಾದದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸರಿ ಎಂದು ನಾವು ಒಪ್ಪಿಕೊಳ್ಳುವುದಿಲ್ಲ. ಈ ತೀರ್ಪು ಕಾನೂನಿನ ಪ್ರಕಾರ ಸರಿಯಿಲ್ಲ. ಇದನ್ನು ನಾವು ಒಪ್ಪಲು ಸಾಧ್ಯವಿಲ್ಲ. ತಪ್ಪು ತತ್ವದ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ರಾಮಮಂದಿರದ ಪ್ರತಿಷ್ಠಾಪನೆ ಕಾರ್ಯಕ್ರಮವು 22 ಜನವರಿ 2024 ರಂದು ನಡೆಯಲಿದೆ. ಮಧ್ಯಾಹ್ನ 12.30ರ ಸುಮಾರಿಗೆ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಅಯೋಧ್ಯೆಯಲ್ಲಿ ಭರ ಸಿದ್ಧತೆಗಳು ನಡೆಯುತ್ತಿದೆ. ರಾಮ್ಲಾಲಾ ಹೊಸ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು. ಈಗಾಗಲೇ ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಗಾಝಾದ ಕದನ ವಿರಾಮ ಮತದಾನದಿಂದ ಭಾರತ ದೂರ: ಆಘಾತ, ನಾಚಿಕೆಯಾಗುತ್ತಿದೆ ಎಂದ ಪ್ರಿಯಾಂಕಾ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...